AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ ಶಾಸಕ ಯತೀಂದ್ರ ಸಿದ್ದರಾಮಯ್ಯ

ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ನಡೆದ ಹಿನ್ನೆಲೆ ಸರ್ಕಾರ ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡಬೇಕು ಎಂದು ಮೈಸೂರಿನಲ್ಲಿ ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ ಶಾಸಕ ಯತೀಂದ್ರ ಸಿದ್ದರಾಮಯ್ಯ
ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ
TV9 Web
| Updated By: ವಿವೇಕ ಬಿರಾದಾರ|

Updated on:Aug 19, 2022 | 4:54 PM

Share

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ನಡೆದ ಹಿನ್ನೆಲೆ ಸರ್ಕಾರ ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡಬೇಕು ಎಂದು ಮೈಸೂರಿನಲ್ಲಿ (Mysore) ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ರಾಜ್ಯದಲ್ಲಿ ಒಬ್ಬ ವಿಪಕ್ಷ ನಾಯಕನಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯುವಮೋರ್ಚಾ ಹಿಂದುತ್ವವಾದಿಗಳು ಹಿಂಸಾತ್ಮಕದಲ್ಲಿ ನಂಬಿಕೆ ಇಟ್ಟಿದ್ದಾರೆ. ಮುಂದೆ ಮತ್ತಷ್ಟು ಹಿಂಸಾತ್ಮಕ ಕೆಲಸ‌ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಸಿದ್ದರಾಮಯ್ಯ ಅವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಪೋಟೋ ಏಕೆ ? ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬೇರೆ ರೀತಿ ಅರ್ಥೈಸಲಾಗಿದೆ. ನಮ್ಮ ಮನೆ ಅಥವಾ ಹಿಂದೂಗಳು ಜಾಸ್ತಿ ಇರುವ ಕಡೆ ಮುಸ್ಲಿಂ ಮೂಲಭೂತವಾದಿ ಪೋಟೋ ಇಟ್ಟರೆ ನಮಗೆ ನೋವಾಗುತ್ತದೆ. ಅದೇ ರೀತಿ ಮುಸ್ಲಿಂರು ಜಾಸ್ತಿ ಇರುವ ಕಡೆ ಹಿಂದೂ ಮೂಲಭೂತವಾದಿ ಪೋಟೋ ಏಕೆ ಅಂತಾ ಹೇಳಿದ್ದು ಎಂದು ಸಮರ್ಥಿಸಿಕೊಂಡರು.

ನಮಗೆ ನೋವಾದಂತೆ ಅವರಿಗೂ ನೋವಾಗುತ್ತದೆ. ರಾಜ್ಯದಲ್ಲಿ ಶಾಂತಿ ಕಾಪಾಡಲು ತಂದೆ ಸಲಹೆ ನೀಡಿದ್ದರು. ಅದನ್ನು ತಿರುಚುವ ಕೆಲಸ ಮಾಡಲಾಗುತ್ತಿದೆ. ಆಡಳಿತ ಪಕ್ಷದವರಿಗೆ ಟಾಲರೆನ್ಸ್ ಇಲ್ಲ ವ್ಯವಧಾನ ಇಲ್ಲ. ಹಿಂದೂವಾದಿಗಳು ಹಿಂಸಾತ್ಮಕ ಕೃತ್ಯಕ್ಕೆ ತೊಡಗಿದ್ದಾರೆ. ಸರ್ಕಾರ ಇದನ್ನು ತಡೆಯಲು ವಿಫಲವಾಗಿದೆ ಎಂದು ಕಿಡಿಕಾರಿದರು.

ಪೊಲೀಸರು ಆಡಳಿತ ಪಕ್ಷದ ಪರವಾಗಿ ಮೂಕ ಸಾಕ್ಷಿಯಾಗಿ ನಿಂತಿದ್ದಾರೆ. ಪೊಲೀಸರು ತಮ್ಮ ಕರ್ತವ್ಯ ಮಡುತ್ತಿಲ್ಲ. ಕೋಮು ಗಲಭೆಯ ಹೆಸರಲ್ಲಿ ಕೊಲೆಗಳಾಗುತ್ತಿವೆ. ಸರ್ಕಾರ ಅದನ್ನು ತಡೆಯುತ್ತಿಲ್ಲ ಅದರ ಬದಲು ವಿಪಕ್ಷ ನಾಯಕರ ಹೇಳಿಕೆಯನ್ನು ದೊಡ್ಡದು ಮಾಡುತ್ತಿದೆ ಎಂದು ಹೇಳದರು.

ವೀರ್ ಸಾವರ್ಕರ್, ಮಹಾತ್ಮ ಗಾಂಧಿ, ಸುಭಾಷ್ ಚಂದ್ರಬೋಸ್‌ರಂತೆ ನಮ್ಮ ಐಕ್ಯತೆಗಾಗಿ ಹೋರಾಡಿಲ್ಲ. ದೇಶ ಹಿಂದೂಗಳಿಗೆ ಸೇರಬೇಕು ಅಂತ ಪ್ರತಿಪಾದನೆ ಮಾಡಿದವರು. ಸಾವರ್ಕರ್ ಕಾಂಟ್ರವರ್ಸಿಯಲ್ ಫಿಗರ್ ಆದರೆ ಸ್ವಾತಂತ್ರ್ಯ ಸೇನಾನಿ ಅದು ಇದು ಅಂತಾ ಬಿಂಬಿಸಿದ್ದಾರೆ. ಈ ದೇಶ ಎಲ್ಲರಿಗೂ ಸೇರಿದ್ದು ಯಾರೋ ಒಬ್ಬರಿಗೆ ಸೇರಿದಲ್ಲ ಎಂದರು.

ಭಾರತ ಅವರ ಸಿದ್ದಾಂತದಲ್ಲಿ ಸಾಗಿದ್ದರೆ ಈ ರೀತಿ ಇರುತ್ತಿರಲಿಲ್ಲ. ಬ್ರಿಟಿಷರ ವಿರುದ್ಧ ಹೋರಾಡಿದವರೆಲ್ಲಾ ಸ್ವಾತಂತ್ರ್ಯ ಹೋರಾಟಗಾರರಲ್ಲ. ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಇದ್ದರು ಅದರಲ್ಲಿ ಎರಡು ಮಾತಿಲ್ಲ. ಆದರೆ ಅದರ ಜೊತೆಗೆ ಅವರು ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದಿದ್ದರು ಎಂದು ಮಾತನಾಡಿದರು.

ಕ್ವಿಟ್ ಇಂಡಿಯಾದಲ್ಲಿ ಭಾಗವಹಿಸಬೇಡಿ ಅಂತಾ ಕರೆ ನೀಡಿದ್ದರು. ಮೊದಲು ಹೋರಾಡಿದರು ನಂತರ ಹೋರಾಡಲಿಲ್ಲ. ನಂತರ ಅವರು ಬ್ರಿಟಿಷ್ ಪರವಾಗಿದ್ದರು ಅವರಿಂದ ಪಿಂಚಣಿ ಪಡೆದರು. ನಂತರ ಅವರು ಯಾವತ್ತು ಸ್ವತಂತ್ರದ ಹೋರಾಟದ ಪರ ಇರಲಿಲ್ಲ ಎಂದು ತಿಳಿಸಿದರು.

ಸಿದ್ದರಾಮಯ್ಯ ಘಟನೆ ಖಂಡಿಸಿದಕ್ಕೆ ಸಿಎಂ ಬೊಮ್ಮಾಯಿ ಅವರಿಗೆ ಸೇರಿದಂತೆ ಎಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಆದರೆ ಬರಿ ಖಂಡಿಸಿದರೆ ಸಾಧ್ಯವಿಲ್ಲ ಅವರಿಗೆ ತಕ್ಕ ಶಿಕ್ಷೆಯಾಗಬೇಕು. ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ರಾಜ್ಯಪಾಲರಿಗೆ ದೂರು

ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಬಿಜೆಪಿಯ ಗೂಂಡಾ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಪೊಲೀಸ್ ಇಲಾಖೆಯನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕೂಡಲೇ ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯಗೆ ಜೀವ ಬೆದರಿಕೆ ಇದ್ದರೆ ಪೊಲೀಸರಿಗೆ ದೂರು ಕೊಡಲಿ: ರಾಜ್ಯ ಸಚಿವ ಸುನಿಲ್​ ಕುಮಾರ

ಉಡುಪಿ: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜೀವ ಬೆದರಿಕೆ ಇದ್ದರೆ ಪೊಲೀಸರಿಗೆ ದೂರು ಕೊಡಲಿ, ವಿಪಕ್ಷ ನಾಯಕರಿಗೆ ಸರ್ಕಾರ ಭದ್ರತೆ ಕೊಟ್ಟಿದೆ, ಇನ್ನಷ್ಟು ಕೊಡಲಿದೆ ಎಂದು ಉಡುಪಿ ನಗರದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಹಿಂದೂ ಸಂಘಟನೆಗಳಿಂದ ಸಿದ್ದರಾಮಯ್ಯಗೆ ಜೀವ ಬೆದರಿಕೆ ಇದೆ ಎಂದು ಸಿದ್ದರಾಮಯ್ಯ ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Fri, 19 August 22