AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಅಧಿಕಾರಿಗಳು ಹೊಲಗಳಿಗೆ ಹೋಗಿ ಬೆಳೆ ಹಾನಿ ಪರಿಶೀಲಿಸಲು ಸಚಿವ ಬಿಸಿ ಪಾಟೀಲ್ ಸೂಚನೆ

ಮಾಹಿತಿ ಸಂಗ್ರಹದ ನಂತರ ಸೂಕ್ತ ಪರಿಹಾರ ನೀಡಲಾಗುತ್ತದೆ. ರೈತರು ಯಾವುದೇ ಆತಂಕ ಪಡಬಾರದು. ರಾಜ್ಯ ಸರ್ಕಾರ ಬೆಳೆ ಹಾನಿ ಪರಿಹಾರಕ್ಕೆ ಕ್ರಮಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಕೃಷಿ ಅಧಿಕಾರಿಗಳು ಹೊಲಗಳಿಗೆ ಹೋಗಿ ಬೆಳೆ ಹಾನಿ ಪರಿಶೀಲಿಸಲು ಸಚಿವ ಬಿಸಿ ಪಾಟೀಲ್ ಸೂಚನೆ
ಸಚಿವ ಬಿಸಿ ಪಾಟೀಲ್
TV9 Web
| Edited By: sandhya thejappa|

Updated on:May 19, 2022 | 10:58 AM

Share

ಮೈಸೂರು: ರಾಜ್ಯಾದ್ಯಂತ ನಿರಂತರ ಮಳೆಯಿಂದ (Heavy Rain) ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಈ ಹಿನ್ನೆಲೆ ಕೃಷಿ ಅಧಿಕಾರಿಗಳು ಹೊಲಗಳಿಗೆ ಹೋಗಿ ಪರಿಶೀಲಿಸಬೇಕು ಅಂತ ಮೈಸೂರಿನಲ್ಲಿ ಟಿವಿ9 ಮೂಲಕ ಕೃಷಿ ಸಚಿವ ಬಿಸಿ ಪಾಟೀಲ್ ಸೂಚನೆ (BC Nagesh) ನೀಡಿದ್ದಾರೆ. ಕೃಷಿ ಅಧಿಕಾರಿಗಳು ಜಮೀನಿಗೆ ತೆರಳದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಮಳೆ ಹಾನಿ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸಬೇಕು. ಮಾಹಿತಿ ಸಂಗ್ರಹದ ನಂತರ ಸೂಕ್ತ ಪರಿಹಾರ ನೀಡಲಾಗುತ್ತದೆ. ರೈತರು ಯಾವುದೇ ಆತಂಕ ಪಡಬಾರದು. ರಾಜ್ಯ ಸರ್ಕಾರ ಬೆಳೆ ಹಾನಿ ಪರಿಹಾರಕ್ಕೆ ಕ್ರಮಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಮುಂದುವರಿದು ಮಾತನಾಡಿದ ಸಚಿವರು, ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ. ಕೃತಕ ಅಭಾವ ಸೃಷ್ಟಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಸಬ್ಸಿಡಿ ದರದಲ್ಲಿ ರಸಗೊಬ್ಬರವನ್ನು ಮಾರಾಟ ಮಾಡುತ್ತಿದ್ದೇವೆ. ಕಾಳ ಸಂತೆಕೋರರ ಪತ್ತೆಗೆ ನಾವು ತಂಡವನ್ನು ರಚಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣಕ್ಕೆ ತಿರುವು: ಪತಿ ಸಾವಿನ ಬಗ್ಗೆ ಮತ್ತೊಬ್ಬ ಮಹಿಳೆಯ ಜೊತೆ ಹೆಂಡತಿ ಮಾತುಕತೆ ವೈರಲ್

ಇದನ್ನೂ ಓದಿ
Image
How To Store Pulses: ಹುಳುಗಳಿಂದ ಬೇಳೆಕಾಳುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ?
Image
ಕೃಷಿ ಅಧಿಕಾರಿಗಳು ಹೊಲಗಳಿಗೆ ಹೋಗಿ ಬೆಳೆ ಹಾನಿ ಪರಿಶೀಲಿಸಲು ಸಚಿವ ಬಿಸಿ ಪಾಟೀಲ್ ಸೂಚನೆ
Image
Viral Video: ರೈಲು ನಿಲ್ದಾಣಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ ಲಂಡನ್ ರಾಣಿ ಎಲಿಜಬೆತ್; ಯಾಕೆ ಗೊತ್ತಾ?
Image
Crime News: ಸ್ನೇಹಿತರ ಜೊತೆ ಈಜಲು ತೆರಳಿದ್ದ ಬಾಲಕ ಕೆರೆಯಲ್ಲಿ ಮುಳುಗಿ ಸಾವು

ಸಿದ್ದರಾಮಯ್ಯ ಹೇಳಿಕೆಗೆ ಮೈಸೂರಿನಲಿ ಬಿಸಿ ಪಾಟೀಲ್ ವ್ಯಂಗ್ಯ: ತಾನು ಸಿಎಂ ಆದರೆ ದಲಿತರ ಸಾಲ ಮಾಡುತ್ತೇನೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿ ಸಿ ಪಾಟೀಲ್ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆದರೆ ತಾನೇ ಅವರು ಕೊಡುವ ಭರವಸೆ ಈಡೇರುವುದು? ಕಾಂಗ್ರೆಸ್​ನಲ್ಲಿ ಕೂಸು ಹುಟ್ಟುವ ಮುಂಚೆ ಕುಲವಿ ಹೊಲಿಸಲಾಗುತ್ತಿದೆ. ಬಿಜೆಪಿ ಮುಂದಿನ ಭಾರಿಯೂ ಅಧಿಕಾರಕ್ಕೆ ಬರುವುದು ನಿಶ್ಚಿತ. ಸಿದ್ದರಾಮಯ್ಯಗೆ ಬಿಜೆಪಿ ಬಗ್ಗೆ ಹೇಳಲು ಏನು ಇಲ್ಲ. ನಮ್ಮ ಸರ್ಕಾರದಿಂದ ಸಿದ್ದರಾಮಯ್ಯಗೆ ಪ್ರಯೋಜನ ಆಗುತ್ತಿಲ್ಲ. ಜನರಿಗೆ ಪ್ರಯೋಜನ ಆಗುತ್ತಿದೆ ಎಂದರು.

ಜಿ ಟಿ ದೇವೇಗೌಡರ ಮನೆಗೆ ಬಿ ಸಿ ಪಾಟೀಲ್ ಭೇಟಿ: ಶಾಸಕ ಜಿ ಟಿ ದೇವೇಗೌಡರ ಮೊಮ್ಮಗಳು ಮೃತಪಟ್ಟಿರುವ ಹಿನ್ನೆಲೆ ದೇವೇಗೌಡರ ನಿವಾಸಕ್ಕೆ ಕೃಷಿ ಸಚಿವ ಬಿ ಸಿ ಪಾಟೀಲ್ ಭೇಟಿ ನೀಡಿದರು. ಈ ವೇಳೆ ದೇವೇಗೌಡರಿಗೆ ಸಾಂತ್ವಾನ ಹೇಳಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:45 am, Thu, 19 May 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​