ಮಹಿಷ ದಸರಾ: ಬಿಜೆಪಿ V/S ಪ್ರಗತಿಪರರ ಜಟಾಪಟಿ: ಚಾಮುಂಡಿ ಬೆಟ್ಟ ಸೇರಿ ಮೈಸೂರು ನಗರದಲ್ಲಿ ಸೆಕ್ಷನ್ 144 ಜಾರಿ

ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಹಾಗೂ ಸಭೆ-ಸಮಾರಂಭ ಮೆರವಣಿಗೆ, ಪ್ರತಿಭಟನೆ, ರ್ಯಾಲಿ ನಡೆಸಲು ಪ್ರಯತ್ನಿಸಿದಲ್ಲಿ, ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ, ಆದೇಶ ಉಲ್ಲಂಘನೆ ಕುರಿತಂತೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಮೈಸೂರು ಸಿಟಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಮಹಿಷ ದಸರಾ: ಬಿಜೆಪಿ V/S ಪ್ರಗತಿಪರರ ಜಟಾಪಟಿ: ಚಾಮುಂಡಿ ಬೆಟ್ಟ ಸೇರಿ ಮೈಸೂರು ನಗರದಲ್ಲಿ ಸೆಕ್ಷನ್ 144 ಜಾರಿ
ಮೈಸೂರು ನಗರ ಆಯುಕ್ತ ರಮೇಶ್ ಬಾನೋತ್
Follow us
ದಿಲೀಪ್​, ಚೌಡಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 12, 2023 | 2:48 PM

ಮೈಸೂರು, ಅ.12: ಮಹಿಷ ದಸರಾ(Mahisha Dasara) ಪರ-ವಿರೋಧ ವಿವಾದ ವಿಚಾರಕ್ಕೆ ಸಂಬಂಧಪಟ್ಟಂತೆ ಒಂದೆಡೆ ದಲಿತ ಸಮಿತಿಗಳು ಹಾಗೂ ಮಹಿಷ ದಸರಾ ಸಮಿತಿಯವರು ನಡೆಸಬೇಕು ಎಂದರೆ, ಇತ್ತ ಸಂಸದ ಪ್ರತಾಪ್​ ಸಿಂಹ ನೇತೃತ್ವದಲ್ಲಿ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋಗೆ ಕರೆ ಕೊಟ್ಟಿದ್ದರು. ಆದರೆ, ಮೈಸೂರು ನಗರ ಆಯುಕ್ತ ರಮೇಶ್ ಬಾನೋತ್ (Ramesh Banoth) ಅವರು ಎರಡು ಕಡೆಯವರ ಮನವಿಯನ್ನು ತಿರಸ್ಕರಿಸಿದ್ದರು. ಇದೀಗ ಕಾನೂನು ಮತ್ತು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಚಾಮುಂಡಿ ಬೆಟ್ಟ ಸೇರಿ (ಟೌನ್ ಹಾಲ್ ಹೊರತುಪಡಿಸಿ) ಮೈಸೂರು ನಗರದ ವ್ಯಾಪ್ತಿಯಲ್ಲಿ ಅ.12 ರ ಮಧ್ಯರಾತ್ರಿ 12-00 ಗಂಟೆಯಿಂದ ಅ.14 ರ ಬೆಳಿಗ್ಗೆ 06-00 ಗಂಟೆಯವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಮೈಸೂರು ಸಿಟಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಯಾವುದೇ ಸಭೆ-ಸಮಾರಂಭ, ರ್ಯಾಲಿ ಹಾಗೂ ಮೆರವಣಿಗೆ ನಡೆಸದಂತೆ ನಿಷೇಧ

1) ಯಾವುದೇ ಮೆರವಣಿಗೆ, ಪ್ರತಿಭಟನೆ, ರಾಲಿ, ಬೈಕ್ ರಾಲಿ, ನಡೆಸುವುದು. 2) ಪರ ವಿರೋಧ ಘೋಷಣೆ ಕೂಗುವುದು 3) ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸುವುದು 4) 05 ಜನರಿಗಿಂತ ಹೆಚ್ಚಿನ ಜನ ಗುಂಪು ಸೇರುವುದು. 5) ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದು. 6) ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪುಚಾರ, ಧ್ವನಿವರ್ಧಕ ಬಳಸುವುದು, ಫೆಕ್ಸ್ ಬ್ಯಾನರ್ ಅಳವಡಿಸುವುದು, ಕರಪತ್ರಗಳನ್ನು ಹಂಚುವುದು, ಮೂರ್ತಿ ಮೆರವಣಿಗೆ ಮಾಡುವುದು ನಿಷೇಧ.

ಇದನ್ನೂ ಓದಿ:ಮಹಿಷ ದಸರಾಗೆ ವಿರೋಧ: ಬರಿಗಾಲಲ್ಲಿ ಬೆಟ್ಟ ಹತ್ತಿ, ದುಷ್ಟರನ್ನು ಶಿಕ್ಷಿಸು ಎಂದು ಚಾಮುಂಡೇಶ್ವರಿಗೆ ಪಾರ್ಥನೆ

ಇತ್ಯಾದಿ ಸೇರಿದಂತೆ ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಹಾಗೂ ಸಭೆ-ಸಮಾರಂಭ ಮೆರವಣಿಗೆ, ಪ್ರತಿಭಟನೆ, ರ್ಯಾಲಿ ನಡೆಸಲು ಪ್ರಯತ್ನಿಸಿದಲ್ಲಿ, ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ, ಆದೇಶ ಉಲ್ಲಂಘನೆ ಕುರಿತಂತೆ ಕಾನೂನು ಕ್ರಮಕೈಗೊಳ್ಳಲಾಗುವುದು. ಹಾಗೂ ಈ ಆದೇಶವು ಮದುವೆ ಸಮಾರಂಭಗಳಿಗೆ ಮತ್ತು ಶವಸಂಸ್ಕಾರಗಳಿಗೆ ಹಾಗೂ ಶಾಲಾ, ಕಾಲೇಜು ಮತ್ತು ಪರೀಕ್ಷೆಗಳಿಗೆ ತೆರಳುವವರಿಗೆ ಅನ್ವಯಿಸುವುದಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Thu, 12 October 23

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್