ಶ್ರೀಮಂತರ ಒತ್ತುವರಿಗೆ ಕಾಂಗ್ರೆಸ್, ಬಡವರ ಒತ್ತುವರಿಗೆ ಮಾಧ್ಯಮಗಳ ಶ್ರೀರಕ್ಷೆ: ಸಚಿವ ಅಶೋಕ್

‘ಬಡವರು-ಶ್ರೀಮಂತರು ಎನ್ನದೇ ಯಾರೇ ಒತ್ತುವರಿ ಮಾಡಿದ್ದರೂ ತೆರವು ಮಾಡುತ್ತೇವೆ’ ಎಂದು ತಿಳಿಸಿದರು.

ಶ್ರೀಮಂತರ ಒತ್ತುವರಿಗೆ ಕಾಂಗ್ರೆಸ್, ಬಡವರ ಒತ್ತುವರಿಗೆ ಮಾಧ್ಯಮಗಳ ಶ್ರೀರಕ್ಷೆ: ಸಚಿವ ಅಶೋಕ್
ಕಂದಾಯ ಸಚಿವ ಆರ್ ಅಶೋಕ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 20, 2022 | 1:03 PM

ಮೈಸೂರು: ಮುಂದಿನ ದಿನಗಳಲ್ಲಿ ಬೆಂಗಳೂರಿನ ವಿವಿಧೆಡೆ ಒತ್ತುವರಿ ತೆರವು ಕಾರ್ಯಾಚರಣೆ  (Encroachment Removal) ಚುರುಕುಗೊಳಿಸುತ್ತೇವೆ. ಯಾರ ಮುಲಾಜಿಗೂ ಒಳಪಡುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬಡವರು ಮಾಡಿರುವ ಒತ್ತುವರಿ ತೆರವು ಮಾಡಲು ಮಾಧ್ಯಮದವರು ಬಿಡುತ್ತಿಲ್ಲ. ಶ್ರೀಮಂತರು ಮಾಡಿರುವ ಒತ್ತುವರಿ ತೆರವು ಮಾಡಲು ಕಾಂಗ್ರೆಸ್​ನವರು ಬಿಡುತ್ತಿಲ್ಲ. ನಾವು ಯಾವ ಒತ್ತಡಕ್ಕೂ ಮಣಿಯದೇ ಕಾರ್ಯಾಚರಣೆ ಮುಂದುವರಿಸುತ್ತೇವೆ. ಬಡವರು-ಶ್ರೀಮಂತರು ಎನ್ನದೇ ಎಲ್ಲ ಒತ್ತುವರಿ ತೆರವು ಮಾಡುತ್ತೇವೆ’ ಎಂದು ತಿಳಿಸಿದರು.

ಒತ್ತುವರಿ ಮಾಡಿರುವವರನ್ನು ರಾಜಕಾರಣಿಗಳು, ಶ್ರೀಮಂತರು ಅಥವಾ ಬಡವರು ಎಂದು ಪ್ರತ್ಯೇಕ ಪ್ರತ್ಯೇಕವಾಗಿ ನೋಡಲು ಆಗುವುದಿಲ್ಲ. ಯಾರೇ ಒತ್ತುವರಿ ಮಾಡಿದ್ದರೂ ತೆರವು ಮಾಡುವುದು ನಿಶ್ಚಿತ. ಬಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತು ಸಿಎಂ ಜೊತೆ ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಒತ್ತುವರಿ ತೆರವು ವಿಚಾರದಲ್ಲೂ ರಾಜಕಾರಣ ಮಾಡಲಾಗುತ್ತಿದೆ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಸಹಜ ಎಂದರು.

ಬೆಂಗಳೂರಿನಾದ್ಯಂತ ಒತ್ತುವರಿ ತೆರವು ಮಾಡುತ್ತೇವೆ. ಸದ್ಯಕ್ಕೆ ಯಲಹಂಕ ಮತ್ತು ಮಹದೇವಪುರ ವಲಯಗಳಲ್ಲಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಉಳಿದೆಡೆ ಒತ್ತುವರಿ ತೆರವಿಗೆ ಗಮನಕೊಡುತ್ತೇವೆ. ಬಡವರು ಎಂಬ ಕಾರಣಕ್ಕೆ ಒತ್ತುವರಿ ತೆರವು ನಿಲ್ಲಿಸಲು ಆಗಿಲ್ಲ. ಬಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಚರ್ಚೆ ನಡೆಸುತ್ತೇವೆ ಎಂದರು.

ಒತ್ತುವರಿ ತೆರವಿಗೆ ಹಿಂದೇಟು: ಮಹಾನಗರಪಾಲಿಕೆ ವಿರುದ್ಧ ಜನಾಕ್ರೋಶ

ವಿಪ್ರೋ ಕಂಪನಿಯು ಮಾಡಿಕೊಂಡಿರುವ ಒತ್ತುವರಿ ತೆರವಿಗೆ ಮಹಾನಗರಪಾಲಿಕೆಯು ಹಿಂದೇಟು ಹಾಕುತ್ತಿದೆ ಎಂದು ಬೆಂಗಳೂರು ಸರ್ಜಾಪುರ ರಸ್ತೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ದೊಡ್ಡವರು, ಉಳ್ಳವರ ಪರ ಅಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ರಾಜಕಾಲುವೆ ಒತ್ತುವರಿ ಸರ್ವೇ ಮಾಡಿದ್ದರೂ ತೆರವು ಕಾರ್ಯಾಚರಣೆಗೆ ಮೀನಾಮೇಷ ಎಣಿಸುತ್ತಿದ್ದಾರೆ. ಮಳೆ ಬಂದರೆ ಈ‌ ಏರಿಯಾದ ರಸ್ತೆ ಪೂರ್ತಿ ಜಲಾವೃತ ಆಗಿತ್ತು. ನಾನು ಮನೆ ಕೆಲಸ ಮಾಡೋದು, ಆಗ 4 ದಿನ ಮನೆ ಕೆಲಸಕ್ಕೆ ರಜೆ ಹಾಕಿದ್ದೆ. ಬಡವರಿಗೊಂದು ಕಾನೂನು ಶ್ರೀಮಂತರಿಗೆ ಒಂದು ಕಾನೂನಾ’ ಎಂದು ಸ್ಥಳೀಯರಾದ ಸುವರ್ಣಾ ಪ್ರಶ್ನಿಸಿದರು.

Published On - 1:03 pm, Tue, 20 September 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್