AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂದ್​..ಬಂದ್.. ಸಾರ್ವಜನಿಕರು ಮಂಗಳವಾರ ಮೈಸೂರು ಪ್ರವಾಸ ಮುಂದೂಡುವುದು ಬೆಸ್ಟ್..!

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಧಿಆಧಿರ್‌.ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ನಾಳೆ( ಜನವರಿ 7) ರಂದು ಮೈಸೂರು ಬಂದ್‌ಗೆ ಕರೆ ನೀಡಲಾಗಿದೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿಮಾನಿಗಳ ಹೋರಾಟ ಸಮಿತಿ ಬಂದ್​ಗೆ ಕರೆ ನೀಡಲಾಗಿದ್ದು, ಈ ಬಂದ್​ಗೆ ಕಾಂಗ್ರೆಸ್​ ಸೇರಿದಂತೆ ವಿವಿಧ ಸಂಘಟನೆಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ. ಇದರಿಂದ ಅರಮನೆನಗರಿ ಸಂಪೂರ್ಣ ಸ್ತಬ್ಧವಾಗುವುದು ಗ್ಯಾರಂಟಿ. ಹೀಗಾಗಿ ಮೈಸೂರು ಪ್ರವಾಸ ಕೈಬಿಡುವುದು ಒಳ್ಳೆಯದು.

ಬಂದ್​..ಬಂದ್.. ಸಾರ್ವಜನಿಕರು ಮಂಗಳವಾರ ಮೈಸೂರು ಪ್ರವಾಸ ಮುಂದೂಡುವುದು ಬೆಸ್ಟ್..!
Mysuru
ರಮೇಶ್ ಬಿ. ಜವಳಗೇರಾ
|

Updated on: Jan 06, 2025 | 9:44 PM

Share

ಮೈಸೂರು, ಜನವರಿ 06): ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ (ಜನವರಿ 7) ಮೈಸೂರು ಬಂದ್ ಗೆ ಕರೆ ನೀಡಲಾಗಿದೆ. ಅಂಬೇಡ್ಕರ್‌ ಅಭಿಮಾನಿಗಳ ಹೋರಾಟ ಸಮಿತಿ ನೀಡಿರುವ ಮೈಸೂರು ಬಂದ್​ಗೆ ವಿವಿಧ ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯಾಗಿದ್ದರಿಂದ ಬಂದ್ ಬಿಸಿ ಜೋರಿರಲಿದೆ. ಬೆಳಗ್ಗೆಯಿಂದ ಸಂಜೆಯವರೆಗೂ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಹೀಗಾಗಿ ಪ್ರವಾಸಿಗರು ಹಾಗೂ ಸಾರ್ವಜನಿಕರು ಮೈಸೂರಿನತ್ತ ಹೋಗುವುದಕ್ಕೂ ಮುನ್ನ ಒಮ್ಮೆ ಯೋಚಿಸುವುದು ಒಳಿತು.

ನಾಳೆ (ಮಂಗಳವಾರ) ಮೈಸೂರು ಬಂದ್​ಗೆ ದಲಿತ ಪರ ಸಂಘಟನೆಗಳು , ರೈತ ಪರ ಸಂಘಟನೆಗಳು, ಮುಸ್ಲಿಂ ಸಂಘಟನೆಗಳು, ಕಾರು ಚಾಲಕರ ಸಂಘಟನೆಗಳು, ಬೀದಿ ಬದಿ ವ್ಯಾಪಾರಿಗಳು ಬೆಂಬಲ ಬೆಂಬಲ ಸೂಚಿಸಿದ್ದು, ನಾಳೆ ಬೆಳಗ್ಗೆಯಿಂದ ಮಧ್ಯಾಹ್ನ 4 ಗಂಟೆ ವರೆಗೆ ಬಂದ್‌ ನಡೆಯಲಿದೆ ಎಂದು ಮಾಜಿ ಮೇಯರ್‌ ಪುರುಷೋತ್ತಮ್‌ ಹೇಳಿದ್ದಾರೆ.

ಹೋಟೆಲ್‌ ಮಾಲೀಕರ ಸಂಘ ಹಾಗೂ ಮೈಸೂರಿನ ಪ್ರವಾಸೋದ್ಯಮ ನೆಚ್ಚಿಕೊಂಡಿರುವ ಇತರ ಉದ್ಯಮಿಗಳು ನಾಳಿನ ಬಂದ್​ಗೆ ನೈತಿಕ ಬೆಂಬಲ ಸೂಚಿಸಿದ್ದು, ಕಾರ್ಮಿಕರು ಕೈಗೆ ಕಪ್ಪುಪಟ್ಟಿ ಧರಿಸಿ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಎಂದು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂದ್​ಗೆ ಕಾಂಗ್ರೆಸ್‌ ಬೆಂಬಲ

ನಾಳಿನ ಮೈಸೂರು ಬಂದ್​ಗೆ ಮೈಸೂರು ನಗರ ಕಾಂಗ್ರೆಸ್‌ ಹಾಗೂ ಜಿಲ್ಲಾ ಕಾಂಗ್ರೆಸ್‌ ಬೆಂಬಲ ನೀಡಲಿದ್ದು, ಬಂದ್​ನಲ್ಲಿ ಎಲ್ಲ ಕಾಂಗ್ರೆಸ್‌ ಶಾಸಕರು ಭಾಗವಹಿಸಲಿದ್ದಾರೆ. ಶಾಂತಿಯುತ ಬಂದ್​ಗೆ ನಾವು ಬೆಂಬಲ ನೀಡುತ್ತೇವೆ ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ವಿಜಯ್‌ ಕುಮಾರ್‌ ಹೇಳಿದ್ದಾರೆ.

ಮೈಸೂರು ಬಂದ್​ಗೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿದ್ದು, ಬಂದ್​ ವಿಚಾರವಾಗಿ ವರ್ತಕರು ಗೊಂದಲದಲ್ಲಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸುವ ಬಗ್ಗೆ ಜಿಲ್ಲಾಧಿಕಾರಿಗಳು ತೀರ್ಮಾನ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೈಸೂರು ಪ್ರವಾಸ ಮುಂದೂಡುವುದು ಬೆಸ್ಟ್

ಅಂದು ಮೈಸೂರು ಸಂಪರ್ಕಿಸುವ ಎಲ್ಲ ಹೆದ್ದಾರಿಗಳಲ್ಲಿ ವಾಹನಗಳ ಸಂಚಾರ ತಡೆ ಹಿಡಿಯಲು ತೀರ್ಮಾನಿಸಲಾಗಿದೆ. ಹೀಗಾಗಿ ಮೈಸೂರಿಗೆ ಭೇಟಿ ನೀಡುವವರು ಗಮನಿಸಬೇಕು. ಯಾಕಂದ್ರೆ ಯಾವುದೇ ಅಂಗಡಿಗಳು ತೆರದಿರುವುದಿಲ್ಲ. ಹಾಗೇ ವಾಹನ ಸಂಚಾರ ಅಷ್ಟಕ್ಕಷ್ಟೇ. ಆಟೋ ಸಂಚಾರ ಸಹ ಇರುವುದಿಲ್ಲ.

ಇನ್ನು ಪ್ರತಿಭಟನೆಕಾರರು ಅಲ್ಲಲ್ಲಿ ರಸ್ತೆಗಳನ್ನು ಬಂದ್ ಮಾಡುವ ಸಾಧ್ಯತೆಗಳಿವೆ. ಹೀಗಾಗಿ ಯಾವುದುಕ್ಕೂ ಮುಂಜಾಗ್ರತಾ ಕ್ರಮವಾಗಿ ನಾಳಿನ ಮೈಸೂರು ಪ್ರವಾಸ ಪ್ಲಾನ್ ಮುಂದೂಡುವುದು ಬೆಸ್ಟ್.

ಮಂಗಳವಾರ ಮಂಡ್ಯ ಸಹ ಬಂದ್

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ನಾಳೆ ಮಂಡ್ಯ ನಗರ ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ. ದಲಿತ, ರೈತ, ಅಲ್ಪಸಂಖ್ಯಾತ, ಹಿಂದುಳಿದ ಒಕ್ಕೂಟದ ವತಿಯಿಂದ ಬೆಳಗ್ಗೆ 6ಗಂಟೆಯಿಂದ ಸಂಜೆ ಆರು ಗಂಟೆವರೆಗೂ ಮಂಡ್ಯ ನಗರ ಬಂದ್ ಗೆ ಕರೆ ನೀಡಲಾಗಿದೆ. ಅಲ್ಲದೆ ಬೃಹತ್ ಪ್ರತಿಭಟನೆಯನ್ನ ಕೂಡ ನಡೆಸಲು ಹೋರಾಟಗಾರರು ಸಜ್ಜಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ