ಚಾಮುಂಡಿ ಬೆಟ್ಟಕ್ಕೆ ಭಕ್ತರು ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಅಭಿಯಾನ: ಸಂಸದ ಪ್ರತಾಪ್ ಸಿಂಹ ಬೆಂಬಲ

Chamundi Hills: ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತಾದಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸಾರ್ವಜನಿಕರು ಅಭಿಯಾನ ಪ್ರಾರಂಭಿಸಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಭಕ್ತರು ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಅಭಿಯಾನ: ಸಂಸದ ಪ್ರತಾಪ್ ಸಿಂಹ ಬೆಂಬಲ
ಸಂಸದ ಪ್ರತಾಪ್​ ಸಿಂಹ
Follow us
TV9 Web
| Updated By: Digi Tech Desk

Updated on:Dec 27, 2022 | 3:32 PM

ಮೈಸೂರು: ಈ ಹಿಂದೆ (ಡಿ.13) ರಂದು ಮುರುಡೇಶ್ವರ ದೇವಸ್ಥಾನದ ಪಾವಿತ್ರತೆಯ ದೃಷ್ಟಿಯಿಂದ ದೇವಸ್ಥಾನ (Murudeshwar Temple) ದಲ್ಲಿ ವಸ್ತ್ರ ಸಂಹಿತೆ (Dress Code) ನೀತಿ ಜಾರಿ ಮಾಡುವಂತೆ ಹಿಂದೂ ಪರ ಸಂಘಟನೆಗಳು ಮನವಿ ಮಾಡಿದ್ದವು. ಇದೇ ರೀತಿ ಈಗ ನಾಡದೇವತೆ, ಮೈಸೂರಿನ (Mysore) ಪ್ರಸಿದ್ಧ ದೇವಸ್ಥಾನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ (Chamundeshwari Temple) ಬರುವ ಭಕ್ತಾದಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸಾರ್ವಜನಿಕರು ಅಭಿಯಾನ ಪ್ರಾರಂಭಿಸಿದ್ದಾರೆ. ಈ ಅಭಿಯಾನಕ್ಕೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ (Pratap Simha) ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ವಸ್ತ್ರ ಸಂಹಿತೆ ನಿಗದಿ ಮಾಡುವ ಬಗ್ಗೆ ಸಾರ್ವಜನಿಕರು ನನ್ನ ಗಮನಕ್ಕೂ ತಂದಿದ್ದರು. ಕೆಲವು ವೇಳೆ ಬೆಟ್ಟಕ್ಕೆ ಬರುವವರು ಬೇರೆ ಬೇರೆ ವಸ್ತ್ರಗಳನ್ನು ಧರಿಸಿ ಬರುವುದನ್ನು ನೋಡಿದ್ದೇವೆ. ಕೇರಳದಲ್ಲಿ ಯಾವುದೇ ದೇವಸ್ಥಾನಕ್ಕೆ ಹೋದರೂ ಪುರುಷ ಹಾಗೂ ಮಹಿಳಾ ಭಕ್ತರಿಗೆ ನಿಗದಿತ ಡ್ರೆಸ್ ಕೊಡ್ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮನೆಗಳಲ್ಲಿ ಆಯುಧಗಳನ್ನಿಟ್ಟುಕೊಳ್ಳಿ ಎಂಬ ಪ್ರಜ್ಞಾ ಠಾಕೂರ್ ಹೇಳಿಕೆಗೆ  2 ದೂರು ದಾಖಲು

ಅದರಂತೆ ಚಾಮುಂಡಿಬೆಟ್ಟದಲ್ಲೂ ಮಾಡಿ ವಸ್ತ್ರ ಸಂಹಿತೆ ಜಾರಿಗೆ ತರಬೇಕೆಂದು ಹೊರಟಿರುವುದು ಒಳ್ಳೆಯ ಬೆಳವಣಿಗೆ. ದೇವಸ್ಥಾನಕ್ಕೆ ಹೋಗಬೇಕಾದರೆ ಶ್ರದ್ಧಾ ಭಕ್ತಿಯಿಂದ ಹೋಗಬೇಕಾಗುತ್ತದೆ. ಇದಕ್ಕೆ ನನ್ನ ಬೆಂಬಲವೂ ಇದೆ. ಬೆಟ್ಟಕ್ಕೆ ಬರುವ ಭಕ್ತರು ಸೂಕ್ತ ವಸ್ತ್ರ ಧರಿಸಿ ಬರಬೇಕು ಎಂದು ಮನವಿ ಮಾಡಿಕೊಂಡರು.

ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ

ಕಾರವಾರ: ದೇವಸ್ಥಾನದ ಪಾವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ನೀತಿ ಜಾರಿ ಮಾಡುವಂತೆ ಹಿಂದೂ ಪರ ಸಂಘಟನೆಗಳು ಮನವಿ ಮಾಡಿದ್ದವು. ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ನಂತರ ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲಿ ವಸ್ತ್ರ ಸಂಹಿತಿ ನೀತಿ ಜಾರಿಗೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಇದೀಗ ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನಲ್ಲಿರುವ ಮುರುಡೇಶ್ವರ ದೇವಸ್ಥಾನದಲ್ಲೂ ವಸ್ತ್ರ ಸಂಹಿತೆ ನೀತಿ ಜಾರಿ ಮಾಡುವಂತೆ ದೇವಸ್ಥಾನ ಆಡಳಿತ ಮಂಡಳಿಗೆ ಮನವಿ ಮಾಡಿದ್ದವು.

ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದ ಮುರುಡೇಶ್ವರ ದೇವಸ್ಥಾನದ ಪಾವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಸಂಪ್ರದಾಯಿಕ ಉಡುಪು ಕಡ್ಡಾಯ ಮಾಡಬೇಕು. ಪಾಶ್ಚಾತ್ಯ ಉಡುಪು ಧರಿಸಿ ದೇವಸ್ಥಾನಕ್ಕೆ ಬರುವವರಿಗೆ ಒಳ ಪ್ರವೇಶ ನೀಡಬಾರದು. ಭಾರತೀಯ ಸಂಪ್ರದಾಯಿಕ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕೊಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯಿಂದ ಮನವಿ ಸಲ್ಲಿಸಿವೆ.

ಇದನ್ನೂ ಓದಿ:  ಮೈಸೂರಿನ ಉರಗ ಸಂರಕ್ಷಕ ಸ್ನೇಕ್ ಶ್ಯಾಮ್ ಮನೆಯ ಗೋಡೆಯಲ್ಲಿ ಮಹಿಷಾಸುರ, ಕಾಂತಾರ

ಶಿರಸಿ  ಮಾರಿಕಾಂಬಾ ದೇವಸ್ಥಾನದಲ್ಲೂ ವಸ್ತ್ರ ಸಂಹಿತೆ

ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಯ ಬೆನ್ನಲ್ಲೆ ಶಿರಸಿಯ ಮಾರಿಕಾಂಬಾ ದೇವಸ್ಥಾನದಲ್ಲೂ ವಸ್ತ್ರ ಸಂಹಿತಿ ನೀತಿ ಜಾರಿಗೆ ಒತ್ತಾಯ ಕೇಳಿಬಂದಿದ್ದವು. ಉತ್ತರ ಕನ್ನಡ ಜಿಲ್ಲೆ ಶಿರಸಿ ಐತಿಹಾಸಿಕ ಮಾರಿಕಾಂಬಾ ದೇಶವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಹಿಂದೂ ಜನ ಜಾಗೃತಿ ಸಮಿತಿಯಿಂದ ಮನವಿ ಮಾಡಲಾಗಿತ್ತು. ಹಿಂದೂ ಸಂಸ್ಕೃತಿ ಪ್ರಕಾರ ಉಡುಪು ಧರಿಸಿ ದೇವಸ್ಥಾನಕ್ಕೆ ಬರುವುದಕ್ಕೆ ಮಾತ್ರ ಅವಕಾಶ ನೀಡುವಂತೆ ಒತ್ತಾಯಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:05 pm, Tue, 27 December 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್