ಮೈಸೂರು: 2029ರ ನಂತರ ಪ್ರಧಾನಿ ಮೋದಿ(Narendra Modi) ರಾಜಕೀಯ ನಿವೃತ್ತಿ ಪಡೆಯಲಿ ಎಂದು ಮೈಸೂರಿನಲ್ಲಿ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ(SL Bhyrappa) ಪ್ರತಿಕ್ರಿಯೆ ನೀಡಿದ್ದಾರೆ. 2019ರಲ್ಲೇ ನಾನು ಒಂದು ಲೇಖನ ಬರೆದಿದ್ದೆ. ಮೋದಿ ಮತ್ತೊಮ್ಮೆ ಬಹುಮತದೊಂದಿಗೆ ಪ್ರಧಾನಿ ಆಗಲಿ ಎಂದು ಬರೆದಿದ್ದೆ. 2024ರಿಂದ 2029ರವರೆಗೂ ಮೋದಿ ಅವರೇ ಪ್ರಧಾನಿಯಾಗಿರಲಿ. ನಂತರ ಸೇವಾ ಮನೋಭಾವವಿರುವ ಇನ್ನೊಬ್ಬ ವ್ಯಕ್ತಿಯನ್ನು ಸಿದ್ಧಪಡಿಸಲಿ ಎಂದು ಸಾಹಿತಿ ಎಸ್.ಎಲ್.ಭೈರಪ್ಪ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಎಲ್.ಭೈರಪ್ಪ ಅವರು, ಮೋದಿಯಂತಹ ಪ್ರಧಾನಿಯನ್ನು ನಾವು ಹಿಂದೆಂದೂ ನೋಡಿಲ್ಲ. ನಾನು ಯಾವುದೇ ರಾಜಕೀಯ ಪಕ್ಷದಲ್ಲಿ ಇಲ್ಲ. ಯಾವುದೇ ಪಕ್ಷವನ್ನು ಓಲೈಸಲು ನಾನು ಈ ಮಾತು ಹೇಳುತ್ತಿಲ್ಲ. ದೇಶದ ಪ್ರಧಾನಿಯಾಗಿ ಮೋದಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಸೇವೆ ಈ ದೇಶಕ್ಕೆ ಬೇಕಿದೆ. ನರೇಂದ್ರ ಮೋದಿ ಅವರು ಪ್ರಧಾನಿ ಆದ ಕಾರಣವೇ ನನಗೆ ಪದ್ಮಭೂಷಣ ಪ್ರಶಸ್ತಿ ಬಂತು. ಇಲ್ಲದೆ ಇದ್ದರೆ ಬರುತ್ತಿರಲಿಲ್ಲ ಎಂದು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಹೇಳಿದರು.
ಇದನ್ನೂ ಓದಿ: Padma Award 2023 Winners List: ಎಸ್‌ಎಂ ಕೃಷ್ಣ, ಎಸ್‌ಎಲ್ ಭೈರಪ್ಪ, ಸುಧಾಮೂರ್ತಿ ಸೇರಿದಂತೆ 8 ಕನ್ನಡಿಗರಿಗೆ ಪದ್ಮ ಪುರಸ್ಕಾರ
2029ರ ನಂತರ ಪ್ರಧಾನಿ ಮೋದಿ ರಾಜಕೀಯ ನಿವೃತ್ತಿ ಪಡೆಯಲಿ. 2019ರಲ್ಲೇ ನಾನು ಒಂದು ಲೇಖನ ಬರೆದಿದ್ದೆ. ಮೋದಿ ಮತ್ತೊಮ್ಮೆ ಬಹುಮತದೊಂದಿಗೆ ಪ್ರಧಾನಿ ಆಗಲಿ ಎಂದು ಬರೆದಿದ್ದೆ. 2024ರಿಂದ 2029ರವರೆಗೂ ಮೋದಿ ಅವರೇ ಪ್ರಧಾನಿಯಾಗಿರಲಿ. ನಂತರ ಸೇವಾ ಮನೋಭಾವವಿರುವ ಇನ್ನೊಬ್ಬ ವ್ಯಕ್ತಿಯನ್ನು ಸಿದ್ಧಪಡಿಸಲಿ. ಈ ಪ್ರಶಸ್ತಿಗಳು ಬರುತ್ತವೆ, ಹೋಗುತ್ತವೆ. ಲೇಖಕ ಸತ್ತೇ ಸಾಯುತ್ತಾನೆ. ಆದರೆ ಅವನು ಬರೆದ ಪುಸ್ತಕ ಎಷ್ಟು ದಿನ ಪ್ರಸ್ತುತ ಇರುತ್ತದೋ ಅಲ್ಲಿಯವರೆಗೆ ಲೇಖಕ ಸದಾ ಜೀವಂತ. ನನ್ನ ಕೃತಿಗಳಿಗೆ ಅಂತಹ ಶಕ್ತಿ ಇದ್ದರೆ ಅದೇ ದೊಡ್ಡ ಪ್ರಶಸ್ತಿ ಎಂದರು.
ನನ್ನ ಕಾದಂಬರಿಗಳ ಮೂಲ ಭಾರತದ ಸಂಸ್ಕೃತಿ. ಈ ಸಂಸ್ಕೃತಿ ಏಕ ರೂಪದಲ್ಲಿ ಬೆಳೆದಿದೆ. ಗಣರಾಜ್ಯ ಮೊದಲಿಂದಲ್ಲೂ ಇತ್ತು. ಸಂವಿಧಾನದ ಬಹುಭಾಗ ನಮ್ಮ ಮೊದಲಿದಂಲೂ ಇತ್ತು. ಎಷ್ಟೋ ದೇಶದಲ್ಲಿ ಸ್ವಾತಂತ್ರ್ಯ ಪಡೆದಿದ್ದಾರೆ. ಆದರೆ ಅಲ್ಲಿ ಸ್ವಾತಂತ್ರ್ಯ ಉಳಿದುಕೊಂಡಿಲ್ಲ. ನಮ್ಮಲ್ಲಿ ಸಂವಿಧಾನ ಇದೆ. ಈ ದೇಶವನ್ನು ಕಾಪಾಡುತ್ತದೆ ಎಂದರು.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 12:43 pm, Thu, 26 January 23