AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ವಿಖ್ಯಾತ ಮೈಸೂರು ಅರಮನೆ ಅಪಾಯದಲ್ಲಿದೆಯಾ? ಆ ಘಟನೆ ಮುನ್ಸೂಚನೆ ಕೊಡ್ತಾ?

ಮೈಸೂರು ಅರಮನೆ ಎಂದೂ ಕರೆಯಲ್ಪಡುವ ಅಂಬಾ ವಿಲಾಸ ಅರಮನೆಯು ಒಂದು ಕಾಲದಲ್ಲಿ ಮೈಸೂರು ಸಾಮ್ರಾಜ್ಯದ ಕೇಂದ್ರವಾಗಿತ್ತು. ಇದೀಗ ವಿಶ್ವ ವಿಖ್ಯಾತ ಮೈಸೂರು ಅರಮನೆ ಅಪಾಯದಲ್ಲಿದೆಯಾ? ಕಟ್ಟಡ ಶಿಥಿಲಗೊಂಡಿದೆಯಾ ? ಯಾವಾಗ ಬೇಕಾದರೂ ಕುಸಿದು ಬೀಳುತ್ತಾ ? ಇಂತಹ ಅನುಮಾನಕ್ಕೆ ಕಾರಣವಾಗಿರೋದು ಇಂದು ಅರಮನೆ ದ್ವಾರದ ಬಳಿಯ ಮೇಲ್ಚಾವಣಿಯ ಗಾರೆ ಕಳಚಿ ಕೆಳಗೆ ಬಿದ್ಷಿರುವುದು.

ವಿಶ್ವ ವಿಖ್ಯಾತ ಮೈಸೂರು ಅರಮನೆ ಅಪಾಯದಲ್ಲಿದೆಯಾ? ಆ ಘಟನೆ ಮುನ್ಸೂಚನೆ ಕೊಡ್ತಾ?
Mysuru Palace
ರಾಮ್​, ಮೈಸೂರು
| Edited By: |

Updated on:Dec 12, 2025 | 8:31 PM

Share

ಮೈಸೂರು, (ಡಿಸೆಂಬರ್ 12): ಮೈಸೂರು (Mysuru) ಅಂದ್ರೆ ತಟ್ಟನೆ ನೆನಪಾಗೋದು ಮೈಸೂರು ಅರಮನೆ (Mysuru Palace). ಇಂತಹ ಅರಮನೆ ಅಪಾಯದಲ್ಲಿದೆ. ಹೌದು ಮೈಸೂರು ಅರಮನೆಯ ವರಹಾ ದ್ವಾರದ ಕಮಾನಿನ ಮೇಲ್ಚಾವಣಿಯ ಗಾರೆ ಕಿತ್ತು ಕೆಳಗೆ ಬಿದ್ದಿದೆ. ಈ ವೇಳೆ ಅಲ್ಲಿ ಯಾರು ಇಲ್ಲದ ಕಾರಣ ಅದೃಷ್ಟವಶಾತ್ ಅಪಾಯ ತಪ್ಪಿದೆ. ಆ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ತಮ್ಮ ಬೈಕ್ ನಿಲ್ಲಿಸಿದ್ದು ಬೈಕ್ ಜಖಂಗೊಂಡಿದೆ. ಅಸಲಿಗೆ ಅರಮನೆ ನಿರ್ಮಿಸಿ 113 ವರ್ಷವಾಗಿದೆ. ಶತಮಾನದ ಹಳೆಯ ಕಟ್ಟಡಕ್ಕೆ ಕಾಯಕಲ್ಪ ನೀಡಬೇಕಾಗಿದೆ. ಇಲ್ಲವಾದರೆ ಅಪಾಯ ಕಟ್ಟಿಟ್ಟ ಬುತ್ತಿ.

ಹಿಂದೆ ಇದೇ ರೀತಿ ಮೈಸೂರಿನ ಪಾರಂಪರಿಕ ಕಟ್ಟಡಗಳಲ್ಲಿ ಒಂದಾದ ಲ್ಯಾನ್ಸಡೌನ್ ಕಟ್ಟಡ ಕುಸಿದು ಅಪಾರ ಸಾವು ನೋವು ಸಂಭವಿಸಿತ್ತು. ಮತ್ತೊಂದು ಕಡೆ ಮೈಸೂರು ರಾಜರು ಕಟ್ಟಿಸಿದ್ದ ದೇವರಾಜ ಮಾರುಕಟ್ಟೆನ ಒಂದು ಭಾಗ ಸಹ ಕುಸಿದು ಬಿದ್ದಿತ್ತು. ಇದೇ ಪರಿಸ್ಥಿತಿ ಮೈಸೂರು ಅರಮನೆಗೆ ಬರಬಾರದು ಎಂದಾದರೇ ತಕ್ಷಣ ಈ ಬಗ್ಗೆ ಸರ್ಕಾರ ಗಮನಹರಿಸಬೇಕಾಗಿದೆ.

ಇದನ್ನೂ ನೋಡಿ: ಮೈಸೂರು ಅರಮನೆಯ ಮುಖ್ಯದ್ವಾರದ ಮೇಲ್ಚಾವಣಿ ಕುಸಿತ: ತಪ್ಪಿದ ಅನಾಹುತ

ಮೈಸೂರು ಅರಮನೆಗಳ ನಗರ ಎಂದು ಕರೆಯಲ್ಪಡುತ್ತದೆ. “ಮೈಸೂರು ಅರಮನೆ” ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ. ಇದು ಹಿಂದಿನ ಮೈಸೂರು ಸಂಸ್ಥಾನದ ಒಡೆಯರ್ ವಂಶದ ಅರಸರ ನಿವಾಸ ಹಾಗೂ ದರ್ಬಾರು ಶಾಲೆಯಾಗಿದ್ದಿತು. ಈ ಅರಮನೆಯ ನಿರ್ಮಾಣ ಪ್ರಾರಂಭಿಸಿದ್ದು 1897ರಲ್ಲಿ. ಆದ್ರೆ, ನಿರ್ಮಾಣ ಮುಗಿದಿದ್ದು 1912ರಲ್ಲಿ. ಮೈಸೂರಿನ ಪ್ರವಾಸಿ ಆಕರ್ಷಣೆಗಳಲ್ಲಿ ಮುಖ್ಯವಾದ ಸ್ಥಳಗಳಲ್ಲಿ ಮೈಸೂರು ಅರಮನೆಯೂ ಒಂದು. ಈಗಿರುವ ಮೈಸೂರು ಅರಮನೆಯ ಜಾಗದಲ್ಲಿ ಮರದಿಂದ ನಿರ್ಮಾಣ ಮಾಡಿದ್ದ ಅರಮನೆ ಇತ್ತು. ಆದ್ರೆ, ಮರದ ಅರಮನೆಗೆ ಬೆಂಕಿ ಬಿದ್ದು ಸುಟ್ಟು ಹೋದ ನಂತರ ಈಗಿರುವ ಅರಮನೆ ಕಟ್ಟಲಾಗಿತ್ತು ಎನ್ನಲಾಗಿದೆ.

ಇದೀಗ ವಿಶ್ವವಿಖ್ಯಾತ ಮೈಸೂರು ಅರಮನೆಯ ವರಾಹ ದ್ವಾರದ ಛಾವಣಿಯ ಗಾರೆ ಕುಸಿದಿರುವ ಘಟನೆ ಎಚ್ಚರಿಕೆ ಗಂಟೆಯಾಗಿದೆ. ಮುಂದೆ ಆಗಬಹುದಾದ ಅಪಾಯದ ಮುನ್ಸೂಚನೆಯಾಗಿದೆ. ಮುಂದೆ ಇದು ಹೀಗೆ ಇರುತ್ತೆ ಅಂತ ಹೇಳಕ್ಕಾಗಲ್ಲ. ಹೀಗಾಗಿ ಆದಷ್ಟು ಬೇಗ ವಿಶ್ವವಿಖ್ಯಾತ ಮೈಸೂರು ಅರಮನೆಗೆ ಕಾಯಕಲ್ಪ ನೀಡುವ ಕೆಲಸ ಆಗಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:30 pm, Fri, 12 December 25

46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!