Mysuru Crime: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನಿಗೆ ಚಾಕು ಇರಿದ ಅಪರಿಚಿತ ವ್ಯಕ್ತಿ

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಸಮೀಪದ ಕೊಳಘಟ್ಟ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವಾಹನ ಗುದ್ದಿದೆ.

Mysuru Crime: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನಿಗೆ ಚಾಕು ಇರಿದ ಅಪರಿಚಿತ ವ್ಯಕ್ತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Dec 08, 2021 | 8:09 AM

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ವ್ಯಕ್ತಿ ಆಟೋ ಚಾಲಕನಿಗೆ ಚಾಕು ಇರಿದ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದೆ. ತೌಸಿಫ್‌ಬಿನ್ ಫೀರ್ ಪಾಷಾ(35)ಗೆ ಚಾಕು ಇರಿಯಲಾಗಿದೆ. ಸದ್ಯ ಗಾಯಾಳು ಪಾಷಾಗೆ ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜಯಲಕ್ಷ್ಮೀಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪರಿಚಿತ ವಾಹನ ಡಿಕ್ಕಿ ಪಾದಚಾರಿ ಸ್ಥಳದಲ್ಲೇ ಸಾವು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಸಮೀಪದ ಕೊಳಘಟ್ಟ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವಾಹನ ಗುದ್ದಿದೆ. ಇದರಿಂದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ವಾಹನ ಮತ್ತು ಮೃತನ ಗುರುತು ಪತ್ತೆಯಾಗಿಲ್ಲ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿಡಿಗೇಡಿಗಳಿಂದ ಸಿದ್ಧಲಿಂಗೇಶ್ವರಸ್ವಾಮಿ ವಿಗ್ರಹ ಧ್ವಂಸ ಇನ್ನು ಮತ್ತೊಂದೆಡೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕು ವ್ಯಾಪ್ತಿಯಲ್ಲಿ ಬರುವ ಮಠದ ಕಾವಲ್ ಅರಣ್ಯ ಪ್ರದೇಶದಲ್ಲಿರುವ ದೇವಾಲಯದ ಬಾಗಿಲು ಮುರಿದು ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಅಲ್ಲದೆ ಸಿದ್ಧಲಿಂಗೇಶ್ವರಸ್ವಾಮಿ ವಿಗ್ರಹ ಧ್ವಂಸ ಮಾಡಿದ್ದಾರೆ. ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಎಷ್ಟೇ ಟ್ರೋಲ್​ ಮಾಡಿದ್ರೂ ಜಗ್ಗಲ್ಲ ಈ ಯುವತಿ; ಇಷ್ಟೊಂದು ನೆಗೆಟಿವ್​ ಕಮೆಂಟ್​ ಬರಲು ಕಾರಣ ಏನು?