ಗೃಹಲಕ್ಷ್ಮೀ ಯೋಜನೆ: 59 ತಿಂಗಳ ಹಣ ನಾಡದೇವತೆ ಚಾಮುಂಡೇಶ್ವರಿಗೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್
ಈಗ ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ ಮಾಡಲಾಗುತ್ತಿದ್ದು 59 ತಿಂಗಳ ಒಟ್ಟು ಮೊತ್ತವನ್ನು ದೇವಸ್ಥಾನಕ್ಕೆ ಸಂದಾಯ ಮಾಡಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಅರ್ಪಿಸಿದ್ದಾರೆ. 59 ತಿಂಗಳ ಒಟ್ಟು ಹಣ 1,18,000 ರೂಗಳನ್ನು ಸಂದಾಯ ಮಾಡಲಾಗಿದೆ.
ಮೈಸೂರು, ನ.28: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ರಕ್ಷಾ ಬಂಧನದ ದಿನ ಮೈಸೂರಿನಲ್ಲಿ ರಾಹುಲ್ ಗಾಂಧಿಯವರ (Rahul Gandhi) ನೇತೃತ್ವದಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ಆಗ ನಾಡದೇವತೆ ಚಾಮುಂಡೇಶ್ವರಿಗೆ (Mysuru Chamundeshwari Temple) 2000 ರೂ. ಅರ್ಪಿಸಲಾಗಿತ್ತು. ಸದ್ಯ ಈಗ 59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ ಮಾಡಲಾಗಿದೆ. ಪ್ರತಿ ತಿಂಗಳು 2 ಸಾವಿರ ರೂ.ನಂತೆ 1,18,000 ಹಣವನ್ನು ಸಂದಾಯ ಮಾಡಲಾಗಿದೆ.
ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ರಾಜ್ಯದ ಮಹತ್ವದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ನಾಡದೇವತೆಗೆ 59 ತಿಂಗಳ ಒಟ್ಟು ಹಣ 1,18,000 ರೂಗಳನ್ನು ಸಂದಾಯ ಮಾಡಲಾಗಿದೆ. ಈ ಹಿಂದೆ ಪ್ರತಿ ತಿಂಗಳು ಚಾಮುಂಡಿ ದೇವಸ್ಥಾನಕ್ಕೆ ಯೋಜನೆಯ ಹಣ ನೀಡುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಎಂಎಲ್ಸಿ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದರು. ಬಳಿಕ ಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದರು. ಇದರ ಬೆನ್ನಲ್ಲೆ ಈಗ ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ ಮಾಡಲಾಗುತ್ತಿದ್ದು 59 ತಿಂಗಳ ಒಟ್ಟು ಮೊತ್ತವನ್ನು ದೇವಸ್ಥಾನಕ್ಕೆ ಸಂದಾಯ ಮಾಡಲಾಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಅರ್ಪಿಸಿದ್ದಾರೆ. ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯವಾಗಲಿದೆ.
ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಯ ಹಣ ಚಾಮುಂಡೇಶ್ವರಿಗೆ ಅರ್ಪಣೆ, ಪ್ರತಿ ತಿಂಗಳು 2 ಸಾವಿರ ರೂ. ಅರ್ಪಿಸಲು ಅಸ್ತು
ಪತ್ರ ಬರೆದು ಮನವಿ ಮಾಡಿದ್ದ ದಿನೇಶ್ ಗೂಳಿಗೌಡ
ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ರಾಜ್ಯದ 1.2 ಕೋಟಿಗೂ ಅಧಿಕ ಕುಟುಂಬಗಳಿಗೆ ಜಮಾ ಮಾಡಲಾಗುತ್ತಿದೆ. ಆ ಹಣದಿಂದ ಸಾಕಷ್ಟು ಬಡ ಕುಟುಂಬಗಳ ಜೀವನಮಟ್ಟ ಸುಧಾರಣೆಗೊಂಡಿದೆ. ಅಲ್ಲದೆ, ನಮ್ಮ ಸರ್ಕಾರದ ಹಾಗೂ ತಮ್ಮಗಳ ಬಗ್ಗೆ ಶುಭ ಹಾರೈಕೆಯನ್ನು ಮಾಡುತ್ತಲೇ ಇದ್ದಾರೆ.
ಈಗ ಪ್ರತಿ ತಿಂಗಳು ಮನೆಯ ಯಜಮಾನಿಯರ ಖಾತೆಗೆ ನಿಖರವಾಗಿ ತಲಾ 2 ಸಾವಿರ ರೂ. ಹಣ ಜಮಾ ಮಾಡುತ್ತಿರುವುದು ಖುಷಿಯ ವಿಚಾರವಾಗಿದೆ. ಅದೇ ರೀತಿ ಪ್ರತಿ ತಿಂಗಳ ಕಂತನ್ಹು ಉಜಮಾನಿಯರಿಗೆ ಪಾವತಿಸುವ ಮೊದಲು ನಾಡದೇವಿ ಚಾಮುಂಡೇಶ್ವರಿಯ ಸನ್ನಿಧಿಗೂ ಸಲ್ಲಿಸಬೇಕು. ಆ ಮೂಲಕ ಮೊದಲ ಹಣ ನಾಡದೇವತೆಗೆ ಸಲ್ಲಿಕೆಯಾಗಿ ಬಳಿಕ ಉಳಿದವರಿಗೆ ಪಾವತಿಯಾಗುವಂತೆ ವ್ಯವಸ್ಥೆ ಮಾಡಲು ದಿನೇಶ್ ಅವರು ಪತ್ರದ ಮೂಲಕ ಮನವಿ ಮಾಡಿದ್ದರು. ಅದರ ಫಲವಾಗಿ ಚಾಮುಂಡೇಶ್ವರಿ ತಾಯಿಗೆ ಹಣ ಸಂದಾಯ ಮಾಡಲಾಗುತ್ತಿದೆ.
ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ