ಮೈಸೂರು, ಜು.17: ಕೇರಳದ ವೈನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಕಬಿನಿ(Kabini Dam) ಒಡಲು ಭರ್ತಿಯಾಗಿದೆ. ಕಳೆದ ಒಂದು ತಿಂಗಳ ಹಿಂದೆ ಖಾಲಿ ಖಾಲಿಯಾಗಿದ್ದ ಜಲಾಶಯ ಇದೀಗ ಸಂಪೂರ್ಣ ತುಂಬಿದ್ದು, ಜಲಾಶಯದಲ್ಲಿ 83 ಅಡಿ ನೀರಿದೆ. ಹೌದು, ಮೈಸೂರು(Mysore)ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ವರ್ಷದಲ್ಲಿ ಎರಡು ಬಾರಿ ಮತ್ತು ರಾಜ್ಯದಲ್ಲೆ ಮೊದಲ ಬಾರಿಗೆ ತುಂಬುವ ಜಲಾಶಯ ಎಂಬ ಹೆಗ್ಗಳಿಕೆ ಇದೆ. ಇದೀಗ ಈ ಜಲಾಶಯಕ್ಕೆ 23 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಸದ್ಯ ಜಲಾಶಯ ಭರ್ತಿಯಾಗಿರುವ ಕಾರಣ ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಜಲಾಶಯದಿಂದ 25 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.
ಇದರಿಂದ ತಮಿಳುನಾಡಿಗೆ ನೀರು ಹರಿಸುವಂತೆ ಹೇಳಿದ್ದ CWRC ಆದೇಶ ಪಾಲನೆ ಮಾಡಿದಂತಾಗಿದ್ದು, ಈ ಮೂಲಕ ಸಂಕಷ್ಟ ಪರಿಹಾರವಾದಂತಾಗಿದೆ. ಆದರೆ, ಜಲಾಶಯ ಭರ್ತಿಯಾಗಿರುವ ಕಾರಣ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಈ ನಡುವೆ ನಂಜನಗೂಡಿನ ನಂಜುಂಡೇಶ್ವರ ದೇವಾಲಯ ಸ್ನಾನ ಘಟ್ಟ ಕೂಡ ಮುಳುಗಿದ್ದು, ಇದರಿಂದ ಭಕ್ತಾದಿಗಳು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ:ವಿಜಯನಗರ; ತುಂಗಾಭದ್ರ ಜಲಾಶಯದ ಹಿನ್ನೀರಿನಲ್ಲಿ ಪ್ರವಾಸಿಗರ ಹುಚ್ಚಾಟ, ವಿಡಿಯೋ ನೋಡಿ
ಅದಷ್ಟೆ ಅಲ್ಲದೆ. ಸ್ನಾನ ಘಟ್ಟದ ಬಳಿ ಬ್ಯಾರಿಕೇಡ್ ಅಳವಡಿಸಿ ದೇವಾಲಯ ಆಡಳಿತ ಮಂಡಳಿಯಿಂದ ಭಕ್ತಾಧಿಗಳಿಗೆ ಎಚ್ವರಿಕೆ ನೀಡಲಾಗುತ್ತಿದೆ. ಇದರ ಜೊತೆ 16 ಕಾಲು ಮಂಟಪ ಕೂಡ ಅರ್ಧದಷ್ಟು ಮುಳುಗಡೆಯಾಗಿದೆ. ಒಟ್ಟಾರೆ, ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಕೇರಳದಲ್ಲಿ ಮತ್ತಷ್ಟು ಮಳೆಯಾಗುವ ಮುನ್ಸೂಚನೆ ಇದೆ. ಹೀಗೆ ಮಳೆ ಪ್ರಮಾಣ ಹೆಚ್ಚಾದರೆ ನದಿಗೆ ಮತ್ತಷ್ಟು ನೀರನ್ನು ಬಿಡುವ ಸಾಧ್ಯತೆ ಇದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ