ಮೈಸೂರು ಅತ್ಯಾಚಾರ ಪ್ರಕರಣ: ಆರೋಪಿಗಳಿಂದ ತಪ್ಪೊಪ್ಪಿಗೆ, ಹೇಳಿಕೆ ನೀಡಲು ಸಂತ್ರಸ್ತೆ ನಿರಾಕರಣೆ; ಆರೋಪಿಗಳಿಗೆ ಇಂದೇ ವೈದ್ಯಕೀಯ ಪರೀಕ್ಷೆ

ಅತ್ಯಾಚಾರದಲ್ಲಿ 6 ಜನ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿತ್ತು. ಆದರೆ ಪೊಲೀಸರ ತನಿಖೆ ವೇಳೆ ಇನ್ನೊರ್ವ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ.

ಮೈಸೂರು ಅತ್ಯಾಚಾರ ಪ್ರಕರಣ: ಆರೋಪಿಗಳಿಂದ ತಪ್ಪೊಪ್ಪಿಗೆ, ಹೇಳಿಕೆ ನೀಡಲು ಸಂತ್ರಸ್ತೆ ನಿರಾಕರಣೆ;  ಆರೋಪಿಗಳಿಗೆ ಇಂದೇ ವೈದ್ಯಕೀಯ ಪರೀಕ್ಷೆ
ಸಾಂದರ್ಭಿಕ ಚಿತ್ರ
Follow us
| Edited By: sandhya thejappa

Updated on:Aug 29, 2021 | 3:40 PM

ಮೈಸೂರು: ವಿದ್ಯಾರ್ಥಿನಿ ಮೇಲೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಇಂದೇ ವೈದ್ಯಕೀಯ ಪರೀಕ್ಷೆ ನಡೆಯುತ್ತದೆ. ವೈದ್ಯಕೀಯ ಪರೀಕ್ಷೆಗಾಗಿ (Medical Test )ವಿಶೇಷ ತಂಡ ಆಗಮಿಸಿದೆ. ಮೈಸೂರಿಗೆ ಆಗಮಿಸಿದ ತಜ್ಞರ ತಂಡ ಆರೋಪಿಗಳಿಂದ ಎಲ್ಲಾ ಸ್ಯಾಂಪಲ್​ಗಳನ್ನು ಸಂಗ್ರಹಿಸುತ್ತಾರೆ. ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಇರುವ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಲ್ಯಾಬ್ ಟೆಕ್ನಿಷಿಯನ್ಸ್ ಮತ್ತು ತಜ್ಞರು ಪರೀಕ್ಷೆ ನಡೆಸುತ್ತಾರೆ. ಸಂಪೂರ್ಣ ವರದಿ ಸಿಗುವವರೆಗೂ ತಜ್ಞರ ತಂಡ ಮೈಸೂರಿನಲ್ಲಿಯೇ ಬೀಡು ಬಿಡಲಿದ್ದಾರೆ.

ಹೇಳಿಕೆ ನೀಡುವುದಕ್ಕೆ ಸಂತ್ರಸ್ತೆ ನಿರಾಕರಣೆ ಆರೋಪಿಗಳ ಬಂಧನ ಬಳಿಕವೂ ಘಟನೆಯ ಬಗ್ಗೆ ಹೇಳಿಕೆ ನೀಡುವುದಕ್ಕೆ ಸಂತ್ರಸ್ತೆ ನಿರಾಕರಿಸುತ್ತಿದ್ದಾರೆ. ಹೇಳಿಕೆಗಳನ್ನು ಪಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದು, ಸಂತ್ರಸ್ತೆ ಜತೆಗಿದ್ದ ಸ್ನೇಹಿತನ ಹೇಳಿಕೆ ಆಧರಿಸಿ ಎಫ್‌ಐಆರ್ ದಾಖಲಾಗಿದೆ. ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ಸಂತ್ರಸ್ತೆ ತನಗಾದ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಕೆ ನೀಡಬೇಕು. ಸಂತ್ರಸ್ತೆ ಹೇಳಿಕೆ ನೀಡಿದರೆ ಅದು ಮಹತ್ವದ ಸಾಕ್ಷ್ಯವಾಗಲಿದೆ. ಆಗ ಸರ್ಕಾರಕ್ಕೂ ಪೊಲೀಸರು ವರದಿಯನ್ನು ನೀಡಬಹುದು. ಆದರೆ ಸಂತ್ರಸ್ತೆ ಮಾತ್ರ ಹೇಳಿಕೆ ನೀಡುವುದಕ್ಕೆ ನಿರಾಕರಣೆ ಮಾಡುತ್ತಿದ್ದಾರೆ.

ಆರೋಪಿಗಳಿಂದ ತಪ್ಪೊಪ್ಪಿಗೆ ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಅಂದು ನಡೆದ ಘಟನೆ ಬಗ್ಗೆ ಪೊಲೀಸರ ಮುಂದೆ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ಮೈಸೂರಿನ ಅಜ್ಞಾತ ಸ್ಥಳದಲ್ಲಿ ಆರೋಪಿಗಳನ್ನು ವಿಚಾರಣೆ ನಡೆಸಲಾಗಿದೆ.

ಅತ್ಯಾಚಾರದಲ್ಲಿ 6 ಜನ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿತ್ತು. ಆದರೆ ಪೊಲೀಸರ ತನಿಖೆ ವೇಳೆ ಇನ್ನೋರ್ವ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ. ಸದ್ಯ ಐವರು ಬಂಧನಕ್ಕೊಳಗಾಗಿದ್ದು, ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಶುರುಮಾಡಿದ್ದಾರೆ. ಇನ್ನು ಆರೋಪಿಗಳನ್ನು ಬಂಧಿಸಲು ಪೊಲೀಸರು ನಡೆಸಿದ ಕಾರ್ಯಚರಣೆ ರೋಚಕವಾಗಿತ್ತು. ಮೈಸೂರು ಪೊಲೀಸರ ತಂಡ ತಾಳವಾಡಿಯ ಸೂಸಿಪುರಂಗೆ ಹೋಗಿತ್ತು. ಮಾಹಿತಿ ಸಿಕ್ಕರೂ ಆರೋಪಿ ಸ್ಥಳಕ್ಕೆ ಹೋಗುವುದು ಸವಾಲಾಗಿತ್ತು. ಮಾಹಿತಿ ಎಲ್ಲಾ ಪಡೆದರು ರಾತ್ರಿಯಾಗುವುದಕ್ಕೆ ಕಾಯುತ್ತಿದ್ದ ಪೊಲೀಸರು, ಕತ್ತಲಾಗುತ್ತಿದ್ದಂತೆ ಮನೆ ಮೇಲೆ ದಾಳಿ ಮಾಡಿದ್ದರು. ತಮಿಳು ಬಾಷೆ ಗೊತ್ತಿರುವ ಪೊಲೀಸರನ್ನು ಮೈಸೂರು ಪೊಲೀಸರು ಕರೆದುಕೊಂಡು ಹೋಗಿದ್ದರು.

ಇದನ್ನೂ ಓದಿ

ವಿಜಯಪುರ: ನಿನ್ನೆ ಬಂಧನಕ್ಕೊಳಗಾಗಿದ್ದ ಅತ್ಯಾಚಾರ ಆರೋಪಿ ಠಾಣೆ ಶೌಚಾಲಯದಲ್ಲಿ ನೇಣಿಗೆ ಶರಣು; ಪೋಷಕರ ಆಕ್ರೋಶ

ಮೈಸೂರು ಅತ್ಯಾಚಾರ ಪ್ರಕರಣ; ಆರೋಪಿಯ ತಾಯಿ ಕಣ್ಣೀರು

(medical test will be conducted for the accused of rape in Mysuru)

Published On - 3:10 pm, Sun, 29 August 21

ತಾಜಾ ಸುದ್ದಿ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ