ಎಂಎಲ್ಸಿ ಹೆಚ್ ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ
ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರ ಪುತ್ರ ಪೂರ್ವಜ್ ವಿಶ್ವನಾಥ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

ಮೈಸೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರ ಪುತ್ರ ಪೂರ್ವಜ್ ವಿಶ್ವನಾಥ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ತಗಡೂರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಈ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
ತಂದೆ ಎಚ್ ವಿಶ್ವನಾಥ್ ಅವರಿಗೂ ತಿಳಿಸಿದ್ದೇನೆ. ಅವರು ಅದು ನಿನ್ನ ಇಷ್ಟ ಅಂತಾ ಹೇಳಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ. ಸಿದ್ದರಾಮಯ್ಯ ಅವರು ಮುಂದಿನ ಮುಖ್ಯಮಂತ್ರಿಯಾಗುವರೆಗು ಜೊತೆಯಲ್ಲಿ ನಿಲ್ಲುತ್ತೇನೆ. ಸಿದ್ದರಾಮಯ್ಯನವರು ಮುಂದೆ ಮುಖ್ಯಮಂತ್ರಿ ಆಗುವ ಎಲ್ಲಾ ವಾತಾವರಣ ಇದೆ. ದಾವಣಗೆರೆ ಕಾರ್ಯಕ್ರಮಕ್ಕೂ ನಾನು ಹೋಗಿದ್ದೆ ಎಂದು ತಿಳಿಸಿದರು.




