AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್.ಜಯಕುಮಾರ್ ಅವರಿಗೆ ಎಚ್.ಎಸ್.ದೊರೆಸ್ವಾಮಿ ಹೆಸರಿನ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡಮಾಡುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಪತ್ರಕರ್ತ ಆರ್.ಜಯಕುಮಾರ್‌ ಅವರಿಗೆ ಮೈಸೂರಿನ ಅವರ ತೋಟದ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪ್ರದಾನ ಮಾಡಿದರು.

ಆರ್.ಜಯಕುಮಾರ್ ಅವರಿಗೆ ಎಚ್.ಎಸ್.ದೊರೆಸ್ವಾಮಿ ಹೆಸರಿನ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ
ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 07, 2024 | 9:43 PM

Share

ಮೈಸೂರು, ಏಪ್ರಿಲ್​ 07: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡಮಾಡುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಪತ್ರಕರ್ತ ಆರ್.ಜಯಕುಮಾರ್‌ ಅವರಿಗೆ ಮೈಸೂರಿನ ಅವರ ತೋಟದ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಶಿವಾನಂದ ತಗಡೂರು ಅವರು ಮಾತನಾಡಿ, ಚಿತ್ರದುರ್ಗದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಜಯಕುಮಾರ್ ಅವರು ಅನಾರೋಗ್ಯದ ಕಾರಣ ಬರಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಇಂದು ಕೆಯುಡಬ್ಲ್ಯೂಜೆಯೇ ಅವರ ಮನೆಗೆ ಬಂದಿದ್ದು ಪ್ರಶಸ್ತಿ ಪ್ರದಾನ ಮಾಡುತ್ತಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರರು ಮತ್ತು ಶತಾಯುಶಿಗಳಾಗಿ ಬದುಕಿದ ಎಚ್.ಎಸ್.ದೊರೆಸ್ವಾಮಿ ಅವರು ಕೆಯುಡಬ್ಲ್ಯೂಜೆ ಅಧ್ಯಕ್ಷರಾಗಿ ಸಂಘವನ್ನು ಮುನ್ನೆಡೆಸಿದವರು. ಅವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ಬಾರಿ ಸುಧೀರ್ಘ ಅವಧಿಗೆ ಕ್ರಿಯಾಶೀಲವಾಗಿ ಕೆಲಸ ಮಾಡಿದ ಜಯಕುಮಾರ್ ಅವರು ಭಾಜನರಾಗಿದ್ದಾರೆ ಎಂದರು.

ಇದನ್ನೂ ಓದಿ: ಕೆಯುಡಬ್ಲ್ಯೂಜೆ ಪ್ರಶಸ್ತಿಗೆ ಜಿಲ್ಲಾ ಹಾಗೂ ತಾಲೂಕು ಸಂಘದಿಂದ ಅರ್ಜಿ ಆಹ್ವಾನ

ದೊರೆಸ್ವಾಮಿ ಅವರ ಸಮಾಜಮುಖಿ ವಿಚಾರಧಾರೆಯಲ್ಲಿ ಮೂರೂವರೆ ದಶಕಗಳ ಕಾಲ ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಜಯಕುಮಾರ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಸಂಘಕ್ಕೆ ಅಭಿಮಾನದ ಸಂಗತಿ ಎಂದರು.

ಈ ಸಂದರ್ಭದಲ್ಲಿ ಅವರ ಪತ್ನಿ ಲೀಲಾ ಸಂಪಿಗೆ, ಡಾ.ಪ್ರವೀಣ್, ಮೈಸೂರು ಜಿಲ್ಲಾ ಸಂಘದ ಪ್ರಭುರಾಜು, ಸಿ.ಕೆ.ಮಹೇಂದ್ರ, ಎಸ್.ಟಿ. ರವಿಕುಮಾರ್, ಎಂ.ಸುಬ್ರಹ್ಮಣ್ಯ, ರಾಘವೇಂದ್ರ, ಧರ್ಮಪುರ ನಾರಾಯಣ, ಹಿರಿಯ ಪತ್ರಕರ್ತರುಗಳಾದ ಆರಾಧ್ಯ, ಲೋಕೇಶ್ ಕಾಯರ್ಗ, ಚಿನ್ನಸ್ವಾಮಿ ವಡ್ಡಗೆರೆ, ಓಂಕಾರ್, ಮಹಾದೇವ ನಾಯಕ್ ಮತ್ತಿತರರು ಮಾತನಾಡಿ ಜಯಕುಮಾರ್ ಅವರ ಹೋರಾಟದ ಹಾದಿ ಮತ್ತು ಪತ್ರಕರ್ತರಾಗಿ ಸಲ್ಲಿಸಿದ ಸೇವೆ ಸ್ಮರಿಸಿದರು. ಆದಷ್ಟು ಬೇಗ ಗುಣಮುಖರಾಗಿ ಬರುವಂತೆ ಹಾರೈಸಿದರು.

ಇದನ್ನೂ ಓದಿ: ಪತ್ರಕರ್ತರಿಗೆ ಉಚಿತ ಬಸ್​ ಘೋಷಣೆ ಹಿನ್ನೆಲೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಕೆಯುಡಬ್ಲ್ಯೂಜೆ ವತಿಯಿಂದ ಸನ್ಮಾನ

ಕಾರ್ಯಕ್ರಮದಲ್ಲಿ ಶಿವಮೂರ್ತಿ ಜುಪ್ತಿಮಠ, ಟಿ.ಪಿ.ಜಗದೀಶ್ , ದೇವರಾಜ ಕೊಪ್ಪ, ಸುಭಾಷ್ ಮಾಂಡ್ರಳ್ಳಿ, ಸಿದ್ದಯ್ಯ ಸೋಮಣ್ಣ, ಸೋಮಶೇಖರ್, ಡಾ.ಪೃಥ್ವಿ ಚಂದ್ರಶೇಖರ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ