ಮಂಡ್ಯ-ಮೈಸೂರಿನಲ್ಲಿ ಜೋರಾದ ಕಾವೇರಿ ಕಿಚ್ಚು: ತಮಿಳುನಾಡಿಗೆ ನೀರು ಹರಿಸುವುದರ ವಿರುದ್ಧ ಸಿಡಿದೆದ್ದ ರೈತರು

ಮಂಡ್ಯ ಹಾಗೂ ಮೈಸೂರು ಭಾಗದಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಇಂದು(ಆಗಸ್ಟ್​ 23) ಸಹ ಮಂಡ್ಯ ಹಾಗೂ ಮೈಸೂರಿನಲ್ಲಿ ರೈತ ಸಂಘಟನೆಗಳ ಪ್ರತಿಭಟನೆಗಳು ಮುಂದುವರೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಹಾಗಾದ್ರೆ, ಮಂಡ್ಯ-ಮೈಸೂರಿನಲ್ಲಿ ರೈತರ ಪ್ರತಿಭಟನೆ ಹೇಗಿತ್ತು ಎನ್ನುವ ವಿವರ ಇಲ್ಲಿದೆ.

ಮಂಡ್ಯ-ಮೈಸೂರಿನಲ್ಲಿ ಜೋರಾದ ಕಾವೇರಿ ಕಿಚ್ಚು: ತಮಿಳುನಾಡಿಗೆ ನೀರು ಹರಿಸುವುದರ ವಿರುದ್ಧ ಸಿಡಿದೆದ್ದ ರೈತರು
ಮಂಡ್ಯ ರೈತರ ಪ್ರತಿಭಟನೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Aug 23, 2023 | 3:14 PM

ಮೈಸೂರು/ಮಂಡ್ಯ, (ಆಗಸ್ಟ್ 23): ತಮಿಳುನಾಡಿಗೆ ಕಾವೇರಿ ನೀರು(Cauvery water )ಬಿಡುಗಡೆ ಖಂಡಿಸಿ, ರಾಜ್ಯದ ಕಾವೇರಿ ಕಣಿವೆ ರೈತರು ರೊಚ್ಚಿಗೆದಿದ್ದಾರೆ. ಕರುನಾಡಿನಲ್ಲೇ ಬರದ ನೆರಳು ಇರುವಾಗ, ತಮಿಳುನಾಡಿಗೆ ನೀರು ಬಿಡುತ್ತಿರುವುದೇಕೆಂದು ಕಿಡಿ ಕಾರುತ್ತಿದ್ದಾರೆ. ಇಂದು (ಆಗಸ್ಟ್ 23) ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ರೈತರು ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದರು. ತಮಿಳುನಾಡಿಗೆ ನೂರು ಪೂರೈಕೆಯನ್ನು ವಿರೋಧಿಸಿ ಮೈಸೂರಿನ ನೀರಾವರಿ ಇಲಾಖೆಯ ಮುಖ್ಯ ಇಂಜಿನಿಯರ್ ಕಚೇರಿಯ ಮೇಲೆ ರೈತರು ಮುತ್ತಿಗೆ ಹಾಕಿದ್ದಾರೆ. ಇನ್ನು ಭಾರತೀಯ ಕಿಸಾನ್ ಸಂಘವು ಮಂಡ್ಯದ (Mandya) ವಿಶ್ವೇಶ್ವರಯ್ಯ ಪ್ರತಿಮೆಯ ಎದುರು ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದೆ.

ಮಂಡ್ಯದಲ್ಲಿ ಉಪವಾಸ ಸತ್ಯಾಗ್ರಹ

ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು( Kaveri water supply) ಖಂಡಿಸಿ ಭಾರತೀಯ ಕಿಸಾನ್ ಸಂಘವು ಮಂಡ್ಯದ (Mandya) ವಿಶ್ವೇಶ್ವರಯ್ಯ ಪ್ರತಿಮೆಯ ಎದುರು ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದೆ. ಕೆ ಆರ್ ಎಸ್ ಡ್ಯಾಂ ಬರಿದಾಗುತ್ತಿದೆ, ಕಾವೇರಿ ನದಿ ನಮ್ಮ ನಾಡಿನಲ್ಲಿದ್ದೂ ರೈತರಿಗೆ ಅನ್ಯಾಯವಾಗುತ್ತಿದೆ. ನ್ಯಾಯಾಲಯಕ್ಕೆ ವಸ್ತು ಸ್ಥಿತಿ ಮನವರಿಕೆ ಮಾಡಿಕೊಡಬೇಕಾಗಿತ್ತು ಎಂದು ಪ್ರತಿಭಟನಾಕಾರರು ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ತಮಿಳುನಾಡಿಗೆ ಏಕಾಏಕಿ ನೀರು ಬಿಡುತ್ತಿರುವುದು ರಾಜ್ಯಕ್ಕೆ ಮಾಡುವ ಅನ್ಯಾಯ, ಸರ್ಕಾರ ಮಂಡ್ಯ ಜಿಲ್ಲೆಯ ರೈತರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು. ಹೀಗೆ ನೀರು ಪೂರೈಕೆ ಮುಂದುವರೆಸಿದರೆ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಬಹುದು. ಆದ್ದರಿಂದ ಈ ಕೂಡಲೇ ತಮಿಳುನಾಡಿಗೆ ಪೂರೈಕೆಯಾಗುತ್ತಿರುವ ನೀರನ್ನು ನಿಲ್ಲಿಸಬೇಕು, ಇಲ್ಲವಾದಲ್ಲಿ ಅಮರಣಾಂತ ಉಪವಾಸ ಮಾಡುವುದಾಗಿ ಭಾರತೀಯ ಕಿಸಾನ್ ಸಂಘ ಎಚ್ಚರಿಸಿದೆ.

ಇದನ್ನೂ ಓದಿ: ಕರ್ನಾಟಕದ ನೀರಾವರಿ ಸಮಸ್ಯೆ: ಕೇಂದ್ರದ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ನಿರ್ಧಾರ- ಸಿದ್ದರಾಮಯ್ಯ

ಮೈಸೂರಿನಲ್ಲಿ ಕಾವೇರಿದ ಕಾವೇರಿ ಗಲಾಟೆ

ಇತ್ತ ಮೈಸೂರಿನಲ್ಲೂ ಸಹ ತಮಿಳುನಾಡಿಗೆ ನೂರು ಪೂರೈಕೆಯನ್ನು ವಿರೋಧಿಸಿ ನಗರದ ನೀರಾವರಿ ಇಲಾಖೆಯ ಮುಖ್ಯ ಇಂಜಿನಿಯರ್ ಕಚೇರಿಗೆ ರೈತರು ಮುತ್ತಿಗೆ ಹಾಕಿ ರಾಜ್ಯ ಸರ್ಕಾರದ ವಿರುದ್ಧ ಕಿರಿಕಾರಿದರು. ಗನ್ ಹೌಸ್ ವೃತ್ತದಿಂದ ಪ್ರತಿಭಟನೆ ಆರಂಭಿಸಿದ್ದ ರೈತರು, ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆದ್ರೆ, ಕಾಡಾ ಕಚೇರಿಯ ಮುಂಭಾಗ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ. ಇನ್ನು ಇದೇ ವೇಳೆ ಪ್ರತಿಭಟನಾಕಾರರು ಕಾಲಿ ಕೊಡ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್, ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಭಾಗಿಯಾಗಿದ್ದರು. ರೈತರ ಪ್ರತಿಭಟನೆಗೆ ಆಮ್ ಆದ್ಮಿ ಪಕ್ಷ ಬೆಂಬಲ ಸೂಚಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು