AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನಮ್ಮ ಸರ್ಕಾರ ಎಂಬ ಭಾವನೆಯೇ ಬರುತ್ತಿಲ್ಲ; ಡಿ ಕೆ ಶಿವಕುಮಾರ್, ಕುಮಾರಸ್ವಾಮಿ ಜತೆ ಯಡಿಯೂರಪ್ಪ ಹೊಂದಾಣಿಕೆ ಸದಾ ಇದೆ: ಸಚಿವ ಯೋಗೇಶ್ವರ್

ನಮ್ಮ ಸ್ಥಿತಿ ಚಪ್ಪಡಿ ಕಲ್ಲಿನಂತಾಗಿದೆ. ನಮ್ಮದೇ ಸರ್ಕಾರವಿದ್ದರೂ ಯಾವುದೇ ಉಪಯೋಗವಿಲ್ಲ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಒತ್ತು ನೀಡುತ್ತಿಲ್ಲ. ಜಿ.ಪಂ., ತಾ.ಪಂ. ಚುನಾವಣೆಗೆ ಮೀಸಲಾತಿ ಪ್ರಕಟವಾಗಿದೆ. ಆದರೆ ಪ್ರತಿಪಕ್ಷ ನಾಯಕರಿಗೆ ಅನುಕೂಲವಾಗುವಂತೆ ಮೀಸಲಾತಿ ನೀಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರನ್ನು ಉಲ್ಲೇಖಿಸಿದ ಸಚಿವ ಸಿ.ಪಿ.ಯೋಗೇಶ್ವರ್ ತೀವ್ರ ಅಸಮಧಾನ ವ್ಯಕ್ತಪಡಿಸಿದರು.

ಇದು ನಮ್ಮ ಸರ್ಕಾರ ಎಂಬ ಭಾವನೆಯೇ ಬರುತ್ತಿಲ್ಲ; ಡಿ ಕೆ ಶಿವಕುಮಾರ್, ಕುಮಾರಸ್ವಾಮಿ ಜತೆ ಯಡಿಯೂರಪ್ಪ ಹೊಂದಾಣಿಕೆ ಸದಾ ಇದೆ: ಸಚಿವ ಯೋಗೇಶ್ವರ್
ವಿ. ಶ್ರೀನಿವಾಸ್ ಪ್ರಸಾದ್ ಮತ್ತು ಸಿ ಪಿ ಯೋಗೇಶ್ವರ್
TV9 Web
| Updated By: guruganesh bhat|

Updated on:Jul 04, 2021 | 5:55 PM

Share

ಮೈಸೂರು: ‘ಅಂಬಾರಿ ಹೊರಲು ಯಾವ ಆನೆ ಸೂಕ್ತವೆಂಬುದು ಮುಖ್ಯ. ‘ಅಪ್ಪ ಅಂಬಾರಿ ಹೊತ್ತಿದ್ದ ಎಂದು ಮರಿಯಾನೆಗೆ ಹೊರಿಸಲು ಸಾಧ್ಯವಿಲ್ಲ. ಬದಲಾವಣೆ ಎಂಬುದು ಜಗದ ನಿಯಮ’ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಸೂಚ್ಯವಾಗಿ ತಿಳಿಸಿದರು. ಸಂಸದ ಶ್ರೀನಿವಾಸಪ್ರಸಾದ್ ನಿವಾಸಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಮುಖ್ಯಮಂತ್ರಿ ಹುದ್ದೆ ವೈಭವಕ್ಕೆ ಆಗುವಂತದ್ದಲ್ಲ. ಸಿಎಂ ಅಂದರೆ ರಾಜ್ಯದ ಜನರ ಆಶೋತ್ತರ ಈಡೇರಿಸುವ ಮತ್ತು ಜನಪರ ಕಾಳಜಿಯಿರುವಂತಹ ಹುದ್ದೆ. ಮುಖ್ಯಮಂತ್ರಿ ಆದವರು ಸೃಜನಶೀಲರಾಗಿರಬೇಕು ಎಂದು ಸುದ್ದಿಗಾರರ ಬಳಿ ಅಭಿಪ್ರಾಯ ವ್ಯಕ್ತಪಡಿಸಿದರು. 

ಬಿಜೆಪಿ ಸರ್ಕಾರ ಬರಲು ನಾವು ಬಹಳಷ್ಟು ಶ್ರಮಿಸಿದ್ದೇವೆ. ಆದರೆ ನಮ್ಮ ಶ್ರಮ ಯಾರಿಗೂ ಕಾಣಿಸುತ್ತಿಲ್ಲ.​ ಜನರು ದೇಗುಲಕ್ಕೆ ಹೋದರೆ ರಾಜಗೋಪುರಕ್ಕೆ ಕೈಮುಗಿಯುತ್ತಾರೆ. ರಾಜಗೋಪುರದ ಕೆಳಗಿನ ಚಪ್ಪಡಿಗಳು ಜನರಿಗೆ ಕಾಣುವುದಿಲ್ಲ. ಚಪ್ಪಡಿ ಕಲ್ಲಿನ ಮೇಲೆ ಚಪ್ಪಲಿಬಿಟ್ಟು ರಾಜಗೋಪುರ ನೋಡುತ್ತಾರೆ. ನಮ್ಮ ಸ್ಥಿತಿ ಚಪ್ಪಡಿ ಕಲ್ಲಿನಂತಾಗಿದೆ. ನಮ್ಮದೇ ಸರ್ಕಾರವಿದ್ದರೂ ಯಾವುದೇ ಉಪಯೋಗವಿಲ್ಲ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಒತ್ತು ನೀಡುತ್ತಿಲ್ಲ. ಜಿ.ಪಂ., ತಾ.ಪಂ. ಚುನಾವಣೆಗೆ ಮೀಸಲಾತಿ ಪ್ರಕಟವಾಗಿದೆ. ಆದರೆ ಪ್ರತಿಪಕ್ಷ ನಾಯಕರಿಗೆ ಅನುಕೂಲವಾಗುವಂತೆ ಮೀಸಲಾತಿ ನೀಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರನ್ನು ಉಲ್ಲೇಖಿಸಿದ ಸಚಿವ ಸಿ.ಪಿ.ಯೋಗೇಶ್ವರ್ ತೀವ್ರ ಅಸಮಧಾನ ವ್ಯಕ್ತಪಡಿಸಿದರು.

ಸರ್ಕಾರದಲ್ಲಿ ನನಗೆ ಈಗಲೂ ಅಸಮಾಧಾನ ಇದೆ. ಇದು ನನ್ನ ಸರ್ಕಾರ ಅನ್ನೋ ಭಾವನೆ ನನಗೆ ಬರುತ್ತಿಲ್ಲ. ನನಗೆ ಆಗುತ್ತಿರುವ ನೋವು, ಚಿತ್ರಹಿಂಸೆಯನ್ನು ಹೇಳ್ತಿದ್ದೇನೆ. ಅದರಲ್ಲಿ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ನಮ್ಮ ಸರ್ಕಾರವಿದ್ರೂ ವಿರೋಧ ಪಕ್ಷದವರ ಕೈ ಮೇಲಾಗ್ತಿದೆ.. ಜಿ.ಪಂ, ತಾ.ಪಂ ಮೀಸಲಾತಿ ಸಹ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದಂತೆ ಆಗಿದೆ. ಅವರ ಅನುಕೂಲಕ್ಕೆ ತಕ್ಕಂತೆ ಜಿ.ಪಂ, ತಾ.ಪಂ ಮೀಸಲಾತಿ ನೀಡಲಾಗಿದೆ. ಈರೀತಿ ಆದರೆ ನಾವು ಹೇಗೆ ಸ್ಪರ್ಧೆ ಮಾಡೋದು? ಎಮದು ಅವರು ಪ್ರಶ್ನಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಜೆಡಿಎಸ್ ವರಿಷ್ಠ ಎಚ್‌.ಡಿ.ಕುಮಾರಸ್ವಾಮಿ ಜತೆ ಸಿಎಂ ಯಡಿಯೂರಪ್ಪ ಅವರ ಹೊಂದಾಣಿಕೆ ಸದಾ ಇದೆ. ರಾಜ್ಯದಲ್ಲಿ ವಿರೋಧಪಕ್ಷಗಳೇ ಸತ್ತು ಹೋಗಿವೆ ಎಂದು ಅವರು ಇದೇ ವೇಳೆ ಹರಿಹಾಯ್ದರು.

ರಾಜ್ಯದ ನಾಲ್ವರು ಸಂಸದರು ಸಚಿವರಾಗಲಿ. ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಯಾದರೆ ಉತ್ತಮ. ನನಗೆ ಅನಾರೋಗ್ಯದ ಹಿನ್ನೆಲೆ ನಾನು ಸಚಿವನಾಗಲು ಆಗಲ್ಲ. ಆದರೆ ಉಳಿದವರು ಸಚಿವರಾಗಲಿ. ರಾಜ್ಯದಲ್ಲಿ ನಾಲ್ಕು ಸಂಸದರ ಹೆಸರು ಕೇಳಿಬರುತ್ತಿದೆ. ಈ ಪೈಕಿ ಸಂಸದ ಉಮೇಶ್ ಜಾಧವ್ ಹೆಸರು ಕೇಳಿಬರುತ್ತಿದ್ದು, ಅವರಿಗೆ ಸಚಿವ ಸ್ಥಾನ ನೀಡಬೇಕು. ಅದರಂತೆ ರಾಜ್ಯದಲ್ಲಿ ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆ ಅವರುಗಳಿಗೆ ಸಚಿವ ಸ್ಥಾನ ನೀಡಲಿ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಪ್ರತಿಕ್ರಿಯೆ ನೀಡಿದರು.

ಕಳೆದ ಬಾರಿ‌ ಕಾಂಗ್ರೆಸ್‌ ಮತ್ತು ಜೆಡಿಎಸ್ ಸಮಿಶ್ರ ಸರ್ಕಾರ ಸಂಸದ ಶ್ರೀನಿವಾಸ ಪ್ರಸಾದ್ ಮನೆಗೆ ಶಾಸಕರು ಭೇಟಿ ನೀಡಿದ ನಂತರವೇ ಪತನವಾಗಿತ್ತು ಎಂಬ ಮಾತುಗಳು ಈಗಲೂ ಕೇಳಿಬರುತ್ತವೆ. ಈ ಹಿನ್ನೆಲೆಯಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಸಂಸದ ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: 

ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ, ಸಮಾಜವಾದಿ ಪಕ್ಷಕ್ಕೆ ಭಾರೀ ಮುಖಭಂಗ

ಕಾಂಗ್ರೆಸ್​ಗೆ ಈಗಿರುವ ಶಕ್ತಿ ಸಾಲದು, ಆಮದು ಶಕ್ತಿ ಅಗತ್ಯವಿದೆ: ಡಿ ಕೆ ಶಿವಕುಮಾರ್ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್

(Minister CP Yogeshwar meets MP V Srinivas Prasad to discuss Karnataka Politics and leadership change)

Published On - 5:03 pm, Sun, 4 July 21

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ