ಅರುಣ್ ಸಿಂಗ್-ಕಟೀಲ್ ನನ್ನೊಂದಿಗೆ ಚರ್ಚಿಸಿದ್ದಾರೆ.. ಬೈ ಎಲೆಕ್ಷನ್​ ಬಳಿಕ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ: ಈಶ್ವರಪ್ಪ

ಈಶ್ವರಪ್ಪ ಸಚಿವ ಸ್ಥಾನ ಬದಲಾವಣೆಯಾದರೆ ಮುಂದಿನ ನಿರ್ಧಾರ ಏನು? ಎಂಬ ಮಾಧ್ಯಮದವರ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಅವರು, ಇದನ್ನ ತೀರ್ಮಾನ ಮಾಡೋಕೆ ನಾನ್ಯಾರು. ನಾನೊಬ್ಬ ಪಕ್ಷದ ಕಾರ್ಯಕರ್ತ ಅಷ್ಟೇ. ನಮ್ಮಪ್ಪ ಅಡಿಕೆ ಮಂಡಿ ಗುಮಾಸ್ತ. ನಮ್ಮಮ್ಮ ಅಡಿಕೆ ಮಂಡಿಯಲ್ಲಿ ಕೆಲಸ ಮಾಡೋಳು. ಆದ್ರೆ ಪಕ್ಷ ನನ್ನನ್ನ ಡಿಸಿಎಂ ತನಕ ಏರಿಸಿದೆ ಎಂದಿದ್ದಾರೆ.

ಅರುಣ್ ಸಿಂಗ್-ಕಟೀಲ್ ನನ್ನೊಂದಿಗೆ ಚರ್ಚಿಸಿದ್ದಾರೆ.. ಬೈ ಎಲೆಕ್ಷನ್​ ಬಳಿಕ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ: ಈಶ್ವರಪ್ಪ
ಕೆ.ಎಸ್​.ಈಶ್ವರಪ್ಪ
Follow us
Skanda
|

Updated on: Apr 02, 2021 | 1:50 PM

ಮೈಸೂರು: ರಾಜ್ಯ ಬಿಜೆಪಿಯಲ್ಲಿ ಹಿರಿಯ ನಾಯಕರ ನಡುವಿನ ಮನಸ್ತಾಪ ಪಕ್ಷದೊಳಗೆ ಉಸಿರುಗಟ್ಟಿಸುವ ವಾತಾವರಣ ಸೃಷ್ಟಿಸುತ್ತಿದೆಯೇ ಅನ್ನುವ ಅನುಮಾನ ಬಲವಾಗುತ್ತಿದ್ದ ಹೊತ್ತಿನಲ್ಲಿಯೇ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ಈ ಎಲ್ಲಾ ಬೆಳವಣಿಗೆಗಳ ಕುರಿತು ಮಾತನಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು ಯಡಿಯೂರಪ್ಪ ವಿರುದ್ಧ ತಾವು ಆರೋಪ ಹೊರಿಸಿದ ಕುರಿತು ಪ್ರತಿಕ್ರಿಯೆ ನೀಡಿ ಬಿ.ಎಸ್.ಯಡಿಯೂರಪ್ಪ ಹಾಗೂ ನನ್ನ ನಡುವೆ ಯಾವುದೇ ವೈಯುಕ್ತಿಕ ಭಿನ್ನಾಭಿಪ್ರಾಯ ಇಲ್ಲ. ಈ ಸಂಬಂಧ ಅರುಣ್ ಸಿಂಗ್ ಹಾಗೂ ನಳಿನ್ ಕುಮಾರ್ ಕಟೀಲ್ ನನ್ನೊಂದಿಗೆ ಚರ್ಚಿಸಿದ್ದಾರೆ. ಚುನಾವಣೆಯ ಬಳಿಕ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆಂದು ತಿಳಿಸಿದ್ದಾರೆ.

ರಾಜ್ಯಪಾಲರಿಗೆ ಪತ್ರ ಬರೆದ ವಿಚಾರದ ಬಗ್ಗೆ ಮಾತನಾಡುತ್ತಾ, ನಾನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೂ ಪತ್ರ ಬರೆದಿರುವುದು ನಿಜ. ಪತ್ರ ಬರೆಯುವುದಕ್ಕೂ ಮುನ್ನ ಯಡಿಯೂರಪ್ಪ ಜತೆ ಚರ್ಚಿಸಿಲ್ಲ. ಹಾಗಂತ, ಅವರ ವಿರುದ್ಧ ಯಾರಿಗೂ ದೂರು ನೀಡಿಲ್ಲ. ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿಲ್ಲ. ಈಶ್ವರಪ್ಪ ಪತ್ರ ಬರೆದಿರುವುದು ತಪ್ಪು ಎಂದು ಅರುಣ್​ ಸಿಂಗ್​ ಹೇಳಿದ್ದಾರೆ. ಆದರೆ ಅದು ಅವರ ಅಭಿಪ್ರಾಯ. ನಾನು ಅವರೊಂದಿಗೆ ಚರ್ಚೆ ಮಾಡುತ್ತೇನೆ. ಆಡಳಿತ ವಿಚಾರವಾಗಿ ನಾನು ನೇರವಾಗಿ ಯಡಿಯೂರಪ್ಪ ಅವರಿಗೇ ಪತ್ರ ಬರೆದಿದ್ದೇನೆ. ಆಡಳಿತದಲ್ಲಿ ಸ್ವಲ್ಪ ವ್ಯತ್ಯಾಸವಾಗಿದೆ. ಅದನ್ನು ಸರಿಪಡಿಸಿ ಎಂದು ಹೇಳಿದ್ದೇನೆ ಎಂದಿದ್ದಾರೆ.

ನಾನು ಯಾರಿಗೂ ಬಗ್ಗುವ ಪ್ರಶ್ನೆಯೇ ಇಲ್ಲ! ನಾಲ್ವರು ಸಚಿವರು, ನಾಲ್ವರು ಶಾಸಕರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ರಾಜೀನಾಮೆ ಕೇಳಿದ್ದಾರೆ, ಖಾತೆ ಬದಲಾವಣೆ ಬಗ್ಗೆ ಚರ್ಚೆಯಾಗಿದೆ. ಇಂತಹ ಯಾವುದಕ್ಕೂ ನಾನು ಬಗ್ಗುವ ಪ್ರಶ್ನೆಯೇ ಇಲ್ಲ. ನನ್ನ ನಿರ್ಧಾರ ನ್ಯಾಯಬದ್ಧವಾಗಿದೆ. ರಾಜ್ಯದ ಹಲವು ಶಾಸಕರು, ಸಚಿವರು, ಸಂಸದರು, ಬಿಜೆಪಿ ಪದಾಧಿಕಾರಿಗಳು ನನ್ನ ಪರವಾಗಿ ಮಾತಾಡಿದ್ದಾರೆ. ಸಹಿ ಸಂಗ್ರಹಿಸುವ ಬಗ್ಗೆಯೂ ಅವರು ಕೇಳಿದ್ದಾರೆ. ಆದರೆ, ಸಹಿ ಸಂಗ್ರಹ ಮಾಡುವುದು ಬೇಡ ಎಂದು ಹೇಳಿದ್ದೆ. ಶಾಸಕರು ಸಹಿ ಸಂಗ್ರಹ ಮಾಡುವುದು ಸಹ ತಪ್ಪು. ಇದು ನನ್ನ, ಯಡಿಯೂರಪ್ಪ ನಡುವಿನ ವೈಯಕ್ತಿಕ ವಿಚಾರವಲ್ಲ, ನೀತಿ, ನಿಯಮ ಜಾರಿ ಮಾಡಬೇಕೆಂಬ ನನ್ನ ಪ್ರಯತ್ನವಷ್ಟೇ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಕೆಜೆಪಿ ಕಟ್ಟುವಾಗಲೂ ಯಡಿಯೂರಪ್ಪನವರಿಗೆ ಬೇಡವೆಂದೇ ಹೇಳಿದ್ದೆ.. ಎಂಬುದನ್ನು ಸ್ಮರಿಸಿದ ಕೆ.ಎಸ್.ಈಶ್ವರಪ್ಪ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM