Crime News: ಖಿನ್ನತೆಗೆ ಒಳಗಾಗಿ ಬೆಂಕಿ ಹಚ್ಚಿಕೊಂಡು 8 ತಿಂಗಳ ಮಗು ಸಮೇತ ತಾಯಿ ಆತ್ಮಹತ್ಯೆ

4 ಭಾರಿ ಗರ್ಭಪಾತವಾದ ಬಳಿಕ ಗಂಡು ಮಗುವಿಗೆ ಸಿಂಧು ಜನ್ಮ ನೀಡಿದ್ದಳು. ಗಂಡು ಮಗುವಿನ ಜನ್ಮ ನೀಡಿದ ಬಳಿಕ ಸಿಂಧು ಖಿನ್ನತೆಗೆ ಒಳಗಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Crime News: ಖಿನ್ನತೆಗೆ ಒಳಗಾಗಿ ಬೆಂಕಿ ಹಚ್ಚಿಕೊಂಡು 8 ತಿಂಗಳ ಮಗು ಸಮೇತ ತಾಯಿ ಆತ್ಮಹತ್ಯೆ
ಮಗು ಮತ್ತು ತಾಯಿ ಸಿಂಧು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jun 01, 2022 | 8:12 AM

ಮೈಸೂರು: ಮಾನಸಿಕ ಖಿನ್ನತೆಗೆ ಒಳಗಾಗಿ 8 ತಿಂಗಳ ಮಗುವಿಗೆ ಬೆಂಕಿ ಹಚ್ಚಿ ತಾನು ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಅಮಾನವೀಯ ಘಟನೆ ಜಿಲ್ಲೆಯ ನಂಜನಗೂಡು ತಾಳೂಕಿನ ದಾಸನೂರು ಗ್ರಾಮದಲ್ಲಿ ನಡೆದಿದೆ. ಖಿನ್ನತೆಗೆ ಒಳಗಾಗಿದ್ದ ತಾಯಿ ಸಿಂಧು(24) ಮನೆಯಲ್ಲಿ ಯಾರೂ ಇಲ್ಲದ ವೇಳೆ, ಮೊದಲು ತನ್ನ 8 ತಿಂಗಳ ಮಗುವಿಗೆ ಬೆಂಕಿ ಹಚ್ಚಿ ಬಳಿಕ ತಾನು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಕೊಂಡಿದ್ದಾಳೆ. ಚಾಮರಾಜನಗರ ಮೂಲದ ಸಿಂಧು, 9 ವರ್ಷಗಳ ಹಿಂದೆ ದಾಸನೂರಿನ ಮಹದೇವಸ್ವಾಮಿ ಜತೆ ಮದುವೆ ಆಗಿದ್ದರು. 4 ಭಾರಿ ಗರ್ಭಪಾತವಾದ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಗಂಡು ಮಗುವಿನ ಜನ್ಮ ನೀಡಿದ ಬಳಿಕ ಸಿಂಧು ಖಿನ್ನತೆಗೆ ಒಳಗಾಗಿದ್ದಳು. ತಾಯಿ ಮಗುವನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ 8 ತಿಂಗಳ ಮಗು, ತಾಯಿ ಸಿಂಧು ಸಾವನ್ನಪ್ಪಿದ್ದಾರೆ. ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ದಕ್ಷಿಣ ಯಮಸ್ಥಾನಂ! ಶಿವನು ದಕ್ಷಿಣಾಮೂರ್ತಿಯಾಗಿ ಈ ಏಳು ಸಪ್ತರ್ಷಿಗಳಿಗೆ ಜ್ಞಾನಾರ್ಜನೆ ಮಾಡಿದ ಏಕೆ ಗೊತ್ತಾ?

ಮಹಿಳೆ ಅನುಮಾನಸ್ಪದ ಸಾವು: 

ನಗರದಲ್ಲಿ ಮಹಿಳೆ ಓರ್ವ ಅನುಮಾನಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ಹೆಚ್​ಡಿ ಕೋಟೆ ಶಿವಾಜಿ ರಸ್ತೆಯ ನಿವಾಸಿದಲ್ಲಿ ನಡೆದಿದೆ. ಶೋಭಾ (40) ಮೃತ ದುರ್ದೈವಿ. ನೇಣು ಬಿಗಿದ ಸ್ಥಿತಿಯಲ್ಲಿ ಶೋಭಾ ಶವ ಪತ್ತೆಯಾಗಿದೆ. ಪತಿಯಿಂದ ದೂರವಾಗಿದ್ದ ಶೋಭಾ, ಮಂಜುನಾಥ್ ಎಂಬಾತನೊಂದಿಗೆ ಲಿವಿಂಗ್ ಟುಗೆದರ್​ನಲ್ಲಿದ್ದಳು. ಶೋಭಾ ಸಾವಿಗೆ ಮಂಜುನಾಥ್ ಕಾರಣ ಎಂದು ಶೋಭಾ ಪೋಷಕರು ಆರೋಪ ಮಾಡಿದ್ದಾರೆ. ಹೆಚ್​ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಪಾರ್ಕ್ ನಲ್ಲಿ ವೃದ್ದೆಯ ಸರ ಕಸಿದು ಪರಾರಿ

ಪಾರ್ಕ್​​ನಲ್ಲಿ ವೃದ್ದೆಯ ಸರ ಕಸಿದು ಖದೀಮರು ಪರಾರಿಯಾಗಿರುವಂತಹ ಘಟನೆ ವಿಜಯನಗರ ನಾಲ್ಕನೆ ಹಂತದ ಪಾರ್ಕ್​ನಲ್ಲಿ ನಡೆದಿದೆ. ವಾಕ್​ಗೆ ವೃದ್ದ ಮಹಿಳೆ ಬಂದಿದ್ದು, ಬೈಕ್​ನಲ್ಲಿ ಬಂದ ಸರಗಳ್ಳ ಇಬ್ಬರಿಂದ ಕೃತ್ಯವೆಸಗಲಾಗಿದೆ. ಮಾಸ್ಕ್ ಹಾಕಿಕೊಂಡು ಬಂದು ಸರಗಳ್ಳತನ ಮಾಡಿದ್ದು, ಆರೋಪಿಗಳ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:54 am, Wed, 1 June 22

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್