ಟಿ.ನರಸೀಪುರ: ಕಳೆದ ಎರಡು ತಿಂಗಳಿನಿಂದ ಗ್ರಾಮಸ್ಥರಿಗೆ ತಲೆನೋವಾಗಿದ್ದ ಚಿರತೆ ಸೆರೆ

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಉಕ್ಕಲಗೆರೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶುಕ್ರವಾರ ಮುಂಜಾನೆ 7 ವರ್ಷದ ಗಂಡು ಚಿರತೆ ಬಿದ್ದಿದೆ.

ಟಿ.ನರಸೀಪುರ: ಕಳೆದ ಎರಡು ತಿಂಗಳಿನಿಂದ ಗ್ರಾಮಸ್ಥರಿಗೆ ತಲೆನೋವಾಗಿದ್ದ ಚಿರತೆ ಸೆರೆ
ಬೋನಿಗೆ ಬಿದ್ದ ಚಿರತೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 23, 2022 | 6:56 PM

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಚಿರತೆ (Leopard) ದಾಳಿ ಹೆಚ್ಚಾಗಿತ್ತು. ಇದರಿಂದ ಮನುಷ್ಯರು, ಸಾಕು ಪ್ರಾಣಿಗಳು ಬಲಿಯಾಗಿದ್ದವು. ಇದರಿಂದ ರೋಸಿ ಹೋಗಿದ್ದ ಸಾರ್ವಜನಿಕರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಟಿ.ನರಸೀಪುರ (T Narasipura) ತಾಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇಂದು (ಡಿ.23) ಮುಂಜಾನೆ 7 ವರ್ಷದ ಗಂಡು ಚಿರತೆ ಬಿದ್ದಿದೆ. ಚಿರತೆ ಅರಣ್ಯ ಇಲಾಖೆ ಬೋನಿನಲ್ಲಿ ಇರಿಸಿದ್ದ ಕರು ತಿನ್ನಲು ಬಂದು ಸೆರೆ ಸಿಕ್ಕಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿರತೆ ಸೆರೆ ಸಿಕ್ಕ ಮಾಹಿತಿ ತಿಳಿದ ಬೆನ್ನಲ್ಲೇ ಸ್ಥಳಕ್ಕೆ ನೂರಾರು ಜನ ಆಗಮಿಸಿದ್ದರು. ಹಾಗೇ ಸೆರೆ ಸಿಕ್ಕ ಚಿರತೆ ಕಳೆದ ಎರಡು ತಿಂಗಳ ಹಿಂದೆ ವಿದ್ಯಾರ್ಥಿ ಮಂಜುನಾಥ್ ಬಲಿ ಪಡೆದಿತ್ತು ಎಂದು ಹೇಳಲಾಗುತ್ತಿದೆ. ಚಿರತೆ ದಿನನಿತ್ಯ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿತ್ತು.

ಇದನ್ನೂ ಓದಿ: ಟಿ.ನರಸೀಪುರದ ಮುತ್ತತ್ತಿ ಗ್ರಾಮದಲ್ಲಿ ಕೊನೆಗೂ ಸೆರೆಯಾದ ಚಿರತೆ

ಎಷ್ಟೇ ಹುಡುಕಿದರು ಬೋನಿಗೆ ಬೀಳದ ಚಿರತೆ

ಮಂಡ್ಯ: ಕಳೆದ ಕೆಲವು ದಿನಗಳಿಂದ ಕೆ.ಆರ್.ಎಸ್ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷವಾಗಿ ಆಂತಕ ಮೂಡಿಸಿದೆ. ಇದರಿಂದ ಕೆ.ಆರ್.ಎಸ್ ಬೃಂದಾವನಕ್ಕೆ ಎರೆಡು ತಿಂಗಳುಗಳ ಕಾಲ ಬೀಗ ಹಾಕಲಾಗಿತ್ತು. ಈ ಸಂಬಂಧ ಅರಣ್ಯ ಇಲಾಖೆ ಬೋನ್​ ಇಟ್ಟಿದೆ. ಆದರೂ ಕೂಡ ಎಷ್ಟೇ ಹುಡುಕಿದರು ಚಿರತೆ ಬೋನಿಗೆ ಬಿದ್ದಿಲ್ಲ. ಚಿರತೆ ಪದೇ ಪದೇ ಸಿಸಿ ಕ್ಯಾಮರದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು. ಮೂರು ವಿಶೇಷ ತಂಡದಿಂದ ಕೂಂಬಿಂಗ್ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Fri, 23 December 22

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್