
ಮೈಸೂರು, ಸೆಪ್ಟೆಂಬರ್ 22: ಮೈಸೂರು-ನಂಜನಗೂಡು ರಸ್ತೆಯಲ್ಲಿ ಮಕ್ಕಳನ್ನು ಲೋಹದ ಬುಟ್ಟಿಯೊಂದರಲ್ಲಿ ಕುಳಿಸಿಕೊಂಡು ವ್ಯಕ್ತಿಯೋರ್ವ ದ್ವಿಚಕ್ರ ವಾಹನ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಕ್ಕಳು ಸೇರಿದಂತೆ ಒಟ್ಟು 7 ಮಂದಿ ದ್ವಿಚಕ್ರ ವಾಹನದಲ್ಲಿ ಇರುವುದನ್ನು ವಿಡಿಯೋದಲ್ಲಿ ಗಮನಿಸಬಹುದಾಗಿದ್ದು, ಘಟನೆ ರಸ್ತೆ ಸುರಕ್ಷತಾ ಕ್ರಮಗಳ ಪಾಲನೆ ಎಷ್ಟರ ಮಟ್ಟಿಗೆ ಕರ್ನಾಟಕದಲ್ಲಿ ಜಾರಿಯಲ್ಲಿದೆ ಎಂಬ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ.
Last night on the Mysuru–Nanjangud Road: a man carrying five children on a TVS XL two-wheeler, as if transporting a load of chickens.
It was Sunday, a busy weekend, and the Ooty main road. Is anyone concerned about the safety of these children?
Vehicle No.: KA 09 JU 1459… pic.twitter.com/Arv77HDFLa
— ಸನಾತನ (सनातन) (@sanatan_kannada) September 21, 2026
ಬೈಕ್ ಹಿಂಭಾಗಕ್ಕೆ ಅಳವಡಿಸಿರುವ ಲೋಹದ ಬುಟ್ಟಿಯಂತಹ ರಚನೆಯಲ್ಲಿ 5 ಮಕ್ಕಳು ಕಿಕ್ಕಿರಿದು ಕುಳಿತಿದ್ದರೆ, ಮತ್ತೊಂದು ಮಗು ಸವಾರನ ಮುಂಭಾಗದಲ್ಲಿ ಕುಳಿತಿರುವಂತೆ ವಿಡಿಯೋದಲ್ಲಿ ಕಾಣಿಸುತ್ತದೆ. ಬೈಕ್ ಚಾಲನೆ ಮಾಡುತ್ತಿರುವ ವ್ಯಕ್ತಿ ಹೆಲ್ಮೆಟ್ ಧರಿಸಿರುವುದನ್ನು ಗಮನಿಸಬಹುದಾಗಿದ್ದರೂ, ಮಕ್ಕಳು ಮಾತ್ರ ಯಾವುದೇ ಸುರಕ್ಷಾ ಸಾಧನಗಳನ್ನು ಧರಿಸದೆ ಇರುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಕಾಣುತ್ತದೆ.
ಇದನ್ನೂ ಓದಿ: ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು: ಮಜ್ಜಿಗೆ, ನೀರು ವಿತರಣೆ
ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ರೀತಿಯಲ್ಲಿ ಒಂದೇ ದ್ವಿಚಕ್ರ ವಾಹನದಲ್ಲಿ ಹಲವು ಮಕ್ಕಳನ್ನು ಕರೆದೊಯ್ಯುತ್ತಿರುವುದು ಅಪಾಯಕಾರಿ ಎಂದು ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಒಬ್ಬ ಸಾಮಾಜಿಕ ಜಾಲತಾಣ ಬಳಕೆದಾರರು ಈ ಕೃತ್ಯವನ್ನು ತೀವ್ರ ಅಪಾಯಕಾರಿ ಎಂದು ಹೇಳಿದ್ದರೆ, ಮತ್ತೊಬ್ಬರು ಇಂತಹ ಅಸುರಕ್ಷಿತ ರೀತಿಯಲ್ಲಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮತ್ತೊಬ್ಬರು, ಭಾರತದ ಹಲವು ನಗರಗಳಲ್ಲಿ ಇಂತಹ ಪದ್ಧತಿ ಸಾಮಾನ್ಯವಾಗುತ್ತಿದೆ ಎಂದು ಹೇಳಿದ್ದಾರೆ. ವಿಡಿಯೋವನ್ನು ನಿಖರವಾಗಿ ಯಾವಾಗ ಚಿತ್ರೀಕರಿಸಲಾಗಿದೆ ಮತ್ತು ಈ ಸಂಬಂಧ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿದ್ದಾರೆಯೇ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:25 pm, Tue, 22 September 26