ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ ಯುವಕ ಸಾವು; ಐವರಿಗೆ ಮುಂದುವರೆದ ಚಿಕಿತ್ಸೆ

| Updated By: ಆಯೇಷಾ ಬಾನು

Updated on: May 21, 2024 | 12:45 PM

ಮೈಸೂರು ತಾಲೂಕಿನ ಕೆ.ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಕೆಲ ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ. ಈ ಪೈಕಿ ಓರ್ವ ಯುವಕ ಮೃತಪಟ್ಟಿದ್ದು ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದ ಹಲವರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಗ್ರಾಮಕ್ಕೆ ವೈದ್ಯಾಧಿಕಾರಿಗಳು ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ.

ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ ಯುವಕ ಸಾವು; ಐವರಿಗೆ ಮುಂದುವರೆದ ಚಿಕಿತ್ಸೆ
ಕನಕರಾಜು
Follow us on

ಮೈಸೂರು, ಮೇ.21: ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೈಸೂರು ತಾಲೂಕಿನ ಡಿ.ಸಾಲುಂಡಿ ಗ್ರಾಮದ ಕನಕರಾಜು(20) ಮೃತ ದುರ್ದೈವಿ. ವಾಂತಿ ಭೇದಿಯಿಂದ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ಕನಕರಾಜು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೈಸೂರು ತಾಲೂಕಿನ ಕೆ.ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ. ಕಲುಷಿತ ನೀರು ಸೇವಿಸಿ ಗ್ರಾಮಸ್ಥರಿಗೆ ವಾಂತಿ, ಭೇದಿ ಶುರುವಾಗಿದೆ. ಹೀಗಾಗಿ ಐವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಮಕ್ಕಳು,‌ ಮೂವರು ಮಹಿಳೆರಿಗೆ ಚಿಕಿತ್ಸೆ ಮುಂದುವರೆದಿದೆ. ಇನ್ನು ಗ್ರಾಮದ ಹಲವರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಗ್ರಾಮಕ್ಕೆ ವೈದ್ಯಾಧಿಕಾರಿಗಳು ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ. ಕೆ.ಸಾಲುಂಡಿ ನೀರು ತುಂಬಿದ ಟ್ಯಾಂಕ್​ನಿಂದ ಮನೆಗಳಿಗೆ ನಲ್ಲಿ ಮೂಲಕ ನೀರು ಬರುತ್ತೆ. ಈ ನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನ ನಾಲ್ಕು ಕಡೆ ಅಧಿಕಾರಿಗಳ ದಾಳಿ

ಇನ್ನು ಮೈಸೂರು ಡಿಹೆಚ್​​ಒ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮಾಡಿ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಸೂಚನೆ ನೀಡಿದ್ದಾರೆ. ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಇನ್ನು ಮತ್ತೊಂದೆಡೆ ಘಟನೆ ಸಂಬಂಧ ಕನಕರಾಜ್ ಸಂಬಂಧಿ ಪಚ್ಚೇಗೌಡ ಮಾತನಾಡಿದ್ದು, ಚಿಕಿತ್ಸೆಗೆ ಹಣವಿಲ್ಲದೆ ಇದ್ದದ್ದೆ ಯುವಕ ಕನಕರಾಜ್ ಸಾವಿಗೆ ಕಾರಣ ಎಂದಿದ್ದಾರೆ. ನಿನ್ನೆ ಬೆಳಗ್ಗೆ 5 ಗಂಟೆಗೆ ಯುವಕ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದಾನೆ. ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸಲಹೆ ನೀಡಿದ್ದರು, ಆಸ್ಪತ್ರೆಗೆ‌ ಕಟ್ಟಲು ಹಣವಿಲ್ಲದ ಕಾರಣ ಮಾತ್ರೆ ತೆಗೆದುಕೊಂಡು ವಾಪಸ್ ತರೆಳಿದ್ದ. ಸಂಜೆ ಮತ್ತೆ ತೀವ್ರ ಅಸ್ವಸ್ಥಗೊಂಡ ಕನಕರಾಜ್ ಆಸ್ಪತ್ರೆಗೆ ದಾಖಲಾಗಿದ್ದ. ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕನಕರಾಜ್ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಸಾಕಷ್ಟು ಬಡತನವಿದೆ. ರಾಜ್ಯ ಸರ್ಕಾರ ಕೂಡಲೇ ಪರಿಹಾರ ಕೊಡಬೇಕು ಎಂಉದ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೌಟುಂಬಿಕ ಕಲಹ, ಪತಿಯಿಂದಲೇ ಪತ್ನಿಯ ಹತ್ಯೆ

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತುರಗನೂರು ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೇ ಪತ್ನಿಯ ಹತ್ಯೆಯಾದ ಘಟನೆ ನಡೆದಿದೆ. ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಾಗೂ ಸಿನಿಮಾದಲ್ಲಿ ಸಹಾಯಕ ಪಾತ್ರದಲ್ಲಿ ನಟಿಸುತಿದ್ದ ವಿದ್ಯಾಳನ್ನು ಪತಿ ಕೊಲೆ ಮಾಡಿದ್ದಾನೆ. ಗಂಡ-ಹೆಂಡತಿ ನಡುವೆ ಮಾತಿಗೆ ಮಾತು ಬೆಳೆದಿದ್ದು ಪತಿ ನಂದೀಶ್​ ಪತ್ನಿ ವಿದ್ಯಾಳನ್ನು ಕೊಲೆ ಮಾಡಿದ್ದಾನೆ. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಿಟ್ ಆ್ಯಂಡ್ ರನ್​ಗೆ ಯುವತಿ ಬಲಿ

ಲಾರಿ ಡಿಕ್ಕಿಯಾಗಿದ್ರಿಂದ ಬೈಕ್​ನಲ್ಲಿದ್ದ 18 ವರ್ಷದ ಮೇಘನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರದ ಬಳಿ ಘಟನೆ ನಡೆದಿದ್ದು, ಹಿಟ್ ಆ್ಯಂಡ್ ರನ್​ಗೆ ಬೈಕ್ ಸವಾರ ಕೈಲಾಶ್ ಗಂಭೀರವಾಗಿ ಗಾಯಗೊಂಡಿದ್ದು, ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸದ್ಯ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:38 am, Tue, 21 May 24