ಪ್ರತಾಪ್ ಸಿಂಹಗೆ ಆಸೆ ಇದ್ರೆ ಇನ್ನೊಂದು ಮದುವೆಯಾಗಿ ಅನುಭವ ನಮಗೆ ಹೇಳಲಿ: ತನ್ವೀರ್ ಸೇಠ್

ಗೃಹಲಕ್ಷ್ಮೀ ಯೋಜನೆಯಿಂದ ಕುಟುಂಬಗಳಲ್ಲಿ ಒಡಕಾಗುತ್ತಿದೆ. ಮುಸ್ಲಿಮರಿಗೆ 2-3 ಜನ ಪತ್ನಿಯರಿದ್ದರೇ ಯಜಮಾನಿಯನ್ನ ಹೇಗೆ ಗುರುತಿಸುತ್ತೀರಾ? ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ.

ಪ್ರತಾಪ್ ಸಿಂಹಗೆ ಆಸೆ ಇದ್ರೆ ಇನ್ನೊಂದು ಮದುವೆಯಾಗಿ ಅನುಭವ ನಮಗೆ ಹೇಳಲಿ: ತನ್ವೀರ್ ಸೇಠ್
ಪ್ರತಾಪ್​ ಸಿಂಹ (ಎಡಚಿತ್ರ) ತನ್ವೀರ್ ಸೇಠ್​ (ಬಲಚಿತ್ರ)
Follow us
ವಿವೇಕ ಬಿರಾದಾರ
|

Updated on:Jun 17, 2023 | 5:53 PM

ಮೈಸೂರು: ಗೃಹಲಕ್ಷ್ಮೀ (Gruha Lakshmi) ಯೋಜನೆಯಿಂದ ಕುಟುಂಬಗಳಲ್ಲಿ ಒಡಕಾಗುತ್ತಿದೆ. ಮುಸ್ಲಿಮರಿಗೆ 2-3 ಜನ ಪತ್ನಿಯರಿದ್ದರೇ ಯಜಮಾನಿಯನ್ನ ಹೇಗೆ ಗುರುತಿಸುತ್ತೀರಾ? ಎಂಬ ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿಕೆಗೆ ಶಾಸಕ ತನ್ವೀರ್ ಸೇಠ್ (Tanveer Seth) ತಿರುಗೇಟು ನೀಡಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರಿಗೆ ಆಸೆ ಇದ್ದರೇ ಇನ್ನೊಂದು ಮದುವೆ ಆಗಲಿ. ಅದರ ಅನುಭವವನ್ನು ನಮಗೆ ಹೇಳಲಿ ಎಂದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಗೆ ಸಂಪುಟ ಒಪ್ಪಿಗೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಏನು ಚರ್ಚೆಯಾಗಿದೆ ಎಂದು ಗೊತ್ತಿಲ್ಲ. ಮುಂದೆ ಸದನದಲ್ಲಿ ಈ ವಿಚಾರ ಚರ್ಚೆಗೆ ಬಂದಾಗ ಉತ್ತರಿಸುತ್ತೇನೆ ಎಂದು ಮೈಸೂರಿನಲ್ಲಿ ನರಸಿಂಹರಾಜ ಕ್ಷೇತ್ರದ​​ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿಗಳ ಜಾರಿಗೆ ತಗಲುವ ವೆಚ್ಚವನ್ನು ಹೇಗೆ ಕ್ರೋಢೀಕರಿಸುತ್ತಾರೆ ಅಂತ ಮೇಧಾವಿ ಸಿದ್ದರಾಮಯ್ಯ ಹೇಳಲಿ: ಪ್ರತಾಪ್ ಸಿಂಹ

ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ಬೇಸರವಾಗಿಲ್ಲ. ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದಕ್ಕೆ ನನಗೆ ಖುಷಿಯಿದೆ. ಅಧಿಕಾರ ಹಂಚಿಕೆ ಬಗ್ಗೆಯೂ ನನಗೆ ಗೊತ್ತಿಲ್ಲ. ಮನುಷ್ಯನ ಆಸೆಗೆ ಕೊನೆಯಿಲ್ಲ. 34 ಕ್ಕೆ 34 ಸಚಿವ ಸ್ಥಾನಗಳು ಭರ್ತಿಯಾಗಿವೆ. ಅಧಿಕಾರ ಹಂಚಿಕೆ ಸಂಬಂಧ ನಡೆದಿರುವ ಗೌಪ್ಯ ಸಭೆಯ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದು ಜಾರಿಕೊಂಡರು.

ಕೋಮು ಗಲಭೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಿದ ವಿಚಾರವಾಗಿ ಮಾತನಾಡಿದ ಅವರು ತಲಾ 25 ಲಕ್ಷ ರೂ. ಪರಿಹಾರ ನೀಡಿದ್ದಕ್ಕೆ ಸಹಮತವಿದೆ. ಹಿಂದಿನ ಬಿಜೆಪಿ ಸರ್ಕಾರ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಿತ್ತು. ಬಿಜೆಪಿ ಸರ್ಕಾರ ಮಾಡಿದ್ದ ತಪ್ಪನ್ನು ಕಾಂಗ್ರೆಸ್ ಸರ್ಕಾರ ಸರಿಪಡಿಸಿದೆ. ಬಿಜೆಪಿ ಅವಧಿಯಲ್ಲಿ ಆಗಿದ್ದ ಅನ್ಯಾಯವನ್ನು ಕಾಂಗ್ರೆಸ್​ ಸರ್ಕಾರ ಸರಿಮಾಡಿದೆ ಎಂದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ  ಕ್ಲಿಕ್ ಮಾಡಿ

Published On - 5:51 pm, Sat, 17 June 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು