Nanjangud: ಜಾತಿ, ಆದಾಯ ಪ್ರಮಾಣಪತ್ರ ನೀಡಲು ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮಲೆಕ್ಕಿಗ

ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಮಾಡಿಕೊಡಲು 1500 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ವೃತ್ತದಲ್ಲಿ ನಡೆದಿದೆ.

Nanjangud: ಜಾತಿ, ಆದಾಯ ಪ್ರಮಾಣಪತ್ರ ನೀಡಲು ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮಲೆಕ್ಕಿಗ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 20, 2023 | 9:04 PM

ಮೈಸೂರು: ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಮಾಡಿಕೊಡಲು 1500 ರೂಪಾಯಿ ಲಂಚ  (Bribery)  ಸ್ವೀಕರಿಸುತ್ತಿದ್ದಾಗ ಗ್ರಾಮಲೆಕ್ಕಿಗ ಲೋಕಾಯುಕ್ತ (Lokayukta Raid) ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ವೃತ್ತದಲ್ಲಿ ನಡೆದಿದೆ. ನಾಗರಾಜು ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮಲೆಕ್ಕಿಗ. ಲೋಕಾಯುಕ್ತ ಡಿವೈಎಸ್​ಪಿ ವಿ.ಕೃಷ್ಣಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದಾಗ ಲಂಚ ಪ್ರಕರಣ ಬೆಳಕಿಗೆ ಬಂದಿದೆ. ಮತ್ತೊಂದು ಪ್ರಕರಣದಲ್ಲಿ 45,000 ರೂ. ಲಂಚ ಸ್ವೀಕರಿಸುತ್ತಿದ್ದ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ರಾಯಚೂರು ನಗರಸಭೆ ಕಚೇರಿಯಲ್ಲಿ ನಡೆದಿದೆ. ಮಲ್ಲಿಕಾರ್ಜುನ ಬಲೆಗೆ ಬಿದ್ದ ನಗರಸಭೆ ನೈರ್ಮಲ್ಯ ವಿಭಾಗದ ಇಂಜಿನಿಯರ್​. ಕಾಮಗಾರಿ ಬಿಲ್​ ಪಾವತಿಗೆ ಗುತ್ತಿಗೆದಾರ ಭಗತ್ ಸಿಂಗ್​ನಿಂದ ಲಂಚ ಸ್ವೀಕರಿಸಿದ್ದಾರೆ. ಸದ್ಯ ಲೋಕಾ ಪೊಲೀಸರು ಮಲ್ಲಿಕಾರ್ಜುನ ನನ್ನು ಬಂಧಿಸಿದ್ದಾರೆ.

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಸಹಾಯಕ ಇಂಜಿನಿಯರ್: FIR ದಾಖಲು

ಬೆಂಗಳೂರು: 30 ಸಾವಿರ ರೂ. ಲಂಚ ಸ್ವೀಕರಿಸುವಾಗ ಬೆಸ್ಕಾಂ ಸಹಾಯಕ ಇಂಜಿನಿಯರ್​ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ರಾಜೇಶ್ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೊತ್ತನೂರು ಬೆಸ್ಕಾಂ ಸಹಾಯಕ ಇಂಜಿನಿಯರ್​. ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ರಾಜೇಶ್ ವಿರುದ್ಧ ಎಫ್​ಐಆರ್​ ಕೂಡ ದಾಖಲು ಮಾಡಲಾಗಿದೆ. ರಾಜೇಶ್​ ಕಚೇರಿಯಲ್ಲಿ 2 ಲಕ್ಷ ರೂ. ಹೆಚ್ಚುವರಿ ನಗದು ಕೂಡ ಪತ್ತೆ ಆಗಿದೆ. ಸದ್ಯ ರಾಜೇಶ್​ನನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಂಡ್ಯ ಜಿಲ್ಲೆ ಜೆಡಿಎಸ್​ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ: ಸಂಸದೆ ಸುಮಲತಾ

2 ಲಕ್ಷ 20 ಸಾವಿರ ರೂಪಾಯಿ ಲಂಚ

ಧಾರವಾಡ: ಕೆರೆ ಅಭಿವೃದ್ಧಿ ಕಾಮಗಾರಿಗಳ ಬಿಲ್ ಮಂಜೂರಾತಿಗಾಗಿ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಯನ್ನು ರೆಡ್​ ಹ್ಯಾಂಡ್ ಆಗಿ ಬಂಧಿಸಿದ್ದ ಘಟನೆ ಇತ್ತೀಚೆಗೆ ಧಾರವಾಡ ಜಿಲ್ಲೆ ನವಲೂರಿನ ವಿನಾಯಕನಗರದಲ್ಲಿ ನಡೆದಿತ್ತು.

ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ತಾಂತ್ರಿಕ ತಜ್ಞ ಹಾಗೂ ಪ್ರಭಾರ ಜಿಲ್ಲಾ ಕಾರ್ಯನಿರ್ವಾಣಾಧಿಕಾರಿ ಆಗಿರುವ ಶಿವಲಿಂಗಸ್ವಾಮಿ ಹಲಗಲಿಮಠ ಅವರು ಕೆರೆ ಅಭಿವೃದ್ಧಿ ಕಾಮಗಾರಿಗಳ ಬಿಲ್ ಮಂಜೂರಾತಿಗೆ ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಗುತ್ತಿಗೆದಾರ ಸುರೇಶ ಕಳಸೂರು ಎಂಬವರ ಬಳಿ 2 ಲಕ್ಷ 20 ಸಾವಿರ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ: ಕಾಂಗ್ರೆಸ್​​ನವರಿಗೆ ಧೈರ್ಯ​ ಇದ್ದರೆ ಲಿಂಗಾಯತ ಸಿಎಂ ಘೋಷಿಸಲಿ: ಜಿಎಂ ಸಿದ್ದೇಶ್ವರ್​​ ಸವಾಲು

ಈ ಬಗ್ಗೆ ಸುರೇಶ ಕಳಸೂರು ಅವರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ಅದರಂತೆ ಬೇಡಿಕೆ ಇಟ್ಟಿದ್ದ ಲಂಚದ ಹಣದ ಪೈಕಿ 1 ಲಕ್ಷ 20 ಸಾವಿರ ರೂಪಾಯಿಯನ್ನು ಮುಂಗಡವಾಗಿ ನೀಡಲು ವಿನಾಯಕನಗರದ 4ನೇ ಕ್ರಾಸ್​ನಲ್ಲಿ ಇರುವ ಭ್ರಷ್ಟ ಅಧಿಕಾರಿ ಶಿವಲಿಂಗಸ್ವಾಮಿ ಮನೆಗೆ ತೆರಳಿದ್ದರು. ಅಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಟ್ರ್ಯಾಪ್ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಶಿವಲಿಂಗಸ್ವಾಮಿಯನ್ನು ಬಂಧಿಸಿದ್ದರು.

ಕರ್ನಾಟಕ ವಿಧಾನಸಭೆ ಚುನಾವಣೆಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:04 pm, Thu, 20 April 23