ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್; ಇಲ್ಲಿದೆ ಕಾರ್ಯಕ್ರಮಗಳ ವಿವರ

ಮೈಸೂರು ಜಿಲ್ಲೆಯ ನಂಜನಗೂಡು(Nanjangud) ತಾಲ್ಲೂಕಿನ ಸುತ್ತೂರು ಗ್ರಾಮದಲ್ಲಿ ಫೆಬ್ರವರಿ 6 ರಿಂದ ಫೆ.11 ರವರೆಗೆ 6 ದಿನಗಳ ಕಾಲ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಇಂದು(ಫೆ.06) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಇನ್ನು ಈ ಬಾರಿ ಜಾತ್ರೆಯ ಆರು ದಿನಗಳು ಕೂಡ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜೊತೆಗೆ ಬರುವಂತಹ ಭಕ್ತರಿಗಾಗಿ 4 ಲಕ್ಷಕ್ಕೂ ಹೆಚ್ಚು ಲಡ್ಡು ತಯಾರಿಸಲಾಗಿದೆ.

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್; ಇಲ್ಲಿದೆ ಕಾರ್ಯಕ್ರಮಗಳ ವಿವರ
ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ದಿನೇಶ್​ ಗುಂಡೂರಾವ್
Edited By: ಕಿರಣ್ ಹನುಮಂತ್​ ಮಾದಾರ್

Updated on: Feb 06, 2024 | 6:41 PM

ಮೈಸೂರು, ಫೆ.06: ಇಂದಿನಿಂದ 6 ದಿನಗಳ ಕಾಲ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜಿ ನೇತೃತ್ವದಲ್ಲಿ ನಡೆಯುವ ಇತಿಹಾಸ ಪ್ರಸಿದ್ದ ಸುತ್ತೂರು ಜಾತ್ರಾ ಮಹೋತ್ಸವಕ್ಕೆ(Suttur Jatra Mahotsav) ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಮೈಸೂರು ಜಿಲ್ಲೆಯ ನಂಜನಗೂಡು(Nanjangud) ತಾಲ್ಲೂಕಿನ ಸುತ್ತೂರು ಗ್ರಾಮದಲ್ಲಿ ಫೆಬ್ರವರಿ 6 ರಿಂದ ಫೆ.11 ರವರೆಗೆ 6 ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ಪ್ರತಿದಿನವೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಮೂಹಿಕ ವಿವಾಹ, ರಥೋತ್ಸವ, ಗ್ರಾಮೀಣ ಕ್ರೀಡೆಗಳು, ಕೃಷಿ ಮೇಳ, ಲಕ್ಷ ದೀಪೋತ್ಸವ ಹಾಗೂ ತೆಪ್ಪೋತ್ಸವ ಸೇರಿ ಹಲವು ಕಾರ್ಯಕ್ರಮಗಳು ನಡೆಯಲಿದೆ.

ಜಾತ್ರೆಗೆ ಅಂದಾಜು 25 ಲಕ್ಷ ಜನರು ಬರುವ ನಿರೀಕ್ಷೆ; ಬರುವಂತ ಭಕ್ತರಿಗೆ ಪ್ರಸಾದದ ವ್ಯವಸ್ಥೆ

ಇದೇ ವೇಳೆ ಸಚಿವರು, ‘ಜಾತ್ರಾ ಮಹೋತ್ಸವದ ವಸ್ತುಪ್ರದರ್ಶ‌ನ, ಕೃಷಿಮೇಳ, ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು. ಇನ್ನು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಜಾತ್ರೆಗೆ ಸುಮಾರು 25 ಲಕ್ಷ ಜನರು ಬರುವ ನಿರೀಕ್ಷೆಯಿದೆ. ಜೊತೆಗೆ ಬರುವಂತ ಭಕ್ತರಿಗೂ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:ಮಾರ್ಚ್ 19 ರಿಂದ ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ

4 ಲಕ್ಷಕ್ಕೂ ಹೆಚ್ಚು ಲಡ್ಡು, 40 ಸಾವಿರ ಮೈಸೂರ್ ಪಾಕ್ ತಯಾರಿ

ಇಂದಿನಿಂದ ಆರಂಭಗೊಂಡ ಜಾತ್ರೆಗೆ ಬರುವಂತಹ ಭಕ್ತರಿಗೆ ಸಿಹಿಯನ್ನ ವಿತರಿಸಲು ಸುತ್ತೂರು ಮಠ ಆಯೋಜನೆ ಮಾಡಿಕೊಂಡಿದ್ದು, ಅಂದಾಜು 200 ಕ್ಕೂ ಹೆಚ್ಚು ಬಾಣಸಿಗರು ಸೇರಿ ಸುಮಾರು 150 ರಿಂದ 200 ಕ್ವಿಂಟಾಲ್ ಕಡಲೆ ಬೇಳೆಗಳನ್ನು ಬಳಸಿ 4 ಲಕ್ಷಕ್ಕೂ ಹೆಚ್ಚು ಲಡ್ಡು,  40 ಸಾವಿರ ಮೈಸೂರ್ ಪಾಕ್,  30 ಸಾವಿರ ಬಾದುಷಾ, ಕಡ್ಡಿಕಾರ ಹಾಗೂ ಬುಂದಿಕಾರಗಳನ್ನು ತಯಾರು ಮಾಡಲಾಗಿದೆ. ಇದನ್ನು ಜಾತ್ರೆಗೆ ಬರುವಂತಹ ಭಕ್ತಾದಿಗಳಿಗೆ ಪ್ರಸಾದದ ಜೊತೆಗೆ ವಿತರಣೆ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:32 pm, Tue, 6 February 24

ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Loading...
Unable to load recommendations.
Follow Us