AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಲ್ಪ ಯಾಮಾರಿದ್ರೆ ಪೊಲೀಸರ ಹೆಣಗಳು ಬೀಳುತ್ತಿದ್ದವು: ಎಫ್​ಐಆರ್​ನಲ್ಲಿ ಸ್ಫೋಟಕ ಅಂಶ ಉಲ್ಲೇಖ

ಸಾಂಸ್ಕೃತಿಕ ನಗರಿ ಮೊನ್ನೆ ರಾತ್ರಿ ಬೆಚ್ಚಿ ಬಿದ್ದಿತ್ತು. ಮೈಸೂರಿನ ಉದಯಗಿರಿ ಪೊಲೀಸ್ ಸ್ಟೇಷನ್ ಮೇಲೆ ಕ್ರಿಮಿಗಳು ಕಲ್ಲು ತೂರಿದ್ದು, ಪೊಲೀಸರ ವಾಹನವನ್ನೂ ಜಖಂಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಲಾಠಿಚಾರ್ಜ್,​ ಅಶ್ರುವಾಯು ಪ್ರಯೋಗ ನಡೆದಿತ್ತು.. ಇದೀಗ ಗಲಾಟೆ ಪ್ರಕರಣ ಸಂಬಂಧ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್​​ಐಆರ್​ನಲ್ಲಿ ಸ್ಫೋಟಕ ಅಂಶವನ್ನು ಉಲ್ಲೇಖಿಸಲಾಗಿದೆ.

ಸ್ವಲ್ಪ ಯಾಮಾರಿದ್ರೆ ಪೊಲೀಸರ ಹೆಣಗಳು ಬೀಳುತ್ತಿದ್ದವು: ಎಫ್​ಐಆರ್​ನಲ್ಲಿ ಸ್ಫೋಟಕ ಅಂಶ ಉಲ್ಲೇಖ
Udayagiri Police Station
ರಾಮ್​, ಮೈಸೂರು
| Edited By: |

Updated on: Feb 13, 2025 | 7:41 AM

Share

ಮೈಸೂರು, (ಫೆಬ್ರವರಿ 13): ಮೈಸೂರಿನ ಉದಯಗಿರಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಫೆಬ್ರವರಿ 9ರಂದು ರಾತ್ರಿ ನಡೆದಿದ್ದ ಗಲಭೆ ಭಯದ ವಾತಾವರಣ ನಿರ್ಮಿಸಿ ಬಿಟ್ಟಿದೆ.. ಈ ಮಧ್ಯೆ ಕಲ್ಲು ಎಸೆದು ದುಷ್ಕೃತ್ಯ ಮೆರೆದ ಆರೋಪಿಗಳ ಹೆಡೆಮುರಿ ಕಟ್ಟಲಾಗಿದೆ. ಗಲಭೆಯಲ್ಲಿ 1 ಸಾವಿರಕ್ಕೂ ಹೆಚ್ಚು ಜನ ಇದ್ದರು ಎಂದು ಪೊಲೀಸರು ತಿಳಿಸಿದ್ದು, ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ಸಂಬಂಧ ಈಗಾಗಲೇ ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಇನ್ನು ಸ್ವಲ್ಪ ಯಾಮಾರಿದ್ದರೂ ಪೊಲೀಸರ ಹೆಣಗಳು ಬೀಳುತ್ತಿದ್ದವು ಎಂದು ಎಫ್​ಐಆರ್​ನಲ್ಲಿ ಉಲ್ಲೆಖವಾಗಿದೆ.

ಅಕ್ರಮವಾಗಿ ಗುಂಪು ಕಟ್ಟಿಕೊಂಡು ಸರ್ಕಾರದ ಆಸ್ತಿ ಪಾಸ್ತಿಗೆ ಹಾನಿ, ಪೊಲೀಸ್ ಇಲಾಖೆಗೆ ಸಂಬಂದಿಸಿದ ವಾಹನಗಳಿಗೆ ಹಾನಿ, ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿದ್ದಾರೆ. ಇದರಿಂದ ಪೊಲೀಸರ ಸಾವು ಸಂಭವಿಸಬಹುದು ಎಂದು ತಿಳಿದು ಕಲ್ಲು ತೂರಾಟ ಮಾಡಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಮುಸ್ಲಿಂ ಯುವಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಉದಯಗಿರಿ ಪೊಲೀಸ್ ಠಾಣಾ ಪಿಎಸ್ಐ ಸುನೀಲ್ ಸಿ.ಎನ್ ಅವರು ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಉದಯಗಿರಿ ಗಲಭೆಗೆ ಕಾರಣವಾಯ್ತಾ ಮುಷ್ತಾಕ್​ನ ಪ್ರಚೋದನಾಕಾರಿ ಹೇಳಿಕೆ?

ಆರೋಪಿಗಳ ಬೇಟೆಯಾಡಲು ಸಿಸಿಬಿ ಪೊಲೀಸರು ಫೀಲ್ಡ್‌ಗಿಳಿದಿದ್ದು. ಕಲ್ಲು ತೂರಿದ್ದ 60ಕ್ಕೂ ಹೆಚ್ಚು ಜನರ ಗುರುತು ಪತ್ತೆ ಹಚ್ಚಿದ್ದಾರೆ. ಲಿಸ್ಟ್ ರೆಡಿ ಮಾಡಿಕೊಂಡು ಮೊಬೈಲ್ ಟವರ್ ಆಧಾರದ ಮೇಲೆ ಮೊನ್ನೆ ರಾತ್ರಿ ಮನೆಗಳ ಮೇಲೆ ದಾಳಿ ನಡೆಸಿದ್ರು. ಆದ್ರೆ, ಮೊಬೈಲ್ ಬಿಟ್ಟು ಪರಾರಿಯಾಗಿದ್ದ ಆರೋಪಿಗಳು, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದರು. ಆದರೂ. ಸಿಸಿಕ್ಯಾಮರಾ, ಡಿವಿಎರ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ ಪೊಲೀಸರು, ಆರೋಪಿಗಳನ್ನ ಬಂಧಿಸಿದ್ದಾರೆ. ಇನ್ನು, ಗಲಾಟೆಗೆ ಮುಫ್ತಿ ಮುಷ್ತಾಕ್ ಮಕ್ಬೋಲಿಯ ಭಾಷಣವೇ ಕಾರಣವಾಯ್ತಾ ಎಂಬ ಶಂಕೆ ವ್ಯಕ್ತವಾಗಿದ್ದು, ಇದೀಗ ಪರಾರಿಯಾಗಿರುವ ಮುಸ್ತಾಕ್ ಪತ್ತೆಗೆ ಸಿಸಿಬಿ ಪೊಲೀಸrಉ ಹುಡುಕಾಟ ನಡೆಸಿದ್ದಾರೆ.

ಉದಯಗಿರಿಯಲ್ಲಿ ಏನಾಗಿತ್ತು?

ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಯುವಕನೋರ್ವ ಸಂಸದ ರಾಹುಲ್ ಗಾಂಧಿ, ಮಾಜಿ ಸಿಎಂಗಳಾದ ಅಖಿಲೇಶ್ ಯಾದವ್ ಹಾಗೂ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರವನ್ನು ವ್ಯಂಗ್ಯವಾಗಿ ಹಾಕಿದ್ದನು. ಯುವಕ ವ್ಯಂಗ್ಯವಾಗಿ ಪೋಸ್ಟ್‌ ಮಾತ್ರ ಹಾಕದೆ ಒಂದು ಧರ್ಮಕ್ಕೆ ಅವಮಾನ ಮಾಡುವ ರೀತಿ ವಾಕ್ಯಗಳನ್ನು ಬರೆದಿದ್ದನು. ಇದು ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More