ಮೈಸೂರು ಅರಮನೆ ಬಳಿ ಸ್ಫೋಟ: ಹತ್ತಾರು ಅನುಮಾನ; ಇಬ್ಬರ ವಿಚಾರಣೆ
ಮೈಸೂರು ಅರಮನೆ ಬಳಿ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರಂಭದಲ್ಲಿ ಸಾಮಾನ್ಯವೆಂದು ಭಾವಿಸಲಾಗಿದ್ದ ಈ ಸ್ಫೋಟದಲ್ಲಿ ಗಂಭೀರ ವಿಚಾರಗಳಿರುವ ಸಾಧ್ಯತೆ ಅನುಮಾನಕ್ಕೆ ಕಾರಣವಾಗಿದೆ. ಎನ್‌ಐಎ ಅಧಿಕಾರಿಗಳ ತಂಡ ಮೈಸೂರಿಗೆ ಆಗಮಿಸಿ, ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ಸಂಪೂರ್ಣ ಮಾಹಿತಿ ಕಲೆ ಹಾಕಲಿದೆ.
ಮೈಸೂರು, ಡಿಸೆಂಬರ್ 26: ಮೈಸೂರು ಅರಮನೆ ಬಳಿ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ದೊರೆತಿದೆ. ಆರಂಭದಲ್ಲಿ ಇದೊಂದು ಸಾಮಾನ್ಯ ಸ್ಫೋಟ, ಬಹುಶಃ ಗ್ಯಾಸ್ ತುಂಬಿಸುವ ವೇಳೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಈಗ ಈ ಘಟನೆಯಲ್ಲಿ ಹಲವು ಗಂಭೀರ ವಿಚಾರಗಳು ಅಡಗಿವೆ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳ ತಂಡ ಮೈಸೂರಿಗೆ ಆಗಮಿಸಲಿದೆ. ಘಟನೆಯಲ್ಲಿ ಮೃತಪಟ್ಟಿರೋ ಸಲೀಂ ಜತೆ ವಾಸವಿದ್ದ ಇಬ್ಬರನ್ನು ಪೊಲೀಸರು ಈಗಾಗಲೇ ವಿಚಾರಣೆಗೆ ಕರೆದೊಯ್ದಿದ್ದಾರೆ.ಪ್ರತಿ ದಿನ ಸಲೀಂ ಜೊತೆ ಬಲೂನ್ ಮಾರಲು ಹೋಗುತ್ತಿದ್ದ ಈ ಇಬ್ಬರು, ನಿನ್ನೆ ರೂಂನಲ್ಲಿಯೇ ಇದ್ದರು ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
