AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಪರಿಷತ್ ಚುನಾವಣೆ: ಆಕ್ಸಿಜನ್ ಜೊತೆಗೆ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ

3 ತಿಂಗಳ ಹಿಂದೆ ಕೊವಿಡ್ ಪಾಸಿಟಿವ್ ಆಗಿ ಚಿಕಿತ್ಸೆ ಪಡೆದಿದ್ದರು. ಕೊವಿಡ್​ನಿಂದ ಗೆದ್ದು ಬಂದರೂ ಅನಾರೋಗ್ಯ ಇವರನ್ನು ಕಾಡುತ್ತಿತ್ತು. ಹೀಗಾಗಿ, ಅನ್ಸರ್ ಅಹ್ಮದ್ ಆಕ್ಸಿಜನ್ ನೆರವಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ.

ಮೈಸೂರು ಪರಿಷತ್ ಚುನಾವಣೆ: ಆಕ್ಸಿಜನ್ ಜೊತೆಗೆ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ
ಸಾಂದರ್ಭಿಕ ಚಿತ್ರ
TV9 Web
| Updated By: preethi shettigar|

Updated on:Dec 11, 2021 | 7:58 AM

Share

ಮೈಸೂರು: ಮೈಸೂರು ಚಾಮರಾಜ ನಗರ ಪರಿಷತ್ ಚುನಾವಣೆ ಮತದಾನಕ್ಕೆ ಗ್ರಾಮ ಪಂಚಾಯತ್ ಸದಸ್ಯ ಒಬ್ಬರು ಆಕ್ಸಿಜನ್ ಜೊತೆಗೆ ಮತಗಟ್ಟೆಗೆ ಬಂದ ಘಟನೆ ನಡೆದಿದೆ. ಕುಸಿದು ಬಿದ್ದರೂ ಲೆಕ್ಕಿಸದೆ ಹಕ್ಕು ಚಲಾವಣೆ ಮಾಡಿದ್ದಾರೆ. ನಂಜನಗೂಡು ತಾಲೂಕು ಹುಲ್ಲಹಳ್ಳಿ ಗ್ರಾಮ ಪಂಚಾಯತ್ ಮತಗಟ್ಟೆಯಲ್ಲಿ ಘಟನೆ ನಡೆದಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸದಸ್ಯ ಅನ್ಸರ್ ಅಹಮದ್ ಮತ ಚಲಾಯಿಸಿದ್ದಾರೆ.

3 ತಿಂಗಳ ಹಿಂದೆ ಕೊವಿಡ್ ಪಾಸಿಟಿವ್ ಆಗಿ ಚಿಕಿತ್ಸೆ ಪಡೆದಿದ್ದರು. ಕೊವಿಡ್​ನಿಂದ ಗೆದ್ದು ಬಂದರೂ ಅನಾರೋಗ್ಯ ಇವರನ್ನು ಕಾಡುತ್ತಿತ್ತು. ಹೀಗಾಗಿ, ಅನ್ಸರ್ ಅಹ್ಮದ್ ಆಕ್ಸಿಜನ್ ನೆರವಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಆದರೂ ಮತದಾನದಿಂದ ದೂರ ಉಳಿಯದೆ ಮತಗಟ್ಟೆಗೆ ಆಗಮಿಸಿ ಹಕ್ಕನ್ನು ಚಲಾವಣೆ ಮಾಡಿದ್ದಾರೆ. ಸಹಾಯಕರ ಜೊತೆ ಆಕ್ಸಿಜನ್ ಸಮೇತ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ.

ದಾವಣಗೆರೆ: ಮತದಾನಕ್ಕೆ ಎತ್ತಿನ ಗಾಡಿಯಲ್ಲಿ ಬಂದು ಗಮನ ಸೆಳೆದ ಗ್ರಾಪಂ ಸದಸ್ಯರು ಮತದಾನಕ್ಕೆ ಎತ್ತಿನ ಗಾಡಿಯಲ್ಲಿ ಬಂದು ಗ್ರಾಮ ಪಂಚಾಯತ್ ಸದಸ್ಯರು ಗಮನ ಸೆಳೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಎಂಬಲ್ಲಿ ನಡೆದಿದೆ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ, ಬೆಲೆ ಎರಿಕೆ ಖಂಡಿಸಿ ಎತ್ತಿನ ಗಾಡಿಯಲ್ಲಿ ಬಂದು ಕಾಂಗ್ರೆಸ್ ಬೆಂಬಲಿತ ಸದಸ್ಯತರು ಮತದಾನ ಮಾಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ವಿಧಾನಪರಿಷತ್ ಚುನಾವಣೆ ಹಿನ್ನೆಲೆ; ಟ್ಯಾಕ್ಟರ್ ನಲ್ಲಿ ಮತಘಟ್ಟೆಗೆ ಬಂದು ಹಕ್ಕು ಚಲಾಯಿಸಿದ ರೇಣುಕಾಚಾರ್ಯ  ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಟ್ಯಾಕ್ಟರ್ ನಲ್ಲಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಶಾಸಕ ರೇಣುಕಾಚಾರ್ಯ, ದಾವಣಗೆರೆ ಜಿಲ್ಲೆಯ ಹೊನ್ನಾಳಿ ನಗರದ ಪುರಸಭೆಯಲ್ಲಿರುವ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ಪುರಸಭೆ ಸದಸ್ಯರೊಂದಿಗೆ ಹಿರೇಕಲ್ಮಠ ಹಾಗೂ ನೀಲಕಂಠೇಶ್ವರ ಸ್ವಾಮೀ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ರೇಣುಕಾಚಾರ್ಯ ಬಳಿಕ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಪುರಸಭೆಯ 14 ಜನ ಸದಸ್ಯರೊಂದಿಗೆ ಒಟ್ಟಿಗೆ ತೆರಳಿ ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ; ನಾನೇ ಸಿಎಂ ಆಗುವೆ: ಶಾಮನೂರು ಶಿವಶಂಕರಪ್ಪ

ಇದನ್ನೂ ಓದಿ: ಜೆಡಿಎಸ್ ಅಭ್ಯರ್ಥಿಗೆ ಮತ ಹಾಕಿದ ಫೋಟೋ ವೈರಲ್, ಗೌಪ್ಯ ಮತದಾನ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ನಾಯಕರ ಆಕ್ರೋಶ

Published On - 5:51 pm, Fri, 10 December 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ