ಮೈಸೂರು, (ಜುಲೈ 25): ಕ್ಷುಲ್ಲಕ ಕಾರಣಕ್ಕೆ ಉಂಟಾದ ಒಂದು ಸಣ್ಣ ಮನಸ್ತಾಪಕ್ಕೆ ಪ್ರೇಮಿಗಳು ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಇಂದು (ಜುಲೈ 25) ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರಿನ ಮಂಡಕಳ್ಳಿಯಲ್ಲಿ ಮೋನಿಕಾ, ಜ್ಯೋತಿನಗರದ ಮನು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಇಬ್ಬರ ಮಧ್ಯ ಬಂದ ಒಂದು ಮನಸ್ತಾಪಕ್ಕೆ ಇದೀಗ ಈ ಜೋಡಿ ಸಾವಿಗೆ ಶರಣಾಗಿದೆ.
ಮೈಸೂರಿನ ಮಂಡಕಳ್ಳಿಯಲ್ಲಿ ಮೋನಿಕಾ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರೇಯಸಿಯ ಸಾವಿನ ಸುದ್ದಿ ತಿಳಿದು ಇತ್ತ ಪ್ರಿಯಕರ ಮನು ಜ್ಯೋತಿನಗರದ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಪ್ರೇಮಿಗಳ ಮಧ್ಯ ಒಂದು ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಸಣ್ಣ ಗಲಾಟೆಯಾಗಿದೆ. ಇದರಿಂದ ಬೇಸತ್ತು ಮೊದಲಿಗೆ ಮೋನಿಕಾ ದಟ್ಟಗಳ್ಳಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಮೋನಿಕಾ ಸಾವಿನ ವಿಚಾರ ತಿಳಿಯುತ್ತಿದ್ದಂತೆಯೇ ಇತ್ತ ಮನು ಸಹ ಸಾವಿನ ಹಾದಿ ತುಳಿದಿದ್ದಾನೆ.
ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿದ್ದಾನೆ. ಮುಂಡಗೋಡ ತಾಲೂಕಿನ ಮುಡಸಾಲಿ ನಿವಾಸಿ ಶ್ರೀಕಾಂತ್(20) ಮೃತ ಯುವಕ. ನಿನ್ನೆ (ಜುಲೈ 24) 8 ಸ್ನೇಹಿತರ ಜೊತೆ ಮಳಗಿ ಧರ್ಮಾ ಡ್ಯಾಂ ವೀಕ್ಷಣೆಗೆ ತೆರಳಿದ್ದಾರೆ. ಈ ವೇಳೆ ಶ್ರೀಕಾಂತ್ ಸ್ನೇಹಿತನ ಜತೆ ಈಜಾಡಲು ಜಲಾಶಯಕ್ಕೆ ಜಿಗಿದಿದ್ದಾನೆ. ಆದ್ರೆ, ಮೇಲಕ್ಕೆ ಬರದೇ ನಾಪತ್ತೆಯಾಗಿದ್ದ. ಬಳಿಕ ಜೀವರಕ್ಷಕ ಸಿಬ್ಬಂದಿ ಹುಡುಕಾಟ ನಡೆಸಿ ಶ್ರೀಕಾಂತ್ನ ಮೃತದೇಹ ಹೊರತೆಗೆದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.