Church Attack: ಪಿರಿಯಾಪಟ್ಟಣದ ಚರ್ಚ್​ಗೆ ನುಗ್ಗಿ ಏಸು ಮೂರ್ತಿ ಧ್ವಂಸಗೊಳಿಸಿದ ದುಷ್ಕರ್ಮಿಗಳು: ಸ್ಥಳಕ್ಕೆ ಪೊಲೀಸರು ದೌಡು

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಸೆಂಟ್‌ ಮೇರಿಸ್ ಚರ್ಚ್‌ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.

Church Attack: ಪಿರಿಯಾಪಟ್ಟಣದ ಚರ್ಚ್​ಗೆ ನುಗ್ಗಿ ಏಸು ಮೂರ್ತಿ ಧ್ವಂಸಗೊಳಿಸಿದ ದುಷ್ಕರ್ಮಿಗಳು: ಸ್ಥಳಕ್ಕೆ ಪೊಲೀಸರು ದೌಡು
ಪಿರಿಯಾಪಟ್ಟಣದ ಸೆಂಟ್‌ ಮೇರಿಸ್ ಚರ್ಚ್‌
Follow us
TV9 Web
| Updated By: Digi Tech Desk

Updated on:Dec 28, 2022 | 11:09 AM

ಮೈಸೂರು: ಮೊನ್ನೆ ತಾನೆ ಕ್ರಿಸ್ಮಸ್​ ಮುಗಿದಿದ್ದು, ಜಿಲ್ಲೆಯ ಪಿರಿಯಾಪಟ್ಟಣದ (Priyapatnam) ಸೆಂಟ್‌ ಮೇರಿಸ್ ಚರ್ಚ್‌ (St. Mary’s Church) ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ದುಷ್ಕರ್ಮಿಗಳು ಚರ್ಚ್ (Church) ಒಳಗೆ ನುಗ್ಗಿ ಬಾಲ ಏಸುವಿನ ಮೂರ್ತಿ ಹಾಗೂ ತೊಟ್ಟಿಲನ್ನು ಒಡೆದು ಹಾಕಿದ್ದಾರೆ. ಕ್ರಿಸ್‌ಮಸ್ (Christmas) ಹಬ್ಬಕೆಂದು ಚರ್ಚ್ ಒಳಗಿನ ಟೇಬಲ್ ಮೇಲೆ ಬುಟ್ಟಿಯಲ್ಲಿನ, ತೊಟ್ಟಿಲಲ್ಲಿ ಬಾಲ ಏಸು ಅನ್ನು ಮಲಗಿಸಲಾಗಿತ್ತು. ಚರ್ಚ್​ನಲ್ಲಿ ಯಾರು ಇಲ್ಲದ ವೇಳೆ ದುಷ್ಕರ್ಮಿಗಳಿಂದ ದಾಳಿ ಮಾಡಿ, ಬಾಲ ಏಸುವಿನ‌ ಮೂರ್ತಿಯನ್ನ ಪುಡಿ ಪುಡಿ ಮಾಡಿದ್ದಾರೆ. ಹಾಗೇ ಚರ್ಚ್ ಹೊರಗೆ ಇದ್ದ ಹುಂಡಿ ಕೂಡ ಕಳ್ಳತನವಾಗಿದೆ. ಚರ್ಚ್​ನ ಫಾದರ್ ಜಾನ್ ಪೌಲ್ ಮೈಸೂರಿಗೆ ತೆರಳಿದ ವೇಳೆಯಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಲ್ಲಿ 17 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ನಗರದಲ್ಲಿ ಇತ್ತೀಚಿಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ವಯಸ್ಕರರೇ ಬಲಿಯಾಗುತ್ತಿರುವುದು ದುರದೃಷ್ಟಕರ. ಈಗ ಮತ್ತೆ ಬೆಂಗಳೂರಲ್ಲಿ 17 ವರ್ಷದ ಬಾಲಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ. ರಾಜಧಾನಿಯಲ್ಲೇ ಇನ್ನೊಂದೆಡೆ ಕನ್ಸ್ಟ್ರಕ್ಷನ್ ಲಿಫ್ಟ್​ ಕುಸಿದುಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬೆಂಗಳೂರಿನ ಬಸವೇಶ್ವರನಗರದ ಕಮಲಾನಗರದಲ್ಲಿ ಅಣ್ಣನ ಮನೆಯಲ್ಲಿ ನೇಣು ಬಿಗಿದುಕೊಂಡು 17 ವರ್ಷದ ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಮೊಗ್ಗ ಮೂಲದ ರಕ್ಷಿತಾ ಅಣ್ಣನ ಜೊತೆಗೆ ವಾಸವಿದ್ದಳು. ಇತ್ತೀಚೆಗಷ್ಟೆ ರಕ್ಷಿತಾಗೆ ನಿಶ್ಚಿತಾರ್ಥ ಆಗಿತ್ತು. 18 ವರ್ಷ ತುಂಬಿದ ಬಳಿಕ ಮದುವೆ ಮಾಡೊ ಯೋಚನೆಯಲ್ಲಿದ್ದರು. ಅಷ್ಟರಲ್ಲಾಗಲೇ ಬಾಲಕಿ ರಕ್ಷಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಸವೇಶ್ವರನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಕನ್ಸ್ಟ್ರಕ್ಷನ್ ಲಿಫ್ಟ್​ ಕುಸಿದುಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವು

ಕನ್ಸ್ಟ್ರಕ್ಷನ್ ಲಿಫ್ಟ್​ ಕುಸಿದುಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ತಿಗಳರಪಾಳ್ಯದ ಅಪ್ನಾ ಮೆಡಿಕಲ್ ಪ್ರೈವೇಟ್​ ಲಿಮಿಟೆಡ್​ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಕೂಲಿಕಾರ್ಮಿಕ ರಮೇಶ್(32) ಮೃತ ದುರ್ದೈವಿ. ಘಟನೆಯಲ್ಲಿ ಅನ್ಮೋಲ್, ನಿಶ್ಚಿತ್, ಪುನೀತ್, ಪ್ರದೀಪ್​ಗೆ ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ಡಿ.27) ಮಧ್ಯಾಹ್ನ ಮೆಡಿಕಲ್ ವೇರ್​ಹೌಸ್​ನಲ್ಲಿ ಕೆಲಸ ಮಾಡುತ್ತಿದ್ದ ಐವರು ಕಾರ್ಮಿಕರು, ಓಪನ್​ ಲೆಫ್ಟ್​ನಲ್ಲಿ ಔಷಧಿ ಸಾಗಿಸಿ ಕೆಳಕ್ಕೆ ಬರುತ್ತಿದ್ದ ವೇಳೆ ದುರಂತ ಸಂಭವಿಸಿದೆ. ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್​ ಹಾಗೂ ಕಾರ್​​ ನಡುವೆ ಅಪಘಾತ ಸಂಭವಿಸಿ ದಂಪತಿ ಸಾವು

ಹಾವೇರಿ: ಬಸ್​ ಹಾಗೂ ಕಾರ್​​ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹುಣಸಿಕಟ್ಟೆ ಕ್ರಾಸ್ ಬಳಿ ನಡೆದಿದೆ. ಕೇರಳ ಮೂಲದ ಮೊಹಮ್ಮದ್‌(68), ಆಯಿಷಾ(60) ಮೃತ ದಂಪತಿಗಳು. ಪತಿ ಮೊಹಮ್ಮದ್‌ ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಪತ್ನಿ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ನಿಧನ ಹೊಂದಿದ್ದಾರೆ. ಕಾರಿನಲ್ಲಿದ್ದ ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಂಪತಿ ಕಾರಿನಲ್ಲಿ ಕೇರಳದಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹಾನಗಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 pm, Tue, 27 December 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್