AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL Bhyrappa: 2029ರ ನಂತರ ಪ್ರಧಾನಿ ಮೋದಿ ರಾಜಕೀಯ ನಿವೃತ್ತಿ ಪಡೆಯಲಿ – ಸಾಹಿತಿ ಎಸ್​.ಎಲ್. ಭೈರಪ್ಪ

2029ರ ನಂತರ ಪ್ರಧಾನಿ ಮೋದಿ ರಾಜಕೀಯ ನಿವೃತ್ತಿ ಪಡೆಯಲಿ. 2024ರಿಂದ 2029ರವರೆಗೂ ಮೋದಿ ಅವರೇ ಪ್ರಧಾನಿಯಾಗಿರಲಿ. ನಂತರ ಸೇವಾ ಮನೋಭಾವವಿರುವ ಇನ್ನೊಬ್ಬ ವ್ಯಕ್ತಿಯನ್ನು ಸಿದ್ಧಪಡಿಸಲಿ ಎಂದು ಸಾಹಿತಿ ಎಸ್​.ಎಲ್.ಭೈರಪ್ಪ ಹೇಳಿಕೆ ನೀಡಿದ್ದಾರೆ.

SL Bhyrappa: 2029ರ ನಂತರ ಪ್ರಧಾನಿ ಮೋದಿ ರಾಜಕೀಯ ನಿವೃತ್ತಿ ಪಡೆಯಲಿ - ಸಾಹಿತಿ ಎಸ್​.ಎಲ್. ಭೈರಪ್ಪ
ಎಸ್​.ಎಲ್.ಭೈರಪ್ಪ, ನರೇಂದ್ರ ಮೋದಿ
TV9 Web
| Updated By: ಆಯೇಷಾ ಬಾನು|

Updated on:Jan 26, 2023 | 1:04 PM

Share

ಮೈಸೂರು: 2029ರ ನಂತರ ಪ್ರಧಾನಿ ಮೋದಿ(Narendra Modi) ರಾಜಕೀಯ ನಿವೃತ್ತಿ ಪಡೆಯಲಿ ಎಂದು ಮೈಸೂರಿನಲ್ಲಿ ಹಿರಿಯ ಸಾಹಿತಿ ಎಸ್​.ಎಲ್.ಭೈರಪ್ಪ(SL Bhyrappa) ಪ್ರತಿಕ್ರಿಯೆ ನೀಡಿದ್ದಾರೆ. 2019ರಲ್ಲೇ ನಾನು ಒಂದು ಲೇಖನ ಬರೆದಿದ್ದೆ. ಮೋದಿ ಮತ್ತೊಮ್ಮೆ ಬಹುಮತದೊಂದಿಗೆ ಪ್ರಧಾನಿ ಆಗಲಿ ಎಂದು ಬರೆದಿದ್ದೆ. 2024ರಿಂದ 2029ರವರೆಗೂ ಮೋದಿ ಅವರೇ ಪ್ರಧಾನಿಯಾಗಿರಲಿ. ನಂತರ ಸೇವಾ ಮನೋಭಾವವಿರುವ ಇನ್ನೊಬ್ಬ ವ್ಯಕ್ತಿಯನ್ನು ಸಿದ್ಧಪಡಿಸಲಿ ಎಂದು ಸಾಹಿತಿ ಎಸ್​.ಎಲ್.ಭೈರಪ್ಪ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಎಲ್.ಭೈರಪ್ಪ ಅವರು, ಮೋದಿಯಂತಹ ಪ್ರಧಾನಿಯನ್ನು ನಾವು ಹಿಂದೆಂದೂ ನೋಡಿಲ್ಲ. ನಾನು ಯಾವುದೇ ರಾಜಕೀಯ ಪಕ್ಷದಲ್ಲಿ ಇಲ್ಲ. ಯಾವುದೇ ಪಕ್ಷವನ್ನು ಓಲೈಸಲು ನಾನು ಈ ಮಾತು ಹೇಳುತ್ತಿಲ್ಲ. ದೇಶದ ಪ್ರಧಾನಿಯಾಗಿ ಮೋದಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಸೇವೆ ಈ ದೇಶಕ್ಕೆ ಬೇಕಿದೆ. ನರೇಂದ್ರ ಮೋದಿ ಅವರು ಪ್ರಧಾನಿ ಆದ ಕಾರಣವೇ ನನಗೆ ಪದ್ಮಭೂಷಣ ಪ್ರಶಸ್ತಿ ಬಂತು. ಇಲ್ಲದೆ ಇದ್ದರೆ ಬರುತ್ತಿರಲಿಲ್ಲ ಎಂದು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಹೇಳಿದರು.

ಇದನ್ನೂ ಓದಿ: Padma Award 2023 Winners List: ಎಸ್‌ಎಂ ಕೃಷ್ಣ, ಎಸ್‌ಎಲ್ ಭೈರಪ್ಪ, ಸುಧಾಮೂರ್ತಿ ಸೇರಿದಂತೆ 8 ಕನ್ನಡಿಗರಿಗೆ ಪದ್ಮ ಪುರಸ್ಕಾರ

2029ರ ನಂತರ ಪ್ರಧಾನಿ ಮೋದಿ ರಾಜಕೀಯ ನಿವೃತ್ತಿ ಪಡೆಯಲಿ. 2019ರಲ್ಲೇ ನಾನು ಒಂದು ಲೇಖನ ಬರೆದಿದ್ದೆ. ಮೋದಿ ಮತ್ತೊಮ್ಮೆ ಬಹುಮತದೊಂದಿಗೆ ಪ್ರಧಾನಿ ಆಗಲಿ ಎಂದು ಬರೆದಿದ್ದೆ. 2024ರಿಂದ 2029ರವರೆಗೂ ಮೋದಿ ಅವರೇ ಪ್ರಧಾನಿಯಾಗಿರಲಿ. ನಂತರ ಸೇವಾ ಮನೋಭಾವವಿರುವ ಇನ್ನೊಬ್ಬ ವ್ಯಕ್ತಿಯನ್ನು ಸಿದ್ಧಪಡಿಸಲಿ. ಈ ಪ್ರಶಸ್ತಿಗಳು ಬರುತ್ತವೆ, ಹೋಗುತ್ತವೆ. ಲೇಖಕ ಸತ್ತೇ ಸಾಯುತ್ತಾನೆ. ಆದರೆ ಅವನು ಬರೆದ ಪುಸ್ತಕ ಎಷ್ಟು ದಿನ ಪ್ರಸ್ತುತ ಇರುತ್ತದೋ ಅಲ್ಲಿಯವರೆಗೆ ಲೇಖಕ ಸದಾ ಜೀವಂತ. ನನ್ನ ಕೃತಿಗಳಿಗೆ ಅಂತಹ ಶಕ್ತಿ ಇದ್ದರೆ ಅದೇ ದೊಡ್ಡ ಪ್ರಶಸ್ತಿ ಎಂದರು.

ನನ್ನ ಕಾದಂಬರಿಗಳ ಮೂಲ ಭಾರತದ ಸಂಸ್ಕೃತಿ. ಈ ಸಂಸ್ಕೃತಿ ಏಕ ರೂಪದಲ್ಲಿ ಬೆಳೆದಿದೆ. ಗಣರಾಜ್ಯ ಮೊದಲಿಂದಲ್ಲೂ ಇತ್ತು. ಸಂವಿಧಾನದ ಬಹುಭಾಗ ನಮ್ಮ ಮೊದಲಿದಂಲೂ ಇತ್ತು. ಎಷ್ಟೋ ದೇಶದಲ್ಲಿ ಸ್ವಾತಂತ್ರ್ಯ ಪಡೆದಿದ್ದಾರೆ. ಆದರೆ ಅಲ್ಲಿ ಸ್ವಾತಂತ್ರ್ಯ ಉಳಿದುಕೊಂಡಿಲ್ಲ. ನಮ್ಮಲ್ಲಿ ಸಂವಿಧಾನ ಇದೆ. ಈ ದೇಶವನ್ನು ಕಾಪಾಡುತ್ತದೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:43 pm, Thu, 26 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ