AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಮಕ್ಕಳನ್ನು ಕುಳಿಸಿಕೊಂಡು ದ್ವಿಚಕ್ರ ವಾಹನ ಚಲಾಯಿಸಿದ ವ್ಯಕ್ತಿ: ವಿಡಿಯೋ ವೈರಲ್

ಮೈಸೂರು-ನಂಜನಗೂಡು ರಸ್ತೆಯಲ್ಲಿ ವ್ಯಕ್ತಿಯೊಬ್ಬ ಬೈಕ್ ಹಿಂಭಾಗದ ಲೋಹದ ಬುಟ್ಟಿಯಲ್ಲಿ 5 ಮಕ್ಕಳು ಸೇರಿ ಒಟ್ಟು 6 ಮಂದಿಯನ್ನು ಕುಳಿಸಿಕೊಂಡು ಅಪಾಯಕಾರಿಯಾಗಿ ಬೈಕ್ ಚಲಾಯಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ರೀತಿಯಲ್ಲಿ ಒಂದೇ ದ್ವಿಚಕ್ರ ವಾಹನದಲ್ಲಿ ಹಲವು ಮಕ್ಕಳನ್ನು ಕರೆದೊಯ್ಯುತ್ತಿರುವುದು ಅಪಾಯಕಾರಿ ಎಂದು ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ.

6 ಮಕ್ಕಳನ್ನು ಕುಳಿಸಿಕೊಂಡು ದ್ವಿಚಕ್ರ ವಾಹನ ಚಲಾಯಿಸಿದ ವ್ಯಕ್ತಿ: ವಿಡಿಯೋ ವೈರಲ್
6 ಮಕ್ಕಳನ್ನುಕುಳಿಸಿಕೊಂಡು ದ್ವಿಚಕ್ರ ವಾಹನ ಚಲಾಯಿಸಿದ ವ್ಯಕ್ತಿImage Credit source: sanatan_kannada X Page
ಪ್ರಸನ್ನ ಹೆಗಡೆ
|

Updated on:Sep 22, 2026 | 6:27 PM

Share

ಮೈಸೂರು, ಸೆಪ್ಟೆಂಬರ್​​ 22: ಮೈಸೂರು-ನಂಜನಗೂಡು ರಸ್ತೆಯಲ್ಲಿ ಮಕ್ಕಳನ್ನು ಲೋಹದ ಬುಟ್ಟಿಯೊಂದರಲ್ಲಿ ಕುಳಿಸಿಕೊಂಡು ವ್ಯಕ್ತಿಯೋರ್ವ ದ್ವಿಚಕ್ರ ವಾಹನ ​​ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಮಕ್ಕಳು ಸೇರಿದಂತೆ ಒಟ್ಟು 7 ಮಂದಿ ದ್ವಿಚಕ್ರ ವಾಹನದಲ್ಲಿ ಇರುವುದನ್ನು ವಿಡಿಯೋದಲ್ಲಿ ಗಮನಿಸಬಹುದಾಗಿದ್ದು, ಘಟನೆ ರಸ್ತೆ ಸುರಕ್ಷತಾ ಕ್ರಮಗಳ ಪಾಲನೆ ಎಷ್ಟರ ಮಟ್ಟಿಗೆ ಕರ್ನಾಟಕದಲ್ಲಿ ಜಾರಿಯಲ್ಲಿದೆ ಎಂಬ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ.

ವೈರಲ್​​ ವಿಡಿಯೋದಲ್ಲಿ ಏನಿದೆ?

ಬೈಕ್​​ ಹಿಂಭಾಗಕ್ಕೆ ಅಳವಡಿಸಿರುವ ಲೋಹದ ಬುಟ್ಟಿಯಂತಹ ರಚನೆಯಲ್ಲಿ 5 ಮಕ್ಕಳು ಕಿಕ್ಕಿರಿದು ಕುಳಿತಿದ್ದರೆ, ಮತ್ತೊಂದು ಮಗು ಸವಾರನ ಮುಂಭಾಗದಲ್ಲಿ ಕುಳಿತಿರುವಂತೆ ವಿಡಿಯೋದಲ್ಲಿ ಕಾಣಿಸುತ್ತದೆ. ಬೈಕ್​​ ಚಾಲನೆ ಮಾಡುತ್ತಿರುವ ವ್ಯಕ್ತಿ ಹೆಲ್ಮೆಟ್​​ ಧರಿಸಿರುವುದನ್ನು ಗಮನಿಸಬಹುದಾಗಿದ್ದರೂ, ಮಕ್ಕಳು ಮಾತ್ರ ಯಾವುದೇ ಸುರಕ್ಷಾ ಸಾಧನಗಳನ್ನು ಧರಿಸದೆ ಇರುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಕಾಣುತ್ತದೆ.

ಇದನ್ನೂ ಓದಿ:  ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು: ಮಜ್ಜಿಗೆ, ನೀರು ವಿತರಣೆ

ನೆಟ್ಟಿಗರ ಆತಂಕ

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ರೀತಿಯಲ್ಲಿ ಒಂದೇ ದ್ವಿಚಕ್ರ ವಾಹನದಲ್ಲಿ ಹಲವು ಮಕ್ಕಳನ್ನು ಕರೆದೊಯ್ಯುತ್ತಿರುವುದು ಅಪಾಯಕಾರಿ ಎಂದು ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಒಬ್ಬ ಸಾಮಾಜಿಕ ಜಾಲತಾಣ ಬಳಕೆದಾರರು ಈ ಕೃತ್ಯವನ್ನು ತೀವ್ರ ಅಪಾಯಕಾರಿ ಎಂದು ಹೇಳಿದ್ದರೆ, ಮತ್ತೊಬ್ಬರು ಇಂತಹ ಅಸುರಕ್ಷಿತ ರೀತಿಯಲ್ಲಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮತ್ತೊಬ್ಬರು, ಭಾರತದ ಹಲವು ನಗರಗಳಲ್ಲಿ ಇಂತಹ ಪದ್ಧತಿ ಸಾಮಾನ್ಯವಾಗುತ್ತಿದೆ ಎಂದು ಹೇಳಿದ್ದಾರೆ. ವಿಡಿಯೋವನ್ನು ನಿಖರವಾಗಿ ಯಾವಾಗ ಚಿತ್ರೀಕರಿಸಲಾಗಿದೆ ಮತ್ತು ಈ ಸಂಬಂಧ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿದ್ದಾರೆಯೇ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:25 pm, Tue, 22 September 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ