KSRTC ಬಸ್​ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಕೊಡಗು ಮೂಲದ ದಂಪತಿ ಸಾವು

| Updated By: ಗಂಗಾಧರ​ ಬ. ಸಾಬೋಜಿ

Updated on: Jul 01, 2023 | 7:08 PM

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ರಂಗನಕೊಪ್ಪಲು ಗೇಟ್​ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್​ಆರ್​ಟಿಸಿ ಬಸ್​ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ಕೊಡಗು ಮೂಲದ ದಂಪತಿ ಮೃತಪಟ್ಟಿದ್ದಾರೆ.

KSRTC ಬಸ್​ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಕೊಡಗು ಮೂಲದ ದಂಪತಿ ಸಾವು
ಪ್ರಾತಿನಿಧಿಕ ಚಿತ್ರ
Follow us on

ಮೈಸೂರು: KSRTC ಬಸ್​ ಹಾಗೂ ಕಾರು ಮುಖಾಮುಖಿ ಡಿಕ್ಕಿ (collision) ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ರಂಗನಕೊಪ್ಪಲು ಗೇಟ್​ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರಂತ ಸಂಭವಿಸಿದೆ. ನಿವೃತ್ತ ಪ್ರಾಂಶುಪಾಲ ಹೆಚ್.ಬಿ.ಬೆಳ್ಳಿಯಪ್ಪ(66) ಸ್ಥಳದಲ್ಲೇ ಮೃತಪಟ್ಟರೆ, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪತ್ನಿ ವೀಣಾ ಕೊನೆಯುಸಿರೆಳೆದಿದ್ದಾರೆ. ಮೈಸೂರಿನಿಂದ ಮಡಿಕೇರಿಗೆ ಕಾರಿನಲ್ಲಿ ಬೆಳ್ಳಿಯಪ್ಪ ದಂಪತಿ ತೆರಳುತ್ತಿದ್ದರು. ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈಜಲು ತೆರಳಿದ್ದ ಯುವಕ ನೀರುಪಾಲು

ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ಚಿಕ್ಕನಹಳ್ಳಿ ಬಳಿ ಕಲ್ಲಿನ ಕ್ವಾರಿಯಲ್ಲಿ ಈಜಲು ತೆರಳಿದ್ದ ಬಳ್ಳಾರಿ ಮೂಲದ ಮೊಹಮ್ಮದ್ ತವಬ್ ರಹೀಮ್(19) ಸಾವನ್ನಪ್ಪಿದ್ದಾನೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಮದುವೆ ವಿಚಾರ ಮುಚ್ಚಿಟ್ಟಿದ್ದಕ್ಕೆ ಎರಡು ಜೀವ ಬಲಿ! ಯುವತಿ ಆತ್ಮಹತ್ಯೆ ಮಾಡಿಕೊಳ್ತಿದ್ದಂತೆ, ನೇಣಿಗೆ ಶರಣಾದ ವಿವಾಹಿತ ವ್ಯಕ್ತಿ: ಆತನ ಪತ್ನಿ ಇನ್ನು ಒಂಟಿ

ನಿತ್ಯ ಕುಡಿದು ಬಂದು ಕಿರುಕುಳ, ತಂದೆಯಿಂದಲೇ ಮಗನ ಹತ್ಯೆ

ದೊಡ್ಡಬಳ್ಳಾಪುರ: ನಿತ್ಯ ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಮಗನನ್ನು ತಂದೆ ಹತ್ಯೆ ಮಾಡಿರುವಂತಹ  ಘಟನೆ ಬೆಂಗಳೂರು ಗ್ರಾ. ಜಿಲ್ಲೆ‌ ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಗನ ಕೈಕಾಲು ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಪುತ್ರ ಆದರ್ಶ್​(28)ನನ್ನು ಹತ್ಯೆ ಮಾಡಿದ ತಂದೆ ಜಯರಾಮಯ್ಯ. ನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಹಣ ಕೊಡಲಿಲ್ಲ ಅಂತಾ ತಾಯಿ ಮೇಲೆ ಹಲ್ಲೆ ಮಾಡಿದ್ದ. ದೊಡ್ಡಬೆಳವಂಗಲ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bengaluru: ದೋಹಾ-ಬೆಂಗಳೂರು ವಿಮಾನದಲ್ಲಿ 13 ವರ್ಷದ ಬಾಲಕಿಗೆ ಕಿರುಕುಳ ನೀಡಿದ ವ್ಯಕ್ತಿ ಬಂಧನ

ಚೆಕ್​ಡ್ಯಾಮ್​ನಲ್ಲಿ ಈಜಲು ಹೋಗಿ ಕುರಿಗಾಹಿ ಸಾವು

ದಾವಣಗೆರೆ: ಈಜಲು ಹೋಗಿ ಕುರಿಗಾಹಿ ಬಾಲಕ ಸಾವನ್ನಪ್ಪಿರುವಂತಹ ಘಟನೆ ನ್ಯಾಮತಿ‌‌ ತಾಲೂಕಿನ ಮರಿಗೊಡನಹಳ್ಳಿ ಗ್ರಾಮದ ಬಳಿಯ ಚೆಕ್​ಡ್ಯಾಮ್​ನಲ್ಲಿ ನಡೆದಿದೆ. ಬೀರಪ್ಪ(16) ಮೃತ ಕುರಿಗಾಹಿ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಚೆಕ್​ಡ್ಯಾಮ್​ನಿಂದ ಮೃತ ಬಾಲಕನ ಶವವನ್ನು ಹೊರತೆಗೆದಿದ್ದಾರೆ. ಈ ಕುರಿತು ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:53 pm, Sat, 1 July 23