ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ 114 ಮಂದಿ ಅಸ್ವಸ್ಥ, ಮೂವರಿಗೆ ಕಾಲರ

ಕೆ.ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಯುವಕ ಸಾವನ್ನಪ್ಪಿ ಹಲವರು ಅಸ್ವಸ್ಥಗೊಂಡ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ತಗಡೂರು ಗ್ರಾಮದಲ್ಲಿ ಕಾಲರ ಖಾಯಿಲೆ ಪತ್ತೆಯಾಗಿದೆ. ತಗಡೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಗ್ರಾಮದಲ್ಲಿ 3 ಮಂದಿಗೆ ಕಾಲರ ಕಾಣಿಸಿಕೊಂಡಿದೆ. ಗ್ರಾಮದ 25 ಪುಟ್ಟ ಮಕ್ಕಳು ಸೇರಿ‌ 114 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ 114 ಮಂದಿ ಅಸ್ವಸ್ಥ, ಮೂವರಿಗೆ ಕಾಲರ
ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಗ್ರಾಮಕ್ಕೆ ಭೇಟಿ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: May 23, 2024 | 7:49 AM

ಮೈಸೂರು, ಮೇ.23: ಕಲುಷಿತ ನೀರು (Contaminated Water) ಸೇವಿಸಿ ಕೆ.ಸಾಲುಂಡಿಯಲ್ಲಿ ಓರ್ವ ಯುವಕ ಮೃತಪಟ್ಟು, 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಪ್ರಕರಣ ಬೆನ್ನಲ್ಲೆ ಮತ್ತೊಂದು ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿನಿಧಿಸುವ ವರುಣಾ ಕ್ಷೇತ್ರದ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಾಗಿ 114 ಮಂದಿ ಅಸ್ವಸ್ಥರಾಗಿದ್ದಾರೆ. 94 ಮಂದಿಗೆ ಚಿಕಿತ್ಸೆ ಮುಂದುವರೆದಿದೆ. 114 ಜನರ ಪೈಕಿ ಮೂವರಲ್ಲಿ ಕಾಲರ ರೋಗ ಪತ್ತೆಯಾಗಿದೆ. ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಗ್ರಾಮಸ್ಥರಿಗೆ ಧೈರ್ಯ ತುಂಬಿ, ಸೂಕ್ತ ವ್ಯವಸ್ಥೆ ಬಗ್ಗೆ ಭರವಸೆ ನೀಡಿದ್ದಾರೆ.

ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಗ್ರಾಮಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ದೂರವಾಣಿ ಮೂಲಕ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀತಿ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ರು. ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಬಂದಿದ್ದೇನೆ. ಮಳೆಗಾಲ ಇನ್ನು ಕಡಿಮೆಯಾಗಿಲ್ಲ. ಕೂಡಲೇ ಅಧಿಕಾರಿಗಳು ಗ್ರಾಮದ ಎಲ್ಲಾ ಚರಂಡಿಗಳನ್ನು ಸ್ವಚ್ಛಗೊಳಿಸಿ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಬೇಕು. ಗ್ರಾಮಸ್ಥರಿಗೆ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಬೇಕು. ಸ್ಥಗಿತಗೊಂಡಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರನ್ನು ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಬಳಿಕ ಬಿಬಿಎಂಪಿ ಎಲೆಕ್ಷನ್? ಡಿಕೆ ಶಿವಕುಮಾರ್ ಆ ಸೂಚನೆಯಿಂದ ಮೂಡಿತು ಕುತೂಹಲ

ಈಗಾಗಲೇ ಮೂರು ಟ್ಯಾಂಕರ್​ಗಳಿಂದ ಶುದ್ಧ ಕುಡಿಯುವ ನೀರನ್ನು ಗ್ರಾಮಕ್ಕೆ ಸರಬರಾಜು ಮಾಡಲಾಗುತ್ತಿದೆ. ಗ್ರಾಮಸ್ಥರಿಗೆ ಆರೋಗ್ಯ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಡಾ ಎಚ್ ಸಿ ಮಹದೇವಪ್ಪ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಸಭೆಯಲ್ಲಿ ಜಿಪಂ ಸಿಇಒ ಗಾಯಿತ್ರಿ, ತಹಶೀಲ್ದಾರ್ ಶಿವಕುಮಾರ್ ಸೇರಿ ಹಲವರು ಭಾಗಿಯಾಗಿದ್ದಾರೆ.

ಮತ್ತೊಂದೆಡೆ ಕಾಲರ ಪತ್ತೆಯಾಗಿರೋ ಹಿನ್ನಲೆ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಅಲಾರ್ಟ್ ಆಗಿದೆ. ಇಡೀ ಗ್ರಾಮಸ್ಥರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಲು ಮುಂದಾಗಿದ್ದು, ತೀವ್ರ ಅಸ್ವಸ್ಥರಾದವರನ್ನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್