ಜೀವ ಬೆದರಿಕೆ: ಪೊಲೀಸ್​ ಠಾಣೆ ಮೆಟ್ಟಿಲೇರಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್

ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್( Tanveer Sait) ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ. ಹಿಂದೂ ಕಾರ್ಯಕರ್ತನಿಂದ ತಮಗೆ ಬೆದರಿಕೆ ಇದೆ ಎಂದು ಆರೋಪಿಸಿರುವ ತನ್ವೀರ್ ಸೇಠ್ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜೀವ ಬೆದರಿಕೆ: ಪೊಲೀಸ್​ ಠಾಣೆ ಮೆಟ್ಟಿಲೇರಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್
Tanveer Sait
Image Credit source: News Minute
Updated By: ನಯನಾ ರಾಜೀವ್

Updated on: Nov 18, 2022 | 6:40 AM

ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್( Tanveer Sait) ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ. ಹಿಂದೂ ಕಾರ್ಯಕರ್ತನಿಂದ ತಮಗೆ ಬೆದರಿಕೆ ಇದೆ ಎಂದು ಆರೋಪಿಸಿರುವ ತನ್ವೀರ್ ಸೇಠ್ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರದ ರಘು ವಿರುದ್ಧ ದೂರು ದಾಖಲಿಸಿದ್ದಾರೆ, ಟಿಪ್ಪು ಸುಲ್ತಾನ್ ಪ್ರತಿಮೆ ಸ್ಥಾಪಿಸುವುದಾಗಿ ಈ ಹಿಂದೆ ತನ್ವೀರ್ ಸೇಠ್ ಹೇಳಿದ್ದರು. ಹೇಳಿಕೆ ಹಿಂಪಡೆದು ಕ್ಷಮೆ ಯಾಚಿಸುವಂತೆ ಆಗ್ರಹಿಸಿದ್ದಲ್ಲದೇ ಒಂದೊಮ್ಮೆ ಹೇಳಿಕೆ ಹಿಂಪಡೆಯದಿದ್ದರೆ 6X3 ಅಡಿ ಫಿಕ್ಸ್​ ಎಂದು ವಿಡಿಯೋ ಮೂಲಕ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಬೆದರಿಕೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ, ಬೆದರಿಕೆ ಹಾಕಿರುವ ರಘು ವಿರುದ್ಧ ಕಾನೂನು ಕ್ರಮಕ್ಕೆ ಸೇಠ್ ಒತ್ತಾಯಿಸಿದ್ದಾರೆ.
ಹಾಗೆಯೇ ಮೈಸೂರ್ ಬೀಡಿ ಮಜ್ದೂರ್ ಅಸೋಸಿಯೇಷನ್ ಕಾರ್ಯದರ್ಶಿ ಕೆಸಿ ಶೌಕತ್ ಪಾಷಾ ಕೂಡ ಉದಯಗಿರಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

ತನ್ವೀರ್ ಸೇಠ್ ಮೈಸೂರಿನ ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ. 2019ರಲ್ಲಿ ಶಾಸಕರ ತನ್ವೀರ್ ಸೇಠ್​ಗೆ ಯುವಕನೊಬ್ಬ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಇರಿದು ಪರಾರಿಯಾಗಿದ್ದ ಘಟನೆಯೂ ನಡೆದಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ