KSRTC ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ: ಸೂಕ್ತ ರಕ್ಷಣೆಗೆ ಸಾರಿಗೆ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ಆಗ್ರಹ
ಕ್ಷುಲ್ಲಕ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಾಲಕನಿಗೆ ಚಿಕಿತ್ಸೆಯನ್ನು ನೀಡಲಾಗಿದೆ. ಸಾರಿಗೆ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ಆಸ್ಪತ್ರೆಗೆ ಭೀಟಿ ನೀಡಿದ್ದು, ಈ ಘಟನೆಯನ್ನು ರಾಜ್ಯ ಘಟಕ ಖಂಡಿಸುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಕೆಎಸ್ಆರ್ಟಿಸಿ ಚಾಲಕ ವೆಂಕಟೇಶ್
ಮೈಸೂರು: ಕ್ಷುಲ್ಲಕ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಚಾಲಕ ವೆಂಕಟೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಕೆಎಸ್ಆರ್ಟಿಸಿ ಚಾಲಕನಿಗೆ ಚಿಕಿತ್ಸೆ ನೀಡಲಾಗಿದೆ. ಸಾರಿಗೆ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ಆಸ್ಪತ್ರೆಗೆ ಭೀಟಿ ನೀಡಿದ್ದು, ಈ ಘಟನೆಯನ್ನು ರಾಜ್ಯ ಘಟಕ ಖಂಡಿಸುತ್ತದೆ. ನಮ್ಮ ಸಿಬ್ಬಂದಿಗೆ ಯಾವುದೇ ರಕ್ಷಣೆ ಇಲ್ಲದಂತಾಗಿದೆ. ಸಿಬ್ಬಂದಿಗೆ ಸೂಕ್ತ ರಕ್ಷಣೆ ಆಗತ್ಯ ಇದೆ. ಈ ಕುರಿತಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿತ್ತು. ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುವ ನಮಗೆ ರಕ್ಷಣೆ ಬೇಕು ಎಂದು ಅಳಲು ತೋಡಿಕೊಂಡಿದ್ದಾರೆ.
ಚಾಕುವಿನಿಂದ ಇರಿದು ಪರ್ಸ್ ದೋಚಿದ ಖದೀಮರು ಪೊಲೀಸ್ ಬಲೆಗೆ ಬಿದ್ದಿದ್ದು ಹೇಗೆ ಗೊತ್ತಾ?
Published On - 3:12 pm, Fri, 22 January 21