ಪ್ರೇಯಸಿ ಸಾವಿನ ಸುದ್ದಿ ತಿಳಿದು ಪ್ರಿಯಕರ ನೇಣಿಗೆ ಶರಣು: ಒಂದು ಸಣ್ಣ ಮನಸ್ತಾಪದಿಂದ ಪ್ರೇಮಿಗಳು ದುರಂತ ಸಾವು

ಮೋನಿಕಾ ಮತ್ತು ಮನು ಇಬ್ಬರು ಪ್ರೇಮಿಗಳು. ಮೈಸೂರು ಮೂಲದವರಾದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಎರಡು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಮಧ್ಯ ಒಂದು ಒಂದು ಸಣ್ಣ ಮನಸ್ತಾಪ ಬಂದಿದ್ದು, ಇದೀಗ ಈ ಪ್ರೇಮಿಗಳು ಸಾವಿಗೆ ಶರಣಾಗಿದ್ದಾರೆ.

ಪ್ರೇಯಸಿ ಸಾವಿನ ಸುದ್ದಿ ತಿಳಿದು ಪ್ರಿಯಕರ ನೇಣಿಗೆ ಶರಣು: ಒಂದು ಸಣ್ಣ ಮನಸ್ತಾಪದಿಂದ ಪ್ರೇಮಿಗಳು ದುರಂತ ಸಾವು
ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು
Follow us
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ

Updated on: Jul 25, 2024 | 5:32 PM

ಮೈಸೂರು, (ಜುಲೈ 25):  ಕ್ಷುಲ್ಲಕ ಕಾರಣಕ್ಕೆ ಉಂಟಾದ ಒಂದು ಸಣ್ಣ ಮನಸ್ತಾಪಕ್ಕೆ ಪ್ರೇಮಿಗಳು ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಇಂದು (ಜುಲೈ 25)  ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರಿನ ಮಂಡಕಳ್ಳಿಯಲ್ಲಿ ಮೋನಿಕಾ, ಜ್ಯೋತಿನಗರದ ಮನು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಇಬ್ಬರ ಮಧ್ಯ ಬಂದ ಒಂದು ಮನಸ್ತಾಪಕ್ಕೆ ಇದೀಗ ಈ ಜೋಡಿ ಸಾವಿಗೆ ಶರಣಾಗಿದೆ.

ಮೈಸೂರಿನ ಮಂಡಕಳ್ಳಿಯಲ್ಲಿ ಮೋನಿಕಾ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರೇಯಸಿಯ ಸಾವಿನ ಸುದ್ದಿ ತಿಳಿದು ಇತ್ತ ಪ್ರಿಯಕರ ಮನು ಜ್ಯೋತಿನಗರದ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಪ್ರೇಮಿಗಳ ಮಧ್ಯ ಒಂದು ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಸಣ್ಣ ಗಲಾಟೆಯಾಗಿದೆ. ಇದರಿಂದ ಬೇಸತ್ತು ಮೊದಲಿಗೆ ಮೋನಿಕಾ ದಟ್ಟಗಳ್ಳಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಮೋನಿಕಾ ಸಾವಿನ ವಿಚಾರ ತಿಳಿಯುತ್ತಿದ್ದಂತೆಯೇ ಇತ್ತ ಮನು ಸಹ ಸಾವಿನ ಹಾದಿ ತುಳಿದಿದ್ದಾನೆ.

ಇದನ್ನೂ ಓದಿ: ಕುರಿಗಳ ರಕ್ಷಣೆಗೆ ಹೋಗಿ ಪ್ರಾಣಕ್ಕೆ ಕುತ್ತುತಂದುಕೊಂಡ ಕುರಿಗಾಯಿ: ಎನ್​ಸಿಸಿ ಬೆಟಾಲಿಯನ್ ಸಮಯಪ್ರಜ್ಞೆಯಿಂದ ಬದುಕುಳಿದ

ಈಜಲು ತೆರಳಿದ್ದ ಯುವಕ ಸಾವು

ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿದ್ದಾನೆ. ಮುಂಡಗೋಡ ತಾಲೂಕಿನ ಮುಡಸಾಲಿ ನಿವಾಸಿ ಶ್ರೀಕಾಂತ್(20) ಮೃತ ಯುವಕ. ನಿನ್ನೆ (ಜುಲೈ 24) 8 ಸ್ನೇಹಿತರ ಜೊತೆ ಮಳಗಿ ಧರ್ಮಾ ಡ್ಯಾಂ ವೀಕ್ಷಣೆಗೆ ತೆರಳಿದ್ದಾರೆ. ಈ ವೇಳೆ ಶ್ರೀಕಾಂತ್ ಸ್ನೇಹಿತನ ಜತೆ ಈಜಾಡಲು ಜಲಾಶಯಕ್ಕೆ ಜಿಗಿದಿದ್ದಾನೆ. ಆದ್ರೆ, ಮೇಲಕ್ಕೆ ಬರದೇ ನಾಪತ್ತೆಯಾಗಿದ್ದ. ಬಳಿಕ ಜೀವರಕ್ಷಕ ಸಿಬ್ಬಂದಿ ಹುಡುಕಾಟ ನಡೆಸಿ ಶ್ರೀಕಾಂತ್​ನ ಮೃತದೇಹ ಹೊರತೆಗೆದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ