Mysuru: ಟಿ.ನರಸೀಪುರದಲ್ಲಿ ಆಟೋ ಪಲ್ಟಿ, 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಮೈಸೂರು ಜಿಲ್ಲೆಯಲ್ಲಿ ಆಟೋ ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ನಡೆದಿದೆ. ಲಾರಿ ಬಸ್​ ನಡುವೆ ಡಿಕ್ಕಿಯಾಗಿ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ.

Mysuru: ಟಿ.ನರಸೀಪುರದಲ್ಲಿ ಆಟೋ ಪಲ್ಟಿ, 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಟಿ.ನರಸೀಪುರದಲ್ಲಿ ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Updated on: Jun 26, 2023 | 2:44 PM

ಮೈಸೂರು: ಆಟೋ ಪಲ್ಟಿಯಾಗಿ (Auto Overturn) 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯಗಳಾದ ಘಟನೆ ಜಿಲ್ಲೆಯು ಟಿ.ನರಸೀಪುರ (T Narasipura) ತಾಲೂಕಿನ ಆಲಗೂಡು ಗ್ರಾಮದ ಬಳಿ ನಡೆದಿದೆ. ಟಿ ನರಸೀಪುರದ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಎಸ್ಎಸ್​​ಎಲ್​ಸಿ ವಿದ್ಯಾರ್ಥಿಗಳು ಆಪೇ ಆಟೋದಲ್ಲಿ ಹೋಗುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಆಟೋ ಪಲ್ಟಿಯಾಗಿದೆ. ಗಾಯಾಳು ವಿದ್ಯಾರ್ಥಿಗಳಿಗೆ ಟಿ.ನರಸೀಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಮೂವರು ವಿದ್ಯಾರ್ಥಿಗಳಿಗೆ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ-ಬಸ್ ಡಿಕ್ಕಿ, ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಲಾರಿ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಪ್ರಯಾಣಿಕರು ಗಾಯಗೊಂಡ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆಯ ಗಣಪತಿ ದೇಗುಲ ಬಳಿ ನಡೆದಿದೆ. ಶೃಂಗೇರಿ ಪಟ್ಟಣದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್​ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಮಂಜು, ಮಳೆಗೆ ಪಲ್ಟಿಯಾದ ಪಿಕಪ್

ಚಿಕ್ಕಮಗಳೂರು: ದಟ್ಟ ಮಂಜು ಮತ್ತು ತುಂತುರು ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಆಲೇಖಾನ್ ಗ್ರಾಮದ ಬಳಿ ನಡೆದಿದೆ. ರಸ್ತೆಗೆ ಅಡ್ಡಲಾಗಿ ಪಿಕರ್ ವಾಹನ ಬಿದ್ದಿದ್ದು, ಇದರಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ