Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ 22ರಿಂದ ಜ.1ರವರೆಗೆ ಮೈಸೂರಿನಲ್ಲಿ ಮಾಗಿ ಉತ್ಸವ

ವರ್ಷಾಂತ್ಯಕ್ಕೆ ನಗರಕ್ಕೆ ಆಗಮಿಸುವ ಪ್ರವಾಸಿಗರಿಗಾಗಿ 10 ದಿನಗಳ ಕಾಲ ಮಾಗಿ ಉತ್ಸವ ಆಚರಿಸಲು ಸಿದ್ಧತೆಗಳು ನಡೆಯುತ್ತಿವೆ. ಮತ್ತೊಂದೆಡೆ ‘ಬ್ರ್ಯಾಂಡ್ ಮೈಸೂರು ಫೆಸ್ಟ್’ ಕೂಡ ಆಯೋಜಿಸಲಾಗಿದೆ. ಇದೇ ಡಿಸೆಂಬರ್​ 22ರಿಂದ ಜ.1ರವರೆಗೆ ಮೈಸೂರಿನಲ್ಲಿ ಮಾಗಿ ಉತ್ಸವ ನಡೆಯಲಿದೆ. ಮಾಗಿ ಉತ್ಸವದ ಅಂಗವಾಗಿ ಅರಮನೆಯಲ್ಲಿ ಫಲಪುಷ್ಪ ಪ್ರದರ್ಶನ ಇರಲಿದೆ. ಹಾಗೂ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತೆ.

ಡಿಸೆಂಬರ್​ 22ರಿಂದ ಜ.1ರವರೆಗೆ ಮೈಸೂರಿನಲ್ಲಿ ಮಾಗಿ ಉತ್ಸವ
ಸಾಂದರ್ಭಿಕ ಚಿತ್ರ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Dec 18, 2023 | 7:38 AM

ಮೈಸೂರು, ಡಿ.18: 2023ರಕ್ಕೆ ಗುಡ್ ಬೈ ಹೇಳಿ 2024ಕ್ಕೆ ವೆಲ್ ಕಮ್ ಮಾಡಲು ಕೌಂಟ್ ಡೌನ್ ಶುರುವಾಗಿದೆ. ಅರಮನೆ ನಗರಿ ಮೈಸೂರಿನಲ್ಲಿ (Mysuru) ಹೊಸ ವರ್ಷದ ಆಚರಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಪ್ರತಿ ವರ್ಷದಂತೆ ಈ ವರ್ಷವೂ ಮಾಗಿ ಉತ್ಸವದ (Magi Utsav) ರಂಗು ಎಲ್ಲೆಡೆ ಪಸರಿಸಿದೆ. ಚಳಿಗಾಲದ ಸಮಯ, ಕ್ರಿಸ್ಮಸ್, ನ್ಯೂ ಇಯರ್ ಸೆಲೆಬ್ರೇಷನ್​ಗೆ ಮೈಸೂರಿಗೆ ಬರುವ ಪ್ರವಾಸಿಗರಿಗಾಗಿ ಮೈಸೂರಿನಲ್ಲಿ ಮಾಗಿ ಉತ್ಸವ ಹಮ್ಮಿಕೊಳ್ಳಲಾಗುತ್ತಿದೆ. ಇದೇ ಡಿಸೆಂಬರ್​ 22ರಿಂದ ಜ.1ರವರೆಗೆ ಮೈಸೂರಿನಲ್ಲಿ ಮಾಗಿ ಉತ್ಸವ ನಡೆಯಲಿದೆ.

ವರ್ಷಾಂತ್ಯಕ್ಕೆ ನಗರಕ್ಕೆ ಆಗಮಿಸುವ ಪ್ರವಾಸಿಗರಿಗಾಗಿ 10 ದಿನಗಳ ಕಾಲ ಮಾಗಿ ಉತ್ಸವ ಆಚರಿಸಲು ಸಿದ್ಧತೆಗಳು ನಡೆಯುತ್ತಿವೆ. ಮತ್ತೊಂದೆಡೆ ‘ಬ್ರ್ಯಾಂಡ್ ಮೈಸೂರು ಫೆಸ್ಟ್’ ಕೂಡ ಆಯೋಜಿಸಲಾಗಿದೆ. ಸಾಮಾನ್ಯವಾಗಿ ವರ್ಷಾಂತ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರಿಗೆ ಆಗಮಿಸುತ್ತಾರೆ. ಬಳಿಕ ಪ್ರವಾಸಿಗರ ಸಂಖ್ಯೆ ಕಡಿಮೆಯಾಗುತ್ತದೆ. ಹೀಗಾಗಿ ಜನವರಿ ಮೊದಲ ಅಥವಾ ಎರಡನೇ ವಾರದಲ್ಲೂ ಪ್ರವಾಸಿಗರನ್ನು ಸೆಳೆಯಲು ಬ್ರ್ಯಾಂಡ್ ಮೈಸೂರು ಫೆಸ್ಟ್ ಆಯೋಜಿಸಲು ಉದ್ದೇಶಿಸಲಾಗಿದೆ.

ಇದನ್ನೂ ಓದಿ: ಕೇರಳದಲ್ಲಿ ಹೆಚ್ಚಿದ ಕೊರೊನಾ ಆತಂಕ; ಮೈಸೂರು ಜಿಲ್ಲೆಯಲ್ಲೂ ಹೈ ಅಲರ್ಟ್

ಇನ್ನು ಮಾಗಿ ಉತ್ಸವದ ಅಂಗವಾಗಿ ಅರಮನೆಯಲ್ಲಿ ಫಲಪುಷ್ಪ ಪ್ರದರ್ಶನ ಇರಲಿದೆ. ಹಾಗೂ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತೆ. ಮಾಗಿ ಉತ್ಸವದಲ್ಲಿ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಪ್ರವಾಸೋದ್ಯಮ ಇಲಾಖೆ, ಅರಮನೆ ಆಡಳಿತ ಮಂಡಳಿ ವತಿಯಿಂದ ಅನೇಕ ಕಾರ್ಯಕ್ರಮಗಳು ಜರುಗಲಿವೆ. ಫಲಪುಷ್ಪ ಪ್ರದರ್ಶನದ ಪೂರ್ವಭಾವಿ ಕೆಲಸ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಹಿನ್ನೆಲೆ ಇಂದಿನಿಂದ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಬ್ರೇಕ್ ನೀಡಲಾಗಿದೆ. ಅರಮನೆ ಆವರಣದಲ್ಲಿ ಸಂಜೆ ವೇಳೆ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಡಿ.18 ರಿಂದ ಜ.4 ರವರೆಗೆ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ.

ಮೈಸೂರು ಅರಮನೆ ಮಂಡಳಿ ವತಿಯಿಂದ ಮಾಗಿ ಉತ್ಸವ, ಪ್ರವಾಸೋದ್ಯಮ ಇಲಾಖೆಯಿಂದ ‘ಬ್ರ್ಯಾಂಡ್ ಮೈಸೂರು ಫೆಸ್ಟ್’ ಆಯೋಜಿಸಲಾಗುತ್ತಿದೆ. ಪ್ರತಿ ಬಾರಿ ಮಾಗಿ ಉತ್ಸವದಲ್ಲಿ ಕೇಕ್ ಉತ್ಸವವನ್ನು ಹೋಟೆಲ್ ಮಾಲೀಕರ ಸಂಘದ ಸಹಯೋಗದೊಂದಿಗೆ ಜಿಲ್ಲಾಡಳಿತ ಹಮ್ಮಿಕೊಳ್ಳುತಿತ್ತು. ಆದರೆ, ಕೇಕ್ ಉತ್ಸವ 2019ರಲ್ಲಿ ನಡೆದಿದ್ದೇ ಕೊನೆ. ಆ ನಂತರದ ಎರಡು ವರ್ಷಗಳು ಕೋವಿಡ್‌ನಲ್ಲಿ ಕಳೆದು ಹೋಯಿತು. 2022ರಲ್ಲಿ ಕೇಕ್ ಉತ್ಸವ ನಡೆದಿಲ್ಲ. ಈ ಬಾರಿಯೂ ಕೇಕ್ ಉತ್ಸವ ನಡೆಸಲು ಯಾವುದೇ ರೀತಿಯ ಸಭೆ ಹಾಗೂ ಚರ್ಚೆಗಳು ನಡೆದಿಲ್ಲ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ