AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚದ ಹೇಳಿಕೆ ವಿವಾದದ ಬೆನ್ನಲ್ಲೇ ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ, ಲೋಕಾಯುಕ್ತಕ್ಕೂ ದೂರು

ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ನಿಮ್ಮ ಧರ್ಮ ಎಂಬ ಸಚಿವ ಶಿವಲಿಂಗೇಗೌಡರ ಹೇಳಿಕೆ ವಿವಾದದ ಬೆನ್ನಲ್ಲೇ ಮೈಸೂರಿನ ವಾಯ್ಸ್ ಆಫ್ ಪೀಪಲ್ ಸಂಸ್ಥೆ ಲೋಕಾಯುಕ್ತಕ್ಕೆ ದೂರು ನೀಡಿದೆ. ಸಚಿವರು ರಾಜೀನಾಮೆ ನೀಡಬೇಕು ಎಂದು ಸಂಸ್ಥೆ ಆಗ್ರಹಿಸಿದ್ದು, ರಾಜ್ಯಪಾಲರಿಗೂ ದೂರು ನೀಡುವುದಾಗಿ ಹೇಳಿದೆ. ಮಾಧ್ಯಮಗಳಲ್ಲಿ ಅಭಿಯಾನ ನಡೆಸುವುದಾಗಿಯೂ ಎಚ್ಚರಿಕೆ ನೀಡಿದೆ.

ಲಂಚದ ಹೇಳಿಕೆ ವಿವಾದದ ಬೆನ್ನಲ್ಲೇ ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ, ಲೋಕಾಯುಕ್ತಕ್ಕೂ ದೂರು
ಶಿವಲಿಂಗೇಗೌಡImage Credit source: tv9
ರಾಮ್​, ಮೈಸೂರು
| Edited By: |

Updated on:Sep 22, 2026 | 9:07 AM

Share

ಮೈಸೂರು, ಸೆಪ್ಟೆಂಬರ್ 22: ‘ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ನಿಮ್ಮ ಧರ್ಮ’ ಎಂಬ ಹೇಳಿಕೆ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಸಚಿವ ಕೆಎಂ ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮೈಸೂರಿನ ವಾಯ್ಸ್ ಆಫ್ ಪೀಪಲ್ ಸಂಸ್ಥೆ ಸಚಿವರ ವಿರುದ್ಧ ದೂರು ಸಲ್ಲಿಸಿದೆ. ಸಚಿವರು ಜನರಿಗೆ ನೇರವಾಗಿ ಲಂಚ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಆರೋಪಿಸಿರುವ ವಾಯ್ಸ್ ಆಫ್ ಪೀಪಲ್ ಮುಖ್ಯಸ್ಥ ವಸಂತ ರಾವ್ ಚೌಹಾಣ್, ಇಂತಹ ಹೇಳಿಕೆ ನೀಡಿರುವ ಶಿವಲಿಂಗೇಗೌಡರು ಸಚಿವ ಸ್ಥಾನದಲ್ಲಿರಲು ಅನರ್ಹರು ಎಂದು ಹೇಳಿದ್ದಾರೆ. ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಸಾರ್ವಜನಿಕವಾಗಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ವಿಚಾರವಾಗಿ ರಾಜ್ಯಪಾಲರಿಗೂ ದೂರು ಸಲ್ಲಿಸುವುದಾಗಿ ವಸಂತ ರಾವ್ ಚೌಹಾಣ್ ತಿಳಿಸಿದ್ದಾರೆ. ಸಚಿವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ನಡೆಸುವುದಾಗಿಯೂ ಹೇಳಿದ್ದಾರೆ.

ಶಿವಲಿಂಗೇಗೌಡರು ಏನು ಹೇಳಿದ್ದರು?

ಹಾಸನ ಜಿಲ್ಲೆಯ ಸಕಲೇಶಪುರ ತಹಸಿಲ್ದಾರ್ ಕಚೇರಿ ಆವರಣದಲ್ಲಿ ನಡೆದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸಚಿವ ಶಿವಲಿಂಗೇಗೌಡರು, ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ನಿಮ್ಮ ಧರ್ಮ. ಆದರೆ ಬಲವಂತವಾಗಿ ಹಣ ಕಿತ್ತುಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ಸಭೆಯಲ್ಲಿದ್ದ ಕೆಲವರು ಆಕ್ಷೇಪ ವ್ಯಕ್ತಪಡಿಸಿ, ಅಧಿಕಾರಿಗಳಿಗೆ ಸಂಬಳ ನೀಡುವುದಿಲ್ಲವೇ, ಹಣ ಏಕೆ ಕೊಡಬೇಕು ಎಂದು ಪ್ರಶ್ನಿಸಿದ್ದರು. ಬಳಿಕ ಸಚಿವ ಶಿವಲಿಂಗೇಗೌಡರು ತಾವು ಲಂಚ ನೀಡುವಂತೆ ಹೇಳಿಲ್ಲ, ಅಧಿಕಾರಿಗಳೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವಂತೆ ಮಾತ್ರ ಹೇಳಿದ್ದಾಗಿ ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ‘ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡೋದು ನಿಮ್ಮ ಧರ್ಮ’: ವಿವಾದ ಸೃಷ್ಟಿಸಿದ ಸಚಿವ ಶಿವಲಿಂಗೇಗೌಡರ ಹೇಳಿಕೆ

ಈ ಹೇಳಿಕೆ ವಿವಾದದ ಬೆನ್ನಲ್ಲೇ ಇದೀಗ ಮೈಸೂರಿನ ವಾಯ್ಸ್ ಆಫ್ ಪೀಪಲ್ ಸಂಸ್ಥೆ ಲೋಕಾಯುಕ್ತಕ್ಕೆ ದೂರು ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:07 am, Tue, 22 September 26

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ