Custodial death Nanjangud: ಯುವತಿ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಪೊಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು
ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಸಿದ್ದರಾಜು ನಂಜನಗೂಡು ತಾಲೂಕಿನ ಬ್ಯಾಳಾರುಹುಂಡಿ ನಿವಾಸಿ, ಆರೋಪಿ ಸಿದ್ದರಾಜು (31) ಸಾವನ್ನಪ್ಪಿದವರು. ಇವರು ಯುವತಿ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು ಎನ್ನಲಾಗಿದೆ.
ಮೈಸೂರು: ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಸಿದ್ದರಾಜು ನಂಜನಗೂಡು ತಾಲೂಕಿನ ಬ್ಯಾಳಾರುಹುಂಡಿ ನಿವಾಸಿ, ಆರೋಪಿ ಸಿದ್ದರಾಜು (31) ಸಾವನ್ನಪ್ಪಿದವರು. ಇವರು ಯುವತಿ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಪಾನಮತ್ತನಾಗಿ ಗಲಾಟೆ ಮಾಡಿಕೊಂಡಿದ್ದ ಸಿದ್ದರಾಜು ಲಾಕಪ್ನಲ್ಲಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ (Custodial death in Nanjangud) ಘಟನಾ ಸ್ಥಳಕ್ಕೆ (nanjangud rural police station) ಎಸ್ ಪಿ ಆರ್. ಚೇತನ್, ಎಎಸ್ ಪಿ ಶಿವಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮನೆಗಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ ರಾಮನಗರ: ಬಿಡದಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ರಾಜು (44) ಬಂಧಿತ ಆರೋಪಿ. ರಾಜು, ರಾಮನಗರ ತಾಲೂಕಿನ ತಿಮ್ಮಪ್ಪನಪಾಳ್ಯ ಗ್ರಾಮದ ನಿವಾಸಿ. ಬಂಧಿತನಿಂದ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿ ರಾಜು ಇತ್ತೀಚಿಗೆ ಪಾರ್ವತಮ್ಮ ಎಂಬುವವರ ಮನೆಯ ಬೀಗ ಹೊಡೆದು ಭಿನ್ನಾಭರಣ ಕಳ್ಳತನ ಮಾಡಿದ್ದ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.