AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕಾವೇರಿ ನದಿಯಲ್ಲಿ 6 ಜನ‌ ಜಲಸಮಾಧಿ; ದರ್ಗಾಕ್ಕೆ ಬಂದವರು ದುರಂತ ಅಂತ್ಯ

ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಇಂದು ದುರಂತ ಸಂಭವಿಸಿದೆ. ಉರೂಸ್​ ಹಿನ್ನೆಲೆ ದರ್ಗಾಕ್ಕೆ ಬಂದಿದ್ದ 8 ಜನರ ತಂಡ ನದಿಯಲ್ಲಿ ಈಜಲು ತೆರಳಿದ್ದು, ಆರು ಮಂದಿ ನೀರುಪಾಲಾಗಿದ್ದಾರೆ. ಕೆ.ಆರ್.ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರು: ಕಾವೇರಿ ನದಿಯಲ್ಲಿ 6 ಜನ‌ ಜಲಸಮಾಧಿ; ದರ್ಗಾಕ್ಕೆ ಬಂದವರು ದುರಂತ ಅಂತ್ಯ
ಆಸ್ಪತ್ರೆ ಎದುರು ಜಮಾವಣೆಗೊಂಡಿರುವ ಜನರು Image Credit source: tv9 kannada
ರಾಮ್​, ಮೈಸೂರು
| Edited By: |

Updated on:Apr 19, 2026 | 7:55 PM

Share

ಮೈಸೂರು, ಏಪ್ರಿಲ್​ 19: ಕಾವೇರಿ ನದಿಯಲ್ಲಿ (Cauvery River) ಮುಳುಗಿ 6 ಜನ‌ ದುರ್ಮರಣ (death) ಹೊಂದಿರುವಂತಹ ಘಟನೆ ಜಿಲ್ಲೆ K.R.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿದೆ. ಉರೂಸ್​ ಹಿನ್ನೆಲೆ 8 ಜನರ ತಂಡ ದರ್ಗಾಕ್ಕೆ ಬಂದಿದ್ದು, ಈ ವೇಳೆ ನದಿಗೆ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದು, ಉಳಿದ 6 ಜನ ನೀರುಪಾಲಾಗಿದ್ದಾರೆ. ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಡೆದದ್ದೇನು? 

ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಇಂದು ಉರೂಸ್ ಹಿನ್ನೆಲೆ ದರ್ಗಾಕ್ಕೆ ಬೆಂಗಳೂರು ಮತ್ತು ಊಟಿಯಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಎಂಟು ಜನರ ತಂಡವೊಂದು ಅರ್ಕೇಶ್ವರ ದೇವಸ್ಥಾನದ ಸಮೀಪವಿರುವ ಕಾವೇರಿ ನದಿಗೆ ಈಜಲು ತೆರಳಿದ್ದಾರೆ. ಈ ವೇಳೆ ನದಿಯಲ್ಲಿ ಮುಳುಗಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಇಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ದುರದೃಷ್ಟವಶಾತ್ ಉಳಿದ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಮೃತರು

ಬೆಂಗಳೂರಿನ ಯಾಸಿನ್​(23) ಹಾಗೂ ಹೈಮಾ(13), ಊಟಿ ಮೂಲದ 38 ವರ್ಷದ ಸೈದ್ ಫಾತಿಮಾ, ಮೈಸೂರು ಜಿಲ್ಲೆಯ ನೇಹಾ(20), ಉಮೇರ್(7) ಮತ್ತು ಅಫಿಯಾ(20) ಮೃತರು. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತದೇಹಗಳನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಸಿಎಂ ಸಂತಾಪ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೈಸೂರಿನ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲಾದ ವಿಚಾರ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

ಇದನ್ನೂ ಓದಿ: ಅರಹಳ್ಳಿ ಕೆರೆಯಲ್ಲಿ ದುರಂತ: ಮಕ್ಕಳನ್ನು ರಕ್ಷಿಸಲು ಹೋಗಿ ಜೀವ ತೆತ್ತ ಮಹಿಳೆಯರು

ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ ಆರ್ಥಿಕ ಸವಾಲುಗಳು ಮತ್ತಷ್ಟು ಬಾಧಿಸದಿರಲಿ ಎಂಬ ಮಾನವೀಯ ಕಾಳಜಿಯೊಂದಿಗೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ದುರ್ಘಟನೆಯಲ್ಲಿ ರಕ್ಷಿಸಲ್ಪಟ್ಟು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:11 pm, Sun, 19 April 26

Follow Us
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು