ಅನಾಥ ಶವಗಳ ಸಂಸ್ಕಾರ: ಮೈಸೂರಿನ ಬಾಡಿ ಮಿಯಾನ್​ಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಪ್ರಧಾನಿಗೆ ಪತ್ರ

ಮೈಸೂರಿನ "ಬಾಡಿ ಮಿಯಾನ್​​" ಅಯೂಬ್ ಅಹಮದ್‌ ಸಾವಿರಾರು ಅನಾಥ ಶವಗಳ ಸಂಸ್ಕಾರ ಮಾಡುವ ಮೂಲಕ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಗಿ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಶಾಸಕ ತನ್ವೀರ್ ಸೇಠ್ ಮತ್ತು ಸಂಸದ ಪ್ರತಾಪಸಿಂಹ ಪತ್ರ ಬರೆದಿದ್ದಾರೆ.

ಅನಾಥ ಶವಗಳ ಸಂಸ್ಕಾರ: ಮೈಸೂರಿನ ಬಾಡಿ ಮಿಯಾನ್​ಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಪ್ರಧಾನಿಗೆ ಪತ್ರ
ಮೈಸೂರಿನ ಬಾಡಿ ಮಿಯಾನ್​
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on: Jul 19, 2023 | 7:59 AM

ಮೈಸೂರು: ಸಾಮಾಜದಲ್ಲಿ ನಮ್ಮ ಮಧ್ಯೆ ಅದೆಷ್ಟೋ ಕಾಣದ ಕೈಗಳು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿವೆ. ಆ ಕೈಗಳು ಬೆಳಕಿಗೆ ಬಾರದೆ ಎಲೆ ಮರೆ ಕಾಯಿಯಂತೆ ಸೇವೆಯಲ್ಲೇ ನಿರತವಾಗಿರುತ್ತವೆ. ಅದರಂತೆ ಮೈಸೂರಿನ “ಬಾಡಿ ಮಿಯಾನ್​​” (Body Miyan) ಅಯೂಬ್ ಅಹಮದ್‌ ಸಾವಿರಾರು ಅನಾಥ ಶವಗಳ ಸಂಸ್ಕಾರ ಮಾಡುವ ಮೂಲಕ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಗಿ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಶಾಸಕ ತನ್ವೀರ್ ಸೇಠ್ (Tanveer Seth) ಮತ್ತು ಸಂಸದ ಪ್ರತಾಪ್ ಸಿಂಹ (Pratap Simha) ಪತ್ರ ಬರೆದಿದ್ದಾರೆ.

ಅಯೂಬ್ ಅಹಮದ್‌ ಅವರು ಕಳೆದ 22 ವರ್ಷಗಳಿಂದ ಈ ಕಾರ್ಯ ಮಾಡುತ್ತಿದ್ದು ಇದುವರೆಗೂ ತಮ್ಮದೆ ಖರ್ಚಿನಲ್ಲಿ 16 ಸಾವಿರ ಅನಾಥ ಶವಗಳ ಸಂಸ್ಕಾರ ಮಾಡಿದ್ದಾರೆ. ಇವರು ಮೈಸೂರು ಮಾತ್ರವಲ್ಲದೇ ಚಾಮರಾಜನಗರ ಸೇರಿದಂತೆ ಹಲವು ಭಾಗಗಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅಯೂಬ್ ಅಹಮದ್‌ ಅವರು ಅನಾಥಶ್ರಮ ಮತ್ತು ಟೈಲರಿಂಗ್ ತರಬೇತಿ ಸಂಸ್ಥೆ ನಡೆಸುತ್ತಿದ್ದಾರೆ.

ಯಾರು ಈ ಬಾಡಿ ಮಿಯಾನ್​

ಅಯೂಬ್ ಅಹಮದ್‌ 22 ವರ್ಷಗಳ ಹಿಂದೆ ಗುಂಡ್ಲುಪೇಟೆಯಿಂದ ಮೈಸೂರಿಗೆ ಬಸ್​​​ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ಸಿನಲ್ಲಿ ಹೋಗುತ್ತಿದ್ದಾಗ ರಸ್ತೆಯಲ್ಲಿ ಅನಾಥ ಶವವೊಂದನ್ನು ನೋಡಿದರು. ಎಂಟು ಗಂಟೆಗಳ ನಂತರ ಹಿಂದಿರುಗುವ ಪ್ರಯಾಣದಲ್ಲೂ ಶವ ಹಾಗೆ ಇತ್ತು. ಇದನ್ನು ಕಂಡು ಮರುಗಿದ ಅಯೂಬ್​ ಅಹಮದ್​ ಅಂದಿನಿಂದ ಅನಾಥ ಶವಗಳ ಸಂಸ್ಕಾರ ಮಾಡಲು ಪ್ರಾರಂಭಿಸಿದರು.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತ ಹೆಚ್ಚಳ; ವಿಶೇಷ ಸಮಿತಿ ರಚಿಸಿದ ಹೆದ್ದಾರಿ ಪ್ರಾಧಿಕಾರ

ಮೈಸೂರಿನ ಸುತ್ತಮುತ್ತಲಿನ ಊರುಗಳಿಂದ ಇವರಿಗೆ ಕರೆ ಮಾಡಿ ವಿಷಯ ತಿಳಿಸುತ್ತಾರೆ. ನಂತರ ಇವರು ಅಲ್ಲಿಂದ ಅನಾಥ ಶವಗಳನ್ನು ತಂದು ಕೆಆರ್ ಆಸ್ಪತ್ರೆಯಲ್ಲಿ ಮೂರು ದಿನಗಳ ಕಾಲ ಇಡುತ್ತಾರೆ. ಬಳಿಕ ತಮ್ಮ ಅಂಬಾಸಿಡರ್ ಕಾರನಲ್ಲಿ ತೆಗೆದುಕೊಂಡು ಹೋಗಿ ಅಂತಿಮ ವಿಧಿವಿಧಾನ ನೆರವೇರಿಸುತ್ತಾರೆ. ಅಲ್ಲದೇ ಕೊರೊನಾ ಸಮಯದಲ್ಲೂ ಅನೇಕ ಶವಗಳ ಸಂಸ್ಕಾರ ಮಾಡಿದ್ದಾರೆ.

ಇವರ ಈ ಸಮಾಜ ಕಾರ್ಯಕ್ಕೆ 2020ರಲ್ಲಿ ಅಮೆರಿಕದ ಹಾರ್ಮೊನಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್​​ ಲಭಿಸಿದೆ. ಹಾಗೇ ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ