ಟಿಪ್ಪು ಎಕ್ಸ್‌ಪ್ರೆಸ್‌ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಹೆಸರಿಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ

| Updated By: ganapathi bhat

Updated on: Feb 11, 2022 | 5:43 PM

ದೆಹಲಿಯಲ್ಲಿ ಅಶ್ವಿನಿ ವೈಷ್ಣವ್ ಭೇಟಿಯಾಗಿ ಸಂಸದರಿಂದ ಲಿಖಿತ ಮನವಿ ಸಲ್ಲಿಕೆ ಮಾಡಲಾಗಿದೆ. ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಕೊಡುಗೆ ಬಹಳಷ್ಟು ಇದೆ. ಹೀಗಾಗಿ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಹೆಸರಿಡಲು ಒತ್ತಾಯ ಮಾಡಲಾಗಿದೆ.

ಟಿಪ್ಪು ಎಕ್ಸ್‌ಪ್ರೆಸ್‌ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಹೆಸರಿಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ
ಸಂಸದ ಪ್ರತಾಪ ಸಿಂಹ
Follow us on

ಮೈಸೂರು: ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸುವಂತೆ ಒತ್ತಾಯ ಕೇಳಿಬಂದಿದೆ. ಟಿಪ್ಪು ಎಕ್ಸ್​ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ಹೆಸರಿಡುವಂತೆ ಮನವಿ ಮಾಡಲಾಗಿದೆ. ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ‌ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಭೇಟಿಯಾಗಿ ಸಂಸದರಿಂದ ಲಿಖಿತ ಮನವಿ ಸಲ್ಲಿಕೆ ಮಾಡಲಾಗಿದೆ. ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಕೊಡುಗೆ ಬಹಳಷ್ಟು ಇದೆ. ಹೀಗಾಗಿ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಹೆಸರಿಡಲು ಒತ್ತಾಯ ಮಾಡಲಾಗಿದೆ.

ಇದಕ್ಕೂ ಮೊದಲು, ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha), ಸಿದ್ದರಾಮಯ್ಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಡಿ. ಬೇಕಾದರೆ ಸಿದ್ದರಾಮಯ್ಯರವರು ಹೆಸರು ಬದಲಿಸಿಕೊಳ್ಳುತ್ತಾರೆ. ಸಿದ್ದ ರಹೀಮ್ ಅಯ್ಯ ಅಂತಾ ಹೆಸರು ಬದಲಿಸಿಕೊಳ್ಳುತ್ತಾರೆ. ಚಾಮರಾಜಪೇಟೆಯಲ್ಲಿ ಸ್ಪರ್ಧಿಸುವಂತೆ ಜಮೀರ್ ಹೇಳುತ್ತಿದ್ದಾರೆ. ಅಧಿಕಾರಕ್ಕಾಗಿ ಸಿದ್ದರಾಮಯ್ಯರವರು ಈ ರೀತಿ ಹೇಳುತ್ತಿದ್ದಾರೆ ಅಂತ ತಿಳಿಸಿದ್ದರು.

ಎಲ್ಲಾ ರೀತಿಯ ಒತ್ತಡ, ಟೀಕಾ ಪ್ರಹಾರದ ನಡುವೆಯೂ ಸಮವಸ್ತ್ರ ಕಡ್ಡಾಯಕ್ಕೆ ಸರಕಾರ ಬದ್ಧವಾಗಿರುವುದು ಒಳ್ಳೆಯ ಸಂದೇಶ ಎಂದು ಮಾತನಾಡಿದ್ದ ಸಂಸದ ಪ್ರತಾಪ್ ಸಿಂಹ, ಹಿಜಾಬ್​ಗಾಗಿ ಇಷ್ಟು ಹಠ ಹಿಡಿದು ಏಕೆ ವಿದ್ಯಾರ್ಥಿಗಳು ಕೂತಿದ್ದಾರೆ. ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ. ಅದು ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಉಡುಪು. ಎಲ್ಲರು ಕಾಲೇಜಿಗೆ ಜಾಬ್​ಗಾಗಿ ಬರುತ್ತಾರೆ. ನೀವು ಹಿಜಾಬ್ಗಾಗಿ ಬರುತ್ತೀದ್ದೀರಾ? ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಾಸಗೆ ಹೋಗಿ. ಮದರಸದಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿ ಕೊಳ್ಳಬಹುದು ಅಂತ ಹೇಳಿದ್ದರು.

ಸರಕಾರಿ ಶಾಲೆಗಳಲ್ಲಿ ಈ ಪ್ರತ್ಯೇಕತೆ ಸಾಧ್ಯವಿಲ್ಲ. ಇದು ಬ್ರಿಟಿಷರ ಭಾರತವಲ್ಲ ಇದು ಭರತ ಖಂಡ. ಹಿಂದೂ ಧರ್ಮದ ಬುನಾದಿ ಮೇಲೆ ಇರುವ ದೇಶವಿದು. ಇಲ್ಲಿ ಗಣಪತಿ ಪೂಜೆ, ಹೆಣ್ಣು ಮಕ್ಕಳ ಕುಂಕುಮ ಸಂಸ್ಕೃತಿಯ ಭಾಗ. ಇದನ್ನು ಯಾರು ಪ್ರಶ್ನಿಸುವಂತಿಲ್ಲ. ಇಸ್ಲಾಂ, ಕ್ರಿಶ್ಚಿಯನ್ ಮರುಭೂಮಿಯಲ್ಲಿ ಹುಟ್ಟಿ ನೆಲೆಗಾಗಿ ಹುಡುಕಿಕೊಂಡು ಇಲ್ಲಿಗೆ ಬಂದಿವೆ. ಇಲ್ಲಿಗೆ ಬಂದ ಮೇಲೆ ಹಿಂದೂ ಸಂಸ್ಕೃತಿಯನ್ನು ಒಪ್ಪಿಕೊಳ್ಳಬೇಕು. ಕ್ರಿಶ್ಚಿಯನ್, ಇಸ್ಲಾಂ ಧರ್ಮದ ಏರಿಕೆ ಇಲ್ಲಿ ನಡೆಯುವುದಿಲ್ಲ. ಈ ನೆಲದ ಸಂಸ್ಕೃತಿಯನ್ನು ಕ್ರಿಶ್ಚಿಯನ್, ಇಸ್ಲಾಂ ಧರ್ಮಗಳು ಒಪ್ಪಿಕೊಳ್ಳಬೇಕು ಅಂತ ಪ್ರತಾಪ್ ಸಿಂಹ ಹೇಳಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಸಿದ್ದ ರಹೀಮ್ ಅಯ್ಯ ಅಂತಾ ಹೆಸರು ಬದಲಿಸಿಕೊಳ್ಳುತ್ತಾರೆ; ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆ

ಇದನ್ನೂ ಓದಿ: Pratap Simha: ಗ್ಯಾಸ್ ಪೈಪ್​ಲೈನ್ ಸಂಪರ್ಕ ಏರ್ಪಟ್ಟರೆ ಜನರಿಗೆ ₹ 400 ಉಳಿತಾಯವಾಗಲಿದೆ: ಸಂಸದ ಪ್ರತಾಪ್ ಸಿಂಹ ಮಾಹಿತಿ

Published On - 5:26 pm, Fri, 11 February 22