AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಮಠ ಸ್ವಾಮೀಜಿ ಭಯಾನಕ ಭವಿಷ್ಯ: ಭಾರತಕ್ಕೆ ದೊಡ್ಡ ಗಂಡಾಂತರ, ರಾಜ್ಯ-ಕೇಂದ್ರದಲ್ಲಿ ಅಧಿಕಾರದಲ್ಲಿರುವವರಿಗೆ ತೊಂದರೆ!

Kodi Mutt Swamiji Prediction; ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭಾರತಕ್ಕೆ ಬಹುದೊಡ್ಡ ಗಂಡಾಂತರ ಎದುರಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ರಾಜ್ಯ-ಕೇಂದ್ರದಲ್ಲಿ ಅಧಿಕಾರದಲ್ಲಿರುವವರಿಗೆ ತೊಂದರೆ ಎದುರಾಗಲಿದೆ ಎಂದೂ ಅವರು ಹೇಳಿದ್ದು, ಯುದ್ಧಗಳು ಮುಂದುವರಿಯಲಿವೆ, ಹವಾಮಾನ ವೈಪರೀತ್ಯಗಳು ಹೆಚ್ಚಾಗಲಿವೆ ಹಾಗೂ ರಾಜಕೀಯ ಅಸ್ಥಿರತೆ ಉಂಟಾಗಲಿದೆ ಎಂದಿದ್ದಾರೆ. ಸ್ವಾಮೀಜಿ ಭವಿಷ್ಯದ ವಿಡಿಯೋ ಹಾಗೂ ವಿವರ ಇಲ್ಲಿದೆ.

ಕೋಡಿಮಠ ಸ್ವಾಮೀಜಿ ಭಯಾನಕ ಭವಿಷ್ಯ: ಭಾರತಕ್ಕೆ ದೊಡ್ಡ ಗಂಡಾಂತರ, ರಾಜ್ಯ-ಕೇಂದ್ರದಲ್ಲಿ ಅಧಿಕಾರದಲ್ಲಿರುವವರಿಗೆ ತೊಂದರೆ!
ಕೋಡಿಮಠ ಸ್ವಾಮೀಜಿ
ರಾಮ್​, ಮೈಸೂರು
| Edited By: |

Updated on:Jul 15, 2025 | 3:28 PM

Share

ಮೈಸೂರು, ಜುಲೈ 15: ಭಾರತಕ್ಕೆ ಬಹುದೊಡ್ಡ ಗಂಡಾಂತರ ಕಾದಿದೆ. ವಿಶ್ವವೇ ತಿರುಗಿ ನೋಡುವ ಮಟ್ಟಿನ ಆಘಾತ ಎದುರಾಗಲಿದೆ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Kodi Mutt Swamiji) ಭವಿಷ್ಯ ನುಡಿದಿದ್ದಾರೆ. ಮೈಸೂರಿನ ನಮನ್ ಫೌಂಡೇಶನ್ ವತಿಯಿಂದ ನೂತನವಾಗಿ ನಿರ್ಮಾಣವಾಗಲಿರುವ ಧ್ಯಾನ ಕೇಂದ್ರದ ಸ್ಥಳಕ್ಕೆ ಭೇಟಿ ನೀಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವವರಿಗೆ ಮುಂದಿನ ದಿನಗಳಲ್ಲಿ ತೊಂದರೆ ಎದುರಾಗಲಿದೆ ಎಂದು ಹೇಳಿದರು. ಮುಂದಾಗುವ ಸಮಸ್ಯೆಗಳನ್ನು ಅರಿತುಕೊಂಡು ಈಗಲೇ ಪರಿಹಾರ ಮಾಡಿಕೊಂಡರೆ ಸೂಕ್ತ. ಇಲ್ಲವಾದಲ್ಲಿ ಸಮಸ್ಯೆ ಇದೆ ಎಂದು ಅವರು ಹೇಳಿದ್ದಾರೆ.

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿ ಶ್ರೀ

ಸಾಮಾನ್ಯವಾಗಿ ಯುಗಾದಿ ಮತ್ತು ಸಂಕ್ರಾಂತಿ ಸಂದರ್ಭದಲ್ಲಿ ಮುನ್ಸೂಚನೆ ಫಲಗಳನ್ನು ತಿಳಿಸಲಾಗುತ್ತದೆ. ಯುಗಾದಿ ಸಂದರ್ಭದಲ್ಲಿ ಮಳೆ, ಬೆಳೆ ಇತ್ಯಾದಿಗಳ ಬಗ್ಗೆ ಮುನ್ಸೂಚನೆ ನೀಡಲಾಗುತ್ತದೆ. ಸಂಕ್ರಾಂತಿ ಸಮಯದಲ್ಲಿ ಆಡಳಿತ, ರಾಜಕಾರಣ ಇತ್ಯಾದಿಗಳ ಫಲ ನೋಡಿಕೊಂಡು ಹೇಳುತ್ತೇವೆ. ಸಂಕ್ರಾಂತಿವರೆಗೆ ಏನು ತೊಂದರೆ ಇಲ್ಲ. ಆಮೇಲೆ, ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಕೊಡಿ ಶ್ರೀ ಹೇಳಿದರು.

ಕೊಡಿ ಶ್ರೀಗಳ ಭವಿಷ್ಯವಾಣಿ ವಿಡಿಯೋ ಇಲ್ಲಿದೆ

ಇದನ್ನೂ ಓದಿ
Image
ಚಿಕ್ಕತಿರುಪತಿ ದೇಗುಲದಲ್ಲಿ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Image
ಕೂಡಲಸಂಗಮ ಪೀಠಕ್ಕೆ ಬೀಗ, ಈವರೆಗೆ ಏನೇನಾಯ್ತು? ಇಲ್ಲಿದೆ ಸಮಗ್ರ ವಿವರ
Image
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
Image
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ

ಯುದ್ಧಗಳು ಮುಂದುವರೆಯಲಿವೆ. ಮನಸುಗಳು ನಿಂತಾಗ ಮಾತ್ರ ಯುದ್ಧ ನಿಲ್ಲುತ್ತದೆ. ಮನುಷ್ಯ ಮೌನವಾಗಿದ್ದರೆ ಹೆಚ್ಚು ಜ್ಞಾನ ಸಂಪಾದನೆ ಮಾಡಬಹುದು. 84 ಲಕ್ಷ ಜೀವ ರಾಶಿಗಳಲ್ಲಿ ಆತ್ಮ ಕಡೆಯದಾಗಿದ್ದು, ಮಾನವನಿಗೆ ಜ್ಞಾನ ಹಾಗೂ ವಿವೇಕ ನೀಡಲಾಗಿದೆ. ಇದನ್ನು ಸನ್ಮಾರ್ಗದಲ್ಲಿ ಬಳಸಿಕೊಂಡಾಗ ಮೋಕ್ಷ ಪ್ರಾಪ್ತಿಯಾಗುತ್ತದೆ. ಧ್ಯಾನ ಕೇಂದ್ರಗಳು ಅಧ್ಯಾತ್ಮಿಕ ಹಾಗೂ ಧಾರ್ಮಿಕ ಬೆಳವಣಿಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ಕೋಡಿಮಠ ಸ್ವಾಮೀಜಿ ಹೇಳಿದರು.

ಪ್ರಕೃತಿ ಹಾಗೂ ವೃಕ್ಷಗಳಿಗೆ ತನ್ನದೇ ಆದ ಅಘಾದ ಶಕ್ತಿ ಇದೆ. ಪಂಚತಂತ್ರ ವೃಕ್ಷಗಳಲ್ಲಿ ಹೆಚ್ಚು ಆಮ್ಲಜನಕ ಉತ್ಪಾದನೆಯಾಗುತ್ತದೆ. ಅವು ದೈವ ವೃಕ್ಷಗಳಾಗಿವೆ ಎಂದು ಸ್ವಾಮೀಜಿ ಹೇಳಿದರು.

ಮೂರು ವಾರಗಳ ಹಿಂದಷ್ಟೇ ಅವರು ಇದೇ ರೀತಿಯ ಭವಿಷ್ಯವನ್ನು ಹಾಸನದಲ್ಲಿ ಹೇಳಿದ್ದರು. ಮೇಘಸ್ಫೋಟ, ಜಲಪ್ರಳಯ ಹಾಗೂ ವಾಯುವಿನಿಂದ ಆಪತ್ತು ಬರುತ್ತದೆ. ಮನುಷ್ಯ ಓಡಾಡುತ್ತಲೇ ಸಾಯುತ್ತಾನೆ. ಜನ ಜೀವನ ಅಸ್ಥಿರಗೊಳ್ಳಲಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ರಾಜ್ಯ, ದೇಶಕ್ಕೆ ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭಯಾನಕ ಭವಿಷ್ಯ

ಮೇ ತಿಂಗಳಲ್ಲಿ ಬೆಳಗಾವಿಯಲ್ಲಿ ಮಾತನಾಡಿದ್ದ ಸ್ವಾಮೀಜಿ, ಲೋಕಕ್ಕೆ ಜಲ, ವಾಯು ಗಂಡಾಂತರ ಎದುರಾಗಲಿದೆ ಎಂದಿದ್ದರು. ಅಷ್ಟೇ ಅಲ್ಲದೆ, ಹಿಮಾಲಯ ಕರಗಿಹೋಗಲಿದೆ. ಮೇಘಸ್ಫೋಟ ಆಗುವ ಸಾಧ್ಯತೆಗಳಿವೆ. ಭೂಕಂಪಗಳು ಸಂಭವಿಸಲಿವೆ ಎಂದಿದ್ದರು. ರಾಜಕೀಯ ಮುಖಂಡರಿಗೆ ಸಾವಿನ ಭಯ ಇದೆ ಎಂದು ಹೇಳಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:07 pm, Tue, 15 July 25

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ