AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಒಂದು ವರ್ಷದ ಹಿಂದೆ ಮನೆ ಬಿಟ್ಟು ಓಡಿ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆಗೆ ಶರಣು

ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ಮನೆಯವರು ಪ್ರೀತಿ ಒಪ್ಪದ ಹಿನ್ನೆಲೆ ಒಂದು ವರ್ಷದ ಹಿಂದೆ ಅರ್ಚನಾ ಮತ್ತು ರಾಕೇಶ್​ ಓಡಿ ಹೋಗಿದ್ದರು. ಇಂದು (ಫೆಬ್ರವರಿ 23) ಗ್ರಾಮದ ಹೊರ ವಲಯದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು: ಒಂದು ವರ್ಷದ ಹಿಂದೆ ಮನೆ ಬಿಟ್ಟು ಓಡಿ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆಗೆ ಶರಣು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 23, 2022 | 12:50 PM

Share

ಮೈಸೂರು: ಪ್ರೇಮಿಗಳಿಬ್ಬರು ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಸಿಂಗಮಾರನಹಳ್ಳಿ ಬಳಿ ನಡೆದಿದೆ. ಅರ್ಚನಾ (17), ರಾಕೇಶ್ (24) ನೇಣಿಗೆ ಶರಣಾದ ದುರ್ದೈವಿಗಳು. ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ಮನೆಯವರು ಪ್ರೀತಿ(Love) ಒಪ್ಪದ ಹಿನ್ನೆಲೆ ಒಂದು ವರ್ಷದ ಹಿಂದೆ ಅರ್ಚನಾ ಮತ್ತು ರಾಕೇಶ್​ ಓಡಿ ಹೋಗಿದ್ದರು. ಇಂದು (ಫೆಬ್ರವರಿ 23) ಗ್ರಾಮದ ಹೊರ ವಲಯದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ(Police station) ಪ್ರಕರಣ ದಾಖಲಾಗಿತ್ತು.

ಉಳ್ಳಾಲ ಉರೂಸ್ ನಲ್ಲಿ ಜೈಂಟ್ ವ್ಹೀಲ್ ತುಂಡಾಗಿ ಮಕ್ಕಳಿಗೆ ಗಾಯ

ಮಂಗಳೂರು: ಉಳ್ಳಾಲದಲ್ಲಿ ನಡೆಯುತ್ತಿರುವ ಪಂಚ ವಾರ್ಷಿಕ ಉರೂಸ್ ಕಾರ್ಯಕ್ರಮದಲ್ಲಿ ಜಾಯಿಂಟ್ ವ್ಹೀಲ್ ತುಂಡಾಗಿ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಉರೂಸ್ ಪ್ರಯುಕ್ತ ದರ್ಗಾ ಸಂದರ್ಶನಕ್ಕೆಂದು ಬಂದಿದ್ದ ಕೇರಳ ಮೂಲದ ಕುಟುಂಬದ ನಾಲ್ವರು ಮಕ್ಕಳು ಸಂತೆಯಲ್ಲಿದ್ದ ಜಯಿಂಟ್ ವ್ಹೀಲ್ ನಲ್ಲಿ ಆಟವಾಡುತ್ತಿದ್ದರು. ಏಕಾಏಕಿ ವ್ಹೀಲ್ ಜಾಯಿಂಟ್ ತಪ್ಪಿದ ಪರಿಣಾಮ ನಾಲ್ವರು ಮಕ್ಕಳು ಕೆಳಕ್ಕೆ ಬಿದ್ದು ಗಾಯಗೊಂಡಿದ್ದಾರೆ.

ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಜನ ಜಮಾಯಿಸಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗಾಯಾಳು ಮಕ್ಕಳನ್ನು ಸ್ಥಳೀಯ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ. ಸ್ಥಳಕ್ಕಾಗಮಿಸಿದ ಉಳ್ಳಾಲ ಠಾಣಾ ಪೋಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಐದು ವರ್ಷಕ್ಕೊಮ್ಮೆ ನಡೆಯುವ ಉಳ್ಳಾಲ ದರ್ಗಾ ಉರೂಸ್ 2020ರಲ್ಲಿ ನಡೆಯಬೇಕಿತ್ತು. ಆದರೆ ಕೋವಿಡ್​ ಕಾರಣದಿಂದಾಗಿ ನಡೆದಿರಲಿಲ್ಲ. ಈ ಬಾರಿ ಹೆಚ್ಚು ಜನ ಸೇರಿದ್ದರು. ಅಂತಹ ಸಂದರ್ಭದಲ್ಲಿ ಈ ಅವಘಢ ನಡೆದಿದೆ ಎಂದು ಅಖಿಲ ಕರ್ನಾಟಕ ಸೂಫಿ ಸಂತರ ಸಂಘದ ಅಧ್ಯಕ್ಷ ಸೂಫಿ ವಲೀಬಾ ತಿಳಿಸಿದ್ದಾರೆ.

ಐತಿಹಾಸಿಕ ಪುಣ್ಯ ಸ್ಥಳವಾದ ಉಳ್ಳಾಲದ ಸಂತ ಋತುಬುಜ್ಜಮಾನ್ ಹಝ್ರತ್ ಅಸ್ಸಯದ್ ಮುಹಮ್ಮದ್ ಷರೀಫುಲ್ ಮದನಿ ಅವರ 492ನೇ ವಾರ್ಷಿನ ಮತ್ತು 21ನೇ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮ ಡಿಸೆಂಬರ್ 22 ರಿಂದ ಜನವರಿ 16 ರವರೆಗೂ ಆಯೋಜಿಸಲಾಗಿದೆ.

ಇದನ್ನೂ ಓದಿ: ಪುತ್ರನ ಸಾವಿನಿಂದ ಮನನೊಂದಿದ್ದ ದಂಪತಿ ಆತ್ಮಹತ್ಯೆ; ತಮಿಳುನಾಡಿನಲ್ಲೊಂದು ಮನಕಲಕುವ ಘಟನೆ

ಪ್ರೀತಿಸಿ ಮದುವೆಯಾದ ಜೋಡಿಯಿಂದ ಆತ್ಮಹತ್ಯೆ ಬೆದರಿಕೆ! ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ನವ ದಂಪತಿ

Published On - 12:41 pm, Wed, 23 February 22

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ