ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್​​ಗೂ, ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಇಲ್ಲ: ಸಿದ್ದರಾಮಯ್ಯ

ಆರೋಪಿ ಮಾಸ್ಕ್​, ಟೋಪಿ​ ಹಾಕಿಕೊಂಡು ಬಂದು ಸ್ಫೋಟಿಸಿದ್ದಾನೆ. ಹೋಟೆಲ್​​ನಲ್ಲಿ ತಿಂಡಿಯ ಟೋಕನ್​ ತೆಗೆದುಕೊಂಡಿದ್ದಾನೆ. ನಂತರ ಹೋಟೆಲ್​​ನಲ್ಲಿ ಕುಳಿತು ಟೈಮರ್​ ಫಿಕ್ಸ್​ ಮಾಡಿದ್ದಾನೆ. ಟೈಮರ್ ಫಿಕ್ಸ್​ ಮಾಡಿ ಇಟ್ಟು ಹೋಟೆಲ್​​ನಿಂದ ಹೊರಹೋಗಿದ್ದಾನೆ​. ಬಳಿಕ ಬ್ಲಾಸ್ಟ್​ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್​​ಗೂ, ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಇಲ್ಲ: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Mar 02, 2024 | 11:38 AM

ಮೈಸೂರು, ಮಾರ್ಚ್​ 02: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್​​ಗು (Cooker Bomb Blast), ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್​​ಗೂ (Bengaluru Rameshwaram Cafe Bomb Blast) ಸಾಮ್ಯತೆ ಇಲ್ಲ. ಮಂಗಳೂರಿನಲ್ಲಿ ಕುಕ್ಕರನಲ್ಲಿ ಆದ ಬ್ಲಾಸ್ಟ್, ಬೆಂಗಳೂರಿನಲ್ಲಿ ಯಾವ ಕುಕ್ಕರ್​​ನಲ್ಲೂ ಬ್ಲಾಸ್ಟ್ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಪಿ ಮಾಸ್ಕ್​, ಟೋಪಿ​ ಹಾಕಿಕೊಂಡು ಬಂದು ಸ್ಫೋಟಿಸಿದ್ದಾನೆ. ಆರೋಪಿಯು ಬಸ್​ನಿಂದ ಇಳಿದು ಹೋಟೆಲ್​ಗೆ ಹೋಗಿದ್ದಾನೆ. ಆರೋಪಿ ಬಸ್​ನಿಂದ ಇಳಿದು ಹೋಗಿರುವ ದೃಶ್ಯಾವಳಿಗಳು ಪತ್ತೆಯಾಗಿವೆ.  ಆರೋಪಿ ಕಪ್ಪು ಬಣ್ಣದ ಮಾಸ್ಕ್​ ಹಾಕಿಕೊಂಡು ಬಂದಿದ್ದನು. ಆರೋಪಿ ಟೋಪಿ ಹಾಕಿಕೊಂಡು ಬಂದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೋಟೆಲ್​​ನಲ್ಲಿ ತಿಂಡಿಯ ಟೋಕನ್​ ತೆಗೆದುಕೊಂಡಿದ್ದಾನೆ. ನಂತರ ಹೋಟೆಲ್​​ನಲ್ಲಿ ಕುಳಿತು ಟೈಮರ್​ ಫಿಕ್ಸ್​ ಮಾಡಿದ್ದಾನೆ. ಟೈಮರ್ ಫಿಕ್ಸ್​ ಮಾಡಿ ಇಟ್ಟು ಹೋಟೆಲ್​​ನಿಂದ ಹೊರಹೋಗಿದ್ದಾನೆ​. ಬಳಿಕ ಬ್ಲಾಸ್ಟ್​ ಆಗಿದೆ ಎಂದರು.

ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಇದು ಓರ್ವ ವ್ಯಕ್ತಿಯ ಕೃತ್ಯವಾ ಅಥವಾ ಸಂಘಟನೆಯ ಕೃತ್ಯವಾ ಗೊತ್ತಿಲ್ಲ. ಭಯೋತ್ಪಾದಕ ಕೃತ್ಯನಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ; ನಾಲ್ವರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

ಇನ್ನೂ ಎಫ್ಎಸ್ಎಲ್ ವರದಿ ಬಂದಿಲ್ಲ

ವಿಧಾನಸೌಧದಲ್ಲಿ ಪಾಕಿಸ್ತಾನ್​ ಜಿಂದಾಬಾದ್ ಘೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಇನ್ನೂ ಎಫ್ಎಸ್ಎಲ್ ವರದಿ ಬಂದಿಲ್ಲ. ತಪ್ಪು ಸಾಬೀತಾದರೆ ನಾವು ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ವರದಿ ಬಂರದೆ ಆರೋಪಗಳಿಗೆ ಏನೂ ಉತ್ತರ ಕೊಡಲಿ? ಎಂದರು.

ಅಲ್ಪಸಂಖ್ಯಾತ ತುಷ್ಟೀಕರಣದಿಂದ ಇಂತಹ ಕೃತ್ಯ ನಡೆದಿದೆ ಎಂಬ ಬಿಜೆಪಿ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ, ಬಿಜೆಪಿಯ ಕಾಲದಲ್ಲಿ ಆದ ಬಾಂಬ್ ಬ್ಲಾಸ್ಟ್​​ಗಳಿಗೆ ಏನು ಕಾರಣ? ಅದು ಅಲ್ಪಸಂಖ್ಯಾತರ ತುಷ್ಟೀಕರಣವಾ? ಬಿಜೆಪಿ ರಾಜಕೀಯಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದೆ. ಅಲ್ಪಸಂಖ್ಯಾರಿಗೂ ಇದಕ್ಕೂ ಏನು ಸಂಬಂಧ? ಬಿಜೆಪಿ ಇದನ್ನು ರಾಜಕೀಯ ಮಾಡುತ್ತಿದೆ ಅಷ್ಟೆ. ಈ ವಿಚಾರದಲ್ಲಿ ರಾಜಕೀಯ ಯಾರು ಮಾಡಬಾರದು ಎಂದು ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:03 am, Sat, 2 March 24

ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ