ಲೋಕಸಭೆ ಭದ್ರತಾ ಲೋಪ: ಬಂಧಿತರು ಪ್ರತಾಪ್ ಸಿಂಹ ಐಟಿ ಸೆಲ್​ನಲ್ಲಿ ಕೆಲಸ ಮಾಡುತ್ತಿದ್ದರೆಂದ ಎಂ ಲಕ್ಷ್ಮಣ

ಲೋಕಸಭಾ ಕಲಾಪದ ವೇಳೆ ಭಾರಿ ಭದ್ರತಾ ಲೋಪ ಪ್ರಕರಣದ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ, ಬಂಧಿತ ಮನೋರಂಜನ್, ಪ್ರತಾಪ್ ಸಿಂಹ ಬಹಳ ಹತ್ತಿರವಿದ್ದ ವ್ಯಕ್ತಿ ಮತ್ತು ಪ್ರತಾಪ್ ಸಿಂಹ ಐಟಿ ಸೆಲ್​ನಲ್ಲಿ ಕೆಲಸ ನಿರ್ವಹಿಸುತ್ತಿದ್ದವರು ಎಂದು ಆರೋಪಿಸಿದ್ದಾರೆ. ಪ್ರತಾಪ್ ಸಿಂಹ ಕಚೇರಿಯನ್ನು ಸೀಜ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಲೋಕಸಭೆ ಭದ್ರತಾ ಲೋಪ: ಬಂಧಿತರು ಪ್ರತಾಪ್ ಸಿಂಹ ಐಟಿ ಸೆಲ್​ನಲ್ಲಿ ಕೆಲಸ ಮಾಡುತ್ತಿದ್ದರೆಂದ ಎಂ ಲಕ್ಷ್ಮಣ
ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Dec 14, 2023 | 3:08 PM

ಮೈಸೂರು, ಡಿಸೆಂಬರ್​​ 14: ಸಂಸತ್ ಭವನಕ್ಕೆ ನುಗ್ಗಿ ಕೋಲಾಹಲ ಎಬ್ಬಿಸಿದ್ದ ಬಂಧಿತರು ಸಂಸದ ಪ್ರತಾಪ್ ಸಿಂಹ ಐಟಿ ಸೆಲ್​ನಲ್ಲಿ ಕೆಲಸ ನಿರ್ವಹಿಸುತ್ತಿದ್ದವರು. ಬಂಧಿತ ಮನೋರಂಜನ್, ಪ್ರತಾಪ್ ಸಿಂಹ ಬಹಳ ಹತ್ತಿರವಿದ್ದ ವ್ಯಕ್ತಿ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ (M Lakshman) ಆರೋಪಿಸಿದ್ದಾರೆ. ನಗದರಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೈಸೂರು, ಮಡಿಕೇರಿ ಹಾಗೂ ಡೆಲ್ಲಿಯಲ್ಲಿ ಇವರ ಜೊತೆ ಸಭೆ ನಡೆಸಿದ್ದಾರೆ. ಪ್ರತಾಪ್ ಜೊತೆ ಒಂದು ಸಭೆಯು ಆಗಿದೆ. ಆದರೆ ಯಾವಾಗ ಸಭೆ ಆಗಿದೆ ಎಂದು ಗೊತ್ತಿಲ್ಲ. ಪ್ರತಾಪ್ ಸಿಂಹ ಕಚೇರಿ ಸೀಜ್ ಮಾಡಬೇಕು ಎಂದು ಹೇಳಿದ್ದಾರೆ.

ನ್ಯಾಷನಲ್ ಸೆಕ್ಯೂರಿಟಿ ವಿಚಾರದಲ್ಲಿ ದಾಖಲೆ ಇಲ್ಲದೆ ನಾವು ಮಾತನಾಡುತ್ತಿಲ್ಲ. ನಾಳೆ ನ್ಯಾಷನಲ್ ಸೆಕ್ಯೂರಿಟಿ ಕೇಳಿದರೆ ದಾಖಲೆ ನೀಡಬೇಕಾಗುತ್ತದೆ. ಆದರಿಂದ ನಾವು ಹೇಳುವ ವಿಷಯ ಸತ್ಯಕ್ಕೆ ಹತ್ತಿರವಾದದ್ದು ಎಂದಿದ್ದಾರೆ.

ಇದನ್ನೂ ಓದಿ: ಲೋಕಸಭೆ ಭದ್ರತಾ ಲೋಪ: ಸಂಸದ ಪ್ರತಾಪ್ ಸಿಂಹ ಅಮಾನತಿಗೆ ಕಾಂಗ್ರೆಸ್ ನಾಯಕರ ಆಗ್ರಹ

ಇಲ್ಲಿಯವರೆಗೂ ಬಿಜೆಪಿ ಸಂಸದರು, ಸಚಿವರು, ಗೃಹ ಸಚಿವರು ಒಬ್ಬರು ಪ್ರತಿಕ್ರಿಯೆ ನೀಡಿಲ್ಲ. ಸ್ವತಃ ಪ್ರತಾಪ್ ಸಿಂಹ ಕೂಡ ಒಂದು ಪ್ರತಿಕ್ರಿಯೆ ನೀಡಿಲ್ಲ. ಘಟನೆ ನಡೆದು 24 ಗಂಟೆಯಾದರೂ ಒಂದು ಟ್ವೀಟ್​ ಮಾಡಿಲ್ಲ. ಇದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ನಾಳೆ ದಿನ ಕಾಂಗ್ರೆಸ್​ನವರೇ ಈ ಘಟನೆ ಮಾಡಿಸಿದ್ದೀರಿ ಎಂದು ಕತೆ ಕಟ್ಟಬಹುದು ಎಂದು ಕಿಡಿಕಾರಿದ್ದಾರೆ.

ಸಣ್ಣ ಸಣ್ಣ ವಿಷಯಗಳಿಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡುವ ಪ್ರತಾಪ್ ಸಿಂಹ ಯಾಕೆ ಮೌನವಾಗಿದ್ದಾರೆ? ಪ್ರತಾಪ್ ಸಿಂಹ ಏಲ್ಲಿ? ಡೆಲ್ಲಿ, ಕೊಡಗಿನಲ್ಲಿದ್ದಾರಾ? ಹೈಪೆರ್ ಆಗಿದ್ದ ವ್ಯಕ್ತಿ ಸೈಲೆಂಟ್ ಆಗಿರಲು ಕಾರಣವೇನು? ಇದು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ ಎಂದಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಭದ್ರತಾ ವೈಫಲ್ಯ: CRPF ಡಿಜಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ ಗೃಹ ಇಲಾಖೆ

ನಿನ್ನೆಯ ಘಟನೆಯಲ್ಲಿ ಒಬ್ಬ ಮುಸ್ಲಿಂ ಇದ್ದಿದ್ದರೆ ಅಥವಾ ಆ ಲೆಟರ್ ಕಾಂಗ್ರೆಸ್​ನವರು ನೀಡಿದ್ದರೆ ಇಷ್ಟೊತ್ತಿಗೆ ದೇಶವೇ ಹೊತ್ತಿ ಉರಿಯುತ್ತಿತ್ತು. ನಾಲ್ಕು ಲೇಯರ್ ಸೆಕ್ಯೂರಿಟಿ ಹೇಗೆ ದಾಟಿ ಹೋಗಿದ್ದಾರೆ? ಇದು ಪೂರ್ವ ನಿಯೋಜಿತ ಕೃತ್ಯ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:56 pm, Thu, 14 December 23

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​