AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಮಾತಾಡಿದ್ದಕ್ಕೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣಗೆ ಬೆದರಿಕೆ ಕರೆ: ಕಾಂಗ್ರೆಸ್​ ದೂರು

ಇತ್ತೀಚೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಮಾತಾಡಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಲಾಗಿದೆ. ಹಾಗಾಗಿ ಬೆದರಿಕೆ ಕರೆ ಮಾಡಿದವರ ವಿರುದ್ಧ ಕ್ರಮ‌ ಕೈಗೊಳ್ಳುವಂತೆ ಕಮಿಷನರ್ ರಮೇಶ್ ಬಾನೋತ್​ಗೆ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ.

ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಮಾತಾಡಿದ್ದಕ್ಕೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣಗೆ ಬೆದರಿಕೆ ಕರೆ: ಕಾಂಗ್ರೆಸ್​ ದೂರು
ಕಮಿಷನರ್​ಗೆ ಕಾಂಗ್ರೆಸ್ ನಿಯೋಗ ಮನವಿ
ರಾಮ್​, ಮೈಸೂರು
| Edited By: |

Updated on: Oct 28, 2023 | 4:45 PM

Share

ಮೈಸೂರು, ಅಕ್ಟೋಬರ್​​​​ 28: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ (M Lakshman) ಗೆ ಬೆದರಿಕೆ ಕರೆ ಬರುತ್ತಿರುವ ಹಿನ್ನೆಲೆ ಮೈಸೂರು ಪೊಲೀಸ್ ಆಯುಕ್ತ ಬಿ.ರಮೇಶ್​ಗೆ ಕಾಂಗ್ರೆಸ್​ ದೂರು ನೀಡಿದೆ. ಇತ್ತೀಚೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಮಾತಾಡಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಲಾಗಿದೆ. ಹಾಗಾಗಿ ಬೆದರಿಕೆ ಕರೆ ಮಾಡಿದವರ ವಿರುದ್ಧ ಕ್ರಮ‌ ಕೈಗೊಳ್ಳುವಂತೆ ಕಮಿಷನರ್ ರಮೇಶ್ ಬಾನೋತ್​ಗೆ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ.

ದೂರಿನಲ್ಲೇನಿದೆ?

ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ  ಡಿ.ಕೆ.ಶಿವಕುಮಾರ್​ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿರುವುದರ ಬಗ್ಗೆ ಪ್ರತಿಕ್ರಿಯಸಲು ಅ. 26ರಂದು ಮಧ್ಯಾನ್ಹ 1 ಗಂಟೆಗೆ ಜಿಲ್ಲಾ ಕಾಂಗ್ರೆಸ್, ಗ್ರಾಮಾಂತರ ಮತ್ತು ನಗರ ಅಧ್ಯಕ್ಷರುಗಳ ನೇತೃತ್ವದಲ್ಲಿ ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಟಿ ನಡೆಸಿ, ಕುಮಾರಸ್ವಾಮಿಯವರ ಆರೋಪಗಳ ಬಗ್ಗೆ ಸ್ಪಷ್ಟಿಕರಣ ನೀಡಲಾಗಿದೆ.

ಇದನ್ನೂ ಓದಿ: ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಮಲ್ಲಿಕಾರ್ಜುನ ಖರ್ಗೆ: ಹೇಳಿದ್ದಿಷ್ಟು

ಕುಮಾರಸ್ವಾಮಿರವರ ವಿರುದ್ಧ ಯಾವ ಕಾರಣಕ್ಕೂ ಮಾತನಾಡಬಾರದು, ಮಾತನಾಡಿದರೆ ನೆಟ್ಟಗಿರುವುದಿಲ್ಲ ಎಂದು ಅ. 27 ರಂದು ಸಾಯಂಕಾಲ 3.15ಕ್ಕೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ಬೆದರಿಕೆ ಕರೆ ಹಾಕಲಾಗಿದೆ. ಇದಲ್ಲದೆ ಅ. 28 ರಂದು ಬೆಳಿಗ್ಗೆ 10 ಗಂಟೆಗೆ ಕಲಾಮಂದಿರ ಆವರಣದಿಂದ ಮುಂದೆ ಕೆಲ ಜೆ.ಡಿ.ಎಸ್.ಮುಖಂಡರುಗಳು ಮತ್ತು ಹೆಚ್.ಡಿ.ಕುಮಾರಸ್ವಾಮಿಯವರ ಅಭಿಮಾನಿಗಳು ಎಂ.ಲಕ್ಷ್ಮಣರವರು ಕುಮಾರಸ್ವಾಮಿಯವರನ್ನು ಪತ್ರಿಕಾಗೋಷ್ಟಿಯಲ್ಲಿ ಬಾಯಿಗೆ ಬಂದಂತೆ ಮಾತನಾಡಿರುತ್ತಿದ್ದಾರೆ. ಇವರಿಗೆ ಬುದ್ಧಿ ಕಲಿಸಬೇಕು. ಇವರ ಮನೆಗೆ ಹೋಗೋಣ ಹಾಗೂ ಇವರು ವಾಕಿಂಗ್ ಮಾಡುವಾಗ ಆಟ್ಯಾಕ್ ಮಾಡೋಣ ಎಂದು ಮಾತನಾಡಿಕೊಳ್ಳುತ್ತಿರುವುದರ ಬಗ್ಗೆ ಅಲ್ಲೆ ಇದ್ದ ಒಬ್ಬ ವ್ಯಕ್ತಿ ನನಗೆ ಮಾಹಿತಿ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: PSI ಪರೀಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬೆಳಕಿಗೆ

ನಾನು ಕಾಂಗ್ರೆಸ್ ಪಕ್ಷದ ಅಧಿಕೃತ ರಾಜ್ಯ ವಕ್ತಾರ, ಪಕ್ಷವನ್ನು ಮತ್ತು ಮುಖಂಡರುಗಳನ್ನು ಮತ್ತು ಸರ್ಕಾರದ ಬಗ್ಗೆ ಆಧಾರ ರಹಿತ ಆರೋಪ ಮಾಡಿದಾಗ ಇಂತಹ ಆರೋಪಗಳಿಗೆ ಉತ್ತರ ಕೊಡುವುದೇ ವಕ್ತಾರನ ಕೆಲಸ. ಪ್ರಜಾಪ್ರಭುತ್ವದಲ್ಲಿ ಇಂತಹ ಬೆದರಿಕೆಗಳು ಮತ್ತು ಗುಂಡಾ ವರ್ತನೆಗಳಿಗೆ ಅವಕಾಶವಿರುವುದಿಲ್ಲ. ಆದ್ದರಿಂದ ಬೆದರಿಕೆ ಹಾಕುತ್ತಿರುವ ವ್ಯಕ್ತಿಗಳ ವಿರುದ್ಧ FIR ದಾಖಲಿಸಿ ಸೂಕ್ತ ಕ್ರಮ ಜರುಗಿಸಬೇಕು ಮತ್ತು ನನಗೆ ಸೂಕ್ತ ಭದ್ರತೆ ನೀಡುವಂತೆ ಎಂ.ಲಕ್ಷ್ಮಣ ಅವರು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ