ಮಹಿಷ ಮಂಡಲೋತ್ಸವ ಆಚರಣೆ; ನಾಳೆ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 28, 2024 | 5:26 PM

ನಾಳೆ(ಸೆ.29) ಚಾಮುಂಡಿ ಬೆಟ್ಟದಲ್ಲಿ ಮಹಿಷ ಮಂಡಲೋತ್ಸವ(Mahisha Mandalotsava) ಆಚರಣೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟ(Chamundi Hill)ಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಮಧ್ಯಾಹ್ನದವರೆಗೂ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶವಿರುದಿಲ್ಲ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಮಹಿಷ ಮಂಡಲೋತ್ಸವ ಆಚರಣೆ; ನಾಳೆ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ
ಮಹಿಷ ಮಂಡಲೋತ್ಸವ ಆಚರಣೆ ಹಿನ್ನಲೆ ನಾಳೆ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ
Follow us on

ಮೈಸೂರು, ಸೆ.28: ಚಾಮುಂಡಿ ಬೆಟ್ಟದಲ್ಲಿ ನಾಳೆ(ಸೆ.29) ಮಹಿಷ ಮಂಡಲೋತ್ಸವ(Mahisha Mandalotsava) ಆಚರಣೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟ(Chamundi Hill)ಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಮಧ್ಯಾಹ್ನದವರೆಗೂ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶವಿರುವುದಿಲ್ಲ.  ದಸರಾ ಹಿನ್ನೆಲೆಯಲ್ಲಿ ಸದ್ಯ ಬೆಟ್ಟದ ಮಹಿಷಾಸುರ ಪ್ರತಿಮೆಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದ್ದು, ಬಣ್ಣ ಒಣಗುವ ತನಕ ಪ್ರತಿಮೆಗೆ ಧೂಳು ಅಂಟದಂತೆ ಬಟ್ಟೆ ಹೊದಿಕೆ ಮಾಡಲಾಗಿದೆ.

ಇನ್ನು ಮೈಸೂರು ನಗರದಲ್ಲಿ ಮಹಿಷ ದಸರಾ ಆಚರಣೆ ಮಾಡಲು ಮಹಿಷಾ ದಸರಾ ಆಚರಣೆ ಸಮಿತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರ ಮಧ್ಯೆ ಈಗಾಗಲೇ ಮಹಿಷಾ ದಸರಾಗೆ ಪ್ರತಾಪ್‌ ಸಿಂಹ ವಿರೋಧ ವ್ಯಕ್ತಪಡಿಸಿದ್ದು, ಇದೀಗ ಮತ್ತೊಮ್ಮೆ ಕಿಡಿಕಾರಿದ್ದಾರೆ. ಮಹಿಷನಿಗೆ ಪುಷ್ಪಾರ್ಚನೆ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ?! ಬನ್ನಿ, ನೋಡೇ ಬಿಡೋಣ ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ:ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ, ನೋಡೇ ಬಿಡೋಣ: ಪ್ರತಾಪ್ ಸಿಂಹ ಸವಾಲ್​

ಇತ್ತ ಮಹಿಷ ಮಂಡಲೋತ್ಸವ ಆಚರಣೆ ವಿಚಾರವಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​.ಸಿ.ಮಹದೇವಪ್ಪ ಮಾತನಾಡಿ, ಯಾರು ಬೇಕಾದರೂ, ಯಾವ ತೊಂದರೆಯಾಗದಂತೆ ಅವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು. ಆದರೆ, ಕಾನೂನು ಸುವ್ಯವಸ್ಥೆಗೆ ದಕ್ಕೆ ಆಗಬಾರದು ಎಂದು ಹೇಳುವ ಮೂಲಕ ಮಹಿಷ ದಸರಾ ಆಚರಣೆಗೆ ಪರೋಕ್ಷವಾಗಿ ಮಹದೇವಪ್ಪ ಒಪ್ಪಿಗೆ ಸೂಚಿಸಿದ್ದಾರೆ. ಈ ಮಧ್ಯೆ ಮಹಿಷನಿಗೆ ಪುಷ್ಪಾರ್ಚನೆ ಮಾಡಲು ಅವಕಾಶ ಸಿಗುತ್ತಾ ಎಂಬ ಕುತೂಹಲ ಮೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Sat, 28 September 24