AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​​ಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ ಪ್ರಕರಣ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗರಂ, ನಾಗಮಂಗಲದಲ್ಲಿ ಕರ್ತವ್ಯಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿ

ವರ್ಗಾವಣೆಗೆ ಬೇಸತ್ತು ನಾಗಮಂಗಲದ ಕೆಎಸ್​ಆರ್​ಟಿಸಿ ಚಾಲಕ ಜಗದೀಶ್​​ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಇಂದು (ಜು.06) ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಕೆಎಸ್​ಆರ್​​ಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ ಪ್ರಕರಣ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗರಂ, ನಾಗಮಂಗಲದಲ್ಲಿ ಕರ್ತವ್ಯಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿ
ಹೆಚ್​​.ಡಿ ಕುಮಾರಸ್ವಾಮಿ
ವಿವೇಕ ಬಿರಾದಾರ
|

Updated on:Jul 06, 2023 | 9:19 AM

Share

ಮೈಸೂರು: ರಾಜ್ಯದಲ್ಲಿ ಸರ್ಕಾರಿ ನೌಕರರ ವರ್ಗಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ಮುಖ್ಯಮಂತ್ರಿ ಕಚೇರಿಯಲ್ಲಿ (Chief Minister Office) ಹಣ ಕೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ (HD Kumarswamy) ಅವರು ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ವರ್ಗಾವಣೆಗೆ ಬೇಸತ್ತು ನಾಗಮಂಗಲದ ಕೆಎಸ್​ಆರ್​ಟಿಸಿ ಚಾಲಕ (KSRTC Driver) ಜಗದೀಶ್​​ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಮೈಸೂರಿನ (Mysore) ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಇಂದು (ಜು.06) ಶಾಸಕ ಹೆಚ್​​.ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಈ ಬಗ್ಗೆ ಕ್ರಮಕೈಗೊಳ್ಳಲಿ. ತಮ್ಮ ರಾಜಕೀಯ ತೆವಲಿಗೆ ಅಮಾಯಕರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಗದೀಶ್ ಸದ್ಯ ವೆಂಟಿಲೇಟರ್‌ನಲ್ಲಿ ಇದ್ದಾರೆ. ಸರ್ಕಾರ ಬಂದು ಐವತ್ತು ದಿನ ಆಗಿಲ್ಲ. ವರ್ಗಾವಣೆ ಮಾಡಿಕೊಳ್ಳುವುದಾದರೆ ಮಾಡಿಕೊಳ್ಳಲಿ. ಆದರೆ ಈ ರೀತಿ ಮಾಡುವುದು ಸರಿಯಲ್ಲ. ಜಗದೀಶ್ ಪತ್ನಿ ಪಂಚಾಯತಿ ಸದಸ್ಯರು.  ಆಗಲೇ ದ್ವೇಷ ರಾಜಕಾರಣ ಆರಂಭಿಸಿದ್ದಾರೆ. ಊರಿನಲ್ಲಿರುವ ಮಹದೇವ ಎಂಬ ರೌಡಿ ಜಗದೀಶ್​ ಕುಟುಂಬಕ್ಕೆ ಕಿರುಕುಳ ನೀಡಿದ್ದಾನೆ. ಈ ಹೆಣ್ಣು ಮಗಳು ಜೆಡಿಎಸ್ ಪಕ್ಷ ಬಿಡುವಂತೆ, ಕಾಂಗ್ರೆಸ್ ಸೇರುವಂತೆ ಒತ್ತಡ ಏರಿದ್ದಾನೆ ಎಂದು ಹೇಳಿದರು.

ಮತ್ತೊಂದೆಡೆ ಜಗದೀಶ್​​ಗೆ ಅಧಿಕಾರಿಗಳ ಮೂಲಕ‌ ಕಿರುಕುಳ ನೀಡುತ್ತಿದ್ದಾರೆ. ಡೆತ್ ನೋಟ್‌ನಲ್ಲಿ‌ ಜಗದೀಶ್ ಅವರು ಸ್ಪಷ್ಟವಾಗಿ ಬರೆದಿದ್ದಾರೆ. ಸಚಿವರ ಆದೇಶ ಇದೆ ಒತ್ತಡ ಇದೆ ಎಂದು ಅಧಿಕಾರಿಗಳು‌ ಹೇಳಿದ್ದಾರೆ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಿ. ಮಂತ್ರಿ ಸ್ಥಾನ ಏನು ಶಾಶ್ವತನಾ? ಘಟನೆ ಸಂಬಂಧ ಅಧಿಕಾರಿಗಳನ್ನು ಕೇಳಿದರೆ ಇನ್ನೂ ವ್ಯಕ್ತಿ ಸತ್ತಿಲ್ಲ. ಆ ಕಾರಣಕ್ಕೆ ಎಫ್‌ಐ ಆರ್ ಹಾಕಿಲ್ಲ ಅಂತಾರೆ. ಇವರಿಗೆ ಮತ ಹಾಕಿದ್ದು ಜನರ ಜೀವದ ಜೊತೆ ಚೆಲ್ಲಾಟ ಆಡಲು ಅಲ್ಲ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಸಚಿವ ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಕೆಎಎಸ್​​​ಆರ್​​ಟಿಸಿ ಡಿಪೋ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಚಾಲಕ

ನಿನ್ನೆ ಅವರ ಕುಟುಂಬಕ್ಕೆ ಕರೆ ಮಾಡಿದಾಗ ಕುಟುಂಬದವರು ಅಳುತ್ತಿದ್ದರು. ರಾತ್ರಿ 1.30 ಕ್ಕೆ ಮೈಸೂರಿಗೆ ಶಿಫ್ಟ್ ಮಾಡಿದ್ದಾರೆ. ವೈದ್ಯರು ಕೈಲಾದ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ. ರಾಜ್ಯದಲ್ಲಿ ಹೊಸ ಹೊಸ ಟ್ಯಾಕ್ಸ್ ಗಳು ಆರಂಭವಾಗಿವೆ.  ಟ್ಯಾಕ್ಸ್ ನೀಡಿದರೆ ಮಾತ್ರ ಇವರಿಗೆ ಲಾಭ. ವೈಎಸ್‌ಟಿ ಟ್ಯಾಕ್ಸ್ ಬಗ್ಗೆ ಎಲ್ಲಾ ರಾಜಕಾರಣಿಗಳಿಗೂ ಗೊತ್ತಿದೆ ಎಂದು ಹೇಳಿದರು.

 ಸಾರಿಗೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೆ ಆಕ್ರೋಶ

ಮಂಡ್ಯ ಜಿಲ್ಲೆಯ ನಾಗಮಂಗಲದ ಡಿಪೋದ ಸಾರಿಗೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೆ ಸಚಿವ ಚಲುವರಾಯ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ನಾಗಮಂಗಲದ ಡಿಪೋದಲ್ಲಿ 60ಕ್ಕೂ ಹೆಚ್ಚು ಬಸ್‌ಗಳು ನಿಂತಲ್ಲೇ ನಿಂತಿವೆ. ಬಸ್ ಸಂಚಾರ ಸ್ಥಗಿತ ಹಿನ್ನೆಲೆ ಪ್ರಯಾಣಿಕರಿಲ್ಲದೆ ನಗರ ಬಿಕೋ ಎನ್ನುತ್ತಿದೆ.

ಇನ್ನು ಚಾಲಕ ಜಗದೀಶ್ ಹುಟ್ಟೂರು ಹಂದೇನಹಳ್ಳಿ ಗ್ರಾಮಸ್ಥರು ಕೂಡ ಪ್ರತಿಭಟನೆ ಮಾಡುತ್ತಿದ್ದು, ಸಚಿವ ಚಲುವರಾಯಸ್ವಾಮಿ ದ್ವೇಷ ರಾಜಕಾರಣವೇ ನನ್ನ ಮಗನ ಈ ಸ್ಥಿತಿಗೆ ಕಾರಣ. ನಾವು ಮೊದಲಿನಿಂದಲೂ ಜೆಡಿಎಸ್ ಮತ್ತು ಕುಮಾರಸ್ವಾಮಿ ಅಭಿಮಾನಿಗಳು. ನನ್ನ ಸೊಸೆ ಗ್ರಾಮ ಪಂಚಾಯತಿ ಸದಸ್ಯೆಯಾದ್ದರಿಂದ ಈ ರೀತಿ ಕಿರುಕುಳ ನೀಡುತ್ತಿದ್ದಾರೆ ಎಂದು ಜಗದೀಶ್ ತಂದೆ ರಾಜೇಗೌಡ ಆರೋಪ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:09 am, Thu, 6 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ